ಬಾಳೆಹೊನ್ನೂರು ಸಮೀಪ ಭೀಕರ ಅಪಘಾತ,ಸ್ಥಳದಲ್ಲಿ ಓರ್ವ ಮೃತ್ಯು,
ವರದಿ:- ವೀರಮಣಿ ಬಾಳೆಹೊನ್ನೂರ್:- ಸೀಗೊಡು ಸಮೀಪ ಭೀಕರ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ ಒಬ್ಬರು ಮೃತಪಟ್ಟಿದ್ದಾರೆ . ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಸಮೀಪದ ಇಟ್ಟಿಗೆ ಸೀಗೋಡಿನಲ್ಲಿ ಈ ದುರ್ಘಟನೆ ಸಂಭವಿಸಿದ್ದು ಶೃಂಗೇರಿಯಿಂದ ಚಿಕ್ಕಮಗಳೂರು ಕಡೆಗೆ ತೆರಳುತ್ತಿದ್ದ ಟಾಟಾ ನೆಕ್ಸಾನ್ ವಾಹನವೊಂದು ರಭಸವಾಗಿ ಮರಕ್ಕೆ ಗುದ್ದಿದ ಪರಿಣಾಮ ಈ ಅಪಘಾತ ಸಂಭವಿಸಿದೆ . ಬೆಂಗಳೂರು ಮೂಲದ ವಾಹನ ಇದಾಗಿದೆ ಎಂದು ತಿಳಿದುಬಂದಿದೆ . ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ಐದು ಜನರಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಹಾಗೂ ಇನ್ನೋರ್ವ ವ್ಯಕ್ತಿಯ ಸ್ಥಿತಿ ಬಹಳ ಗಂಭೀರವಾಗಿದ್ದು ಕಾರಿನಲ್ಲಿದ್ದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ . ಘಟನಾ ಸ್ಥಳಕ್ಕೆ ಕೂಡಲೇ ಸ್ಥಳೀಯರು ಧಾವಿಸಿ ವಾಹನದಲ್ಲಿದ್ದವರನ್ನು ಆಸ್ಪತ್ರೆಗೆ ದಾಖಲು ಮಾಡಲು ಸಹಕರಿಸಿದ್ದಾರೆ . ಓರ್ವನ ಸ್ಥಿತಿ ಗಂಭೀರವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ ಹಾಗೂ ಉಳಿದ ಗಾಯಾಳುಗಳನ್ನು ಬಾಳೆಹೊನ್ನೂರು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ .