ಸೇನಾ ಹೆಲಿಕಾಪ್ಟರ್ ಪತನ,ಮುಖ್ಯಸ್ಥ ಬಿ ಪಿ ಎನ್ ರಾವತ್ ಸೇರಿ 14 ಜನರಿದ್ದರು,
ಚೆನ್ನೈ : ಸೇನೆಯ ಹಿರಿಯ ಅಧಿಕಾರಿಗಳನ್ನು ಹೊತ್ತೊಯ್ಯುತ್ತಿದ್ದ ಸೇನಾ ಹೆಲಿಕಾಪ್ಟರ್ ಎಂಐ -17 ವಿ 5 ತಮಿಳು ನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಹತ್ತಿರ ಅಪಘಾತಕ್ಕೀಡಾಗಿದೆ ಎಂದು ತಿಳಿದುಬಂದಿದೆ . ಸೂಲೂರಿನ ಭಾರತೀಯ ವಾಯುಪಡೆ ನೆಲೆಯಿಂದ ಸೇನಾ ವಿಮಾನ ವೆಲ್ಲಿಂಗ್ಟನ್ ನ ರಕ್ಷಣಾ ಸೇವಾ ಕಾಲೇಜು ಕಡೆಗೆ ಹೊರಟಿತ್ತು . ಹೆಲಿಕಾಪ್ಟರ್ ನಲ್ಲಿ 14 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ . ಅವರಲ್ಲಿ ಜನರಲ್ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್ , ಬ್ರಿಗೇಡಿಯರ್ ಎಲ್ಸ್ ಲಿಡರ್ , ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್ , ನಾಯಕ್ ಗುರ್ಸೇವಕ್ ಸಿಂಗ್ , ನಾಯಕ್ ಜಿತೇಂದ್ರ ಕುಮಾರ್ , ಲ್ಯಾನ್ಸ್ ನಾಯಕ್ ವಿವೇಕ್ ಕುಮಾರ್ , ಲ್ಯಾನ್ಸ್ ನಾಯಕ್ ಬಿ ಸಾಯಿ ತೇಜಾ ಮತ್ತು ಹವಾಲ್ದಾರ್ ಸತ್ಪಾಲ್ ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ .
ತನಿಖೆಗೆ ಆದೇಶ : ತಮಿಳು ನಾಡಿನ ಕೂನೂರು ಬಳಿ ಎಂಐ -17 ವಿ 5 ಹೆಲಿಕಾಪ್ಟರ್ ಪತನಕ್ಕೀಡಾಗಿರುವ ಘಟನೆಗೆ ಸಂಬಂಧಿಸಿದಂತೆ ಟ್ವಿಟ್ ಮಾಡಿರುವ ಭಾರತೀಯ ವಾಯುಪಡೆ ರಕ್ಷಣಾ ಪಡೆ ಮುಖ್ಯಸ್ಥ ಬಿಪಿನ್ ರಾವತ್ , ಅವರ ಕುಟುಂಬ ಮತ್ತು ಇತರ ಉನ್ನತ ಮಟ್ಟದ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ದುರಂತಕ್ಕೀಡಾಗಿದ್ದು ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದೆ . ನಾಲ್ವರು ಸಾವಿಗೀಡಾಗಿರುವ ಶಂಕೆ : ನೀಲಗಿರಿ ಅರಣ್ಯ ಪ್ರದೇಶದಲ್ಲಿ ಪತನಕ್ಕೀಡಾದ ವೇಳೆ ಸೇನಾ ಹೆಲಿಕಾಪ್ಟರ್ ನಲ್ಲಿದ್ದ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಶಂಕೆ ವ್ಯಕ್ತವಾಗಿದ್ದು , ಈ ಮಧ್ಯೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಘಟನೆಯ ವಿವರ ನೀಡಿದ್ದಾರೆ .
Comments
Post a Comment