ಸಿಲಿಕಾನ್ ಸಿಟಿಯಲ್ಲಿ, ಓಮಿಕ್ರಾನ್ ವೈರಸ್,ಸೋಂಕಿತರ ಸಂಖ್ಯೆ ಐದು.!
ಬೆಂಗಳೂರು: ರಾಜ್ಯದಲ್ಲಿ ಓಮಿಕ್ರಾನ್ ವೈರಸ್ ಎರಡಲ್ಲ ಐದು ಜನಕ್ಕೆ ಹರಡಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಸದ್ಯ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಒಂದೇ ದಿನ ಓಮಿಕ್ರಾನ್ ವೈರಸ್ ಸೋಂಕಿತ ಐದು ಪ್ರಕರಣಗಳು ದಾಖಲಾಗಿವೆ ಎಂದು ಗೌರವ್ ಗುಪ್ತ ಸ್ಪೋಟಕ ಮಾಹಿತಿ ನೀಡಿದ್ದಾರೆ.
ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದಿದ್ದ 46 ವರ್ಷದ ವ್ಯಕ್ತಿಯಲ್ಲಿ ಮತ್ತು 66 ವರ್ಷದ ವೃದ್ಧನಿಗೆ ಓಮಿಕ್ರಾನ್ ವೈರಸ್ ದೃಢಪಟ್ಟಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, “ರಾಜ್ಯದಲ್ಲಿ ಐದು ಜನರಿಗೆ ಓಮಿಕ್ರಾನ್ ವೈರಸ್ ತಗುಲಿರುವುದು ದೃಢಪಟ್ಟಿದೆ. 46 ವರ್ಷದ ಸೋಂಕಿತ ವ್ಯಕ್ತಿ ನವೆಂಬರ್ 20ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಬಂದಿರುತ್ತಾರೆ. ಮೂರು ದಿನ ಮಾತ್ರ ಹೋಟೆಲ್‌ನಲ್ಲಿ ಕ್ವಾರಂಟೈನ್ ಆಗಿದ್ದರು. ಮೂರು ದಿನಗಳ ನಂತರ ಪರೀಕ್ಷೆ ಮಾಡಲಾಗಿದೆ. ನೆಗೆಟಿವ್ ಬಂದಿದೆ. ಈ ವ್ಯಕ್ತಿಯಲ್ಲಿ ರೋಗ ಲಕ್ಷಣಗಳು ಕಂಡು ಬಂದಿರಲಿಲ್ಲ. ಪರೀಕ್ಷೆ ಬಳಿಕ ಇವರು ನೇರವಾಗಿ ಬೊಮ್ಮಸಂದ್ರಕ್ಕೆ ತೆರಳಿದ್ದಾರೆ. ನಂತರ ಅವರು ಮೀಟಿಂಗ್‌ನಲ್ಲಿ ಭಾಗಿಯಾಗಿದ್ದಾರೆ. ಇವರ ಕಂಪನಿ ಬೋರ್ಡ್ ಮೀಟಿಂಗ್‌ನಲ್ಲಿ ಆರು ಜನ ಭಾಗಿಯಾಗಿದ್ದರು. ಹೋಮ್ ಕ್ವಾರಂಟೈನ್ ಆಗದೇ ಮೀಟಿಂಗ್‌ನಲ್ಲಿ ಅವರು ಭಾಗಿಯಾಗಿದ್ದಾರೆ. ಹೀಗಾಗಿ ಪ್ರಥಮ ಸಂಪರ್ಕದಲ್ಲಿದ್ದವರಲ್ಲಿ ಸೋಂಕು ಹರಡಿರುವ ಸಾಧ್ಯತೆ ಇದೆ. ಈ ಬಗ್ಗೆ ಪರಶೀಲನೆ ನಡೆಸಲಾಗಿದ್ದು ಮಾದರಿಗಳನ್ನು ಪರೀಕ್ಷೆಗೆ ನೀಡಲಾಗಿದೆ” ಎಂದರು.
Comments
Post a Comment