ಮಹಾರಾಷ್ಟ್ರ: ಕೋವಿಡ್ ಲಸಿಕೆ ಅಭಿಯಾನಕ್ಕೆ ಸಲ್ಮಾನ್ ಖಾನ್
ಮುಂಬೈ: ಮಹಾರಾಷ್ಟ್ರದಲ್ಲಿ ಕೋವಿಡ್ ಲಸಿಕೆ ನೀಡಿಕೆ ವೇಗವನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್‌ರನ್ನು ಕೋವಿಡ್ ಲಸಿಕೆ ರಾಯಭಾರಿಯನ್ನಾಗಿ ಮಾಡಲು ಬುಧವಾರ ನಿರ್ಧಾರ ಮಾಡಿದೆ.
ಈ ಬಗ್ಗೆ ಸುದ್ದಿ ಸಂಸ್ಥೆ ಪಿಟಿಐಗೆ ಮಾಹಿತಿ ನೀಡಿದ ರಾಜ್ಯ ಸಾರ್ವಜನಿಕ ಆರೋಗ್ಯ ಸಚಿವ ರಾಜೇಶ್ ಟೋಪೆ, “ಮುಸ್ಲಿಂ ಸಮುದಾಯವು ಅಧಿಕವಾಗಿ ಇರುವ ಪ್ರದೇಶದಲ್ಲಿ ಕೊರೊನಾ ವೈರಸ್ ವಿರುದ್ಧದ ಲಸಿಕೆಯನ್ನು ಪಡೆಯುವುದರಲ್ಲಿ ಹಿಂಜರಿಕೆಯು ಹೆಚ್ಚಾಗಿ ಕಂಡು ಬರುತ್ತಿದೆ. ಈ ನಿಟ್ಟಿನಲ್ಲಿ ಜನರು ಕೋವಿಡ್ ಲಸಿಕೆಯನ್ನು ಹಾಕಿಸಿಕೊಳ್ಳುವಂತೆ ಮನವೊಲಿಸಲು ಮಹಾರಾಷ್ಟ್ರ ಸರ್ಕಾರವು ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಸಹಾಯವನ್ನು ಪಡೆಯುತ್ತದೆ,” ಎಂದು ಹೇಳಿದ್ದಾರೆ.
“ಮಹಾರಾಷ್ಟ್ರ ಸರ್ಕಾರವು ಕೋವಿಡ್ ಲಸಿಕೆ ನೀಡಿಕೆ ಕಾರ್ಯಕ್ರಮದ ವೇಗವನ್ನು ಇನ್ನಷ್ಟು ಅಧಿಕ ಮಾಡುವ ನಿಟ್ಟಿನಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದೆ. ಈಗಾಗಲೇ ಮಹಾರಾಷ್ಟ್ರದಲ್ಲಿ ಕೋವಿಡ್ ಲಸಿಕೆ ನೀಡಿಕೆ ವೇಗವಾಗಿ ಸಾಗುತ್ತಿದೆ. ಆದರೆ ಕೆಲವು ಕಡೆಗಳಲ್ಲಿ ವೇಗದಲ್ಲಿ ಹಿನ್ನೆಡೆ ಇದೆ,” ಎಂದು ಕೂಡಾ ಮಹಾರಾಷ್ಟ್ರ ಆರೋಗ್ಯ ಸಚಿವರು ತಿಳಿಸಿದರು.
Comments
Post a Comment