ರೈತರು ವಿರೋಧಿಸಿದ ಕೃಷಿ ಕಾನೂನುಗಳನ್ನು ವಾಪಸ್ ಪಡೆದ ಮೋದಿ ಸರ್ಕಾರ
ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರಿಂದ ಸಾಕಷ್ಟು ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಕೇಂದ್ರ ಸರ್ಕಾರ ಇಂದು ವಿವಾದಿತ ಕೃಷಿ ಕಾನೂನುಗಳನ್ನು ವಾಪಸ್ ಪಡೆದಿದೆ.
ಇಂದು ಬೆಳಗ್ಗೆ 9 ಗಂಟೆಗೆ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಹತ್ವದ ಘೋಷಣೆ ಮಾಡಿದರು.
ಕಳೆದ ಒಂದು ವರ್ಷಗಳಿಂದ ರೈತರು ನಿರಂತರವಾಗಿ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸಿಕೊಂಡು ಬಂದಿದ್ದರು. ಕೊನೆಗೂ ರೈತರ ಪ್ರತಿಭಟನೆಗಳಿಗೆ ಮಣಿದಿರುವ ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಹಿಂಪಡೆದಿದೆ. ಯಾವುದೇ ಪ್ರತಿಭಟನೆಗಳು ಮಾಡದಂತೆ ಪ್ರಧಾನಿ ಮೋದಿ ಮನವಿ ಮಾಡಿದರು.
Comments
Post a Comment