ಅದಲು ಬದಲು ಮಗು,ಆಸ್ಪತ್ರೆಯಲ್ಲಿ ಮೃತ ಪಟ್ಟಿದೆ,
ಮಂಗಳೂರು: ನಗರದಲ್ಲಿ ಸಂಚಲನವನ್ನುಂಟು ಮಾಡಿದ್ದ ಲೇಡಿಗೋಶನ್ ಆಸ್ಪತ್ರೆಯಲ್ಲಿ ತಿಂಗಳ ಹಿಂದೆ ನಡೆದ ನವಜಾತ ಶಿಶು ‘ಅದಲು-ಬದಲು’ ಪ್ರಕರಣದ ಕುರಿತು ಕಾನೂನು ಹೋರಾಟ ನಡೆಯುತ್ತಿರುವ ಹಂತದಲ್ಲೇ ಮಗು ಸೋಮವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದೆ.

ಲೇಡಿಗೋಶನ್ ಆಸ್ಪತ್ರೆಯಲ್ಲಿ ಅ.15ರಂದು ಕುಂದಾಪುರ ಮೂಲದ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ್ದರು. ಆದರೆ ಮಗು ಅದಲು-ಬದಲು ಮಾಡಲಾಗಿದೆ, ಹೆಣ್ಣುಮಗು ಎಂದು ಗಂಡುಮಗು ನೀಡಲಾಗಿದೆ ಎಂದು ಮಗುವಿನ ಹೆತ್ತವರು ಆರೋಪಿಸಿದ್ದರು.
ಆಸ್ಪತ್ರೆಯ ಸಿಬ್ಬಂದಿ ಮೊದಲು ಮಗು ಹೆಣ್ಣು ಎಂದು ನಮಗೆ ಹೇಳಿದ್ದರು. ದಾಖಲೆಗಳಲ್ಲಿ ಕೂಡ ಹೆಣ್ಣು ಮಗು ಎಂದೇ ನಮೂದಿಸಿದ್ದರು. ಆದರೆ ನಮಗೆ ಗಂಡು ಮಗುವನ್ನು ಕೊಟ್ಟಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದರು.
ಆ ಹಿನ್ನೆಲೆಯಲ್ಲಿ ಮಗು ಹಾಗೂ ಹೆತ್ತವರ ಡಿಎನ್‌ಎ ಪರೀಕ್ಷೆ ನಡೆಸಿ ಮಾದರಿಯನ್ನು ಹೈದರಾಬಾದಿಗೆ ಕಳುಹಿಸಿಕೊಡಲಾಗಿತ್ತು. ಆದರೆ ವರದಿ ಬರುವ ಮುನ್ನವೇ ಮಗು ಮೃತಪಟ್ಟಿದೆ. ಉಸಿರಾಟದ ತೊಂದರೆಯಿಂದ ಮಗು ಮೃತಪಟ್ಟಿದೆ ಎಂದು ಹೇಳಲಾಗುತ್ತಿದೆ.
Comments
Post a Comment