ಸಾವನ್ನು ಸಂಭ್ರಮಿಸಿದ ಓರ್ವನ ಬಂಧನ,ಕರ್ನಾಟಕದಲ್ಲಿ,,,
ಬೆಂಗಳೂರು: ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ದೇಶದ ಮೊದಲ ಸಿಡಿಎಸ್ ಬಿಪಿನ್ ರಾವತ್ ಅವ್ರ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ವ್ಯಕ್ತಿಯನ್ನ ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಟಿ.ಕೆ.ವಸಂತ್ ಕುಮಾರ್ (40) ನಗರದ ಖಾಸಗಿ ಲ್ಯಾಬ್ʼನಲ್ಲಿ ಟೆಕ್ನಿಷಿಯನ್ ಆಗಿ ಕೆಲಸ ಕಾರ್ಯ ನಿರ್ವಹಿಸುತ್ತಿದ್ದಾನೆ. ಇನ್ನು ಈತನ ವಿರುದ್ಧ ಐಪಿಸಿ ಸೆಕ್ಷನ್ 505ರಡಿ ಎಫ್ ಐಆರ್ ದಾಖಲಿಸಲಾಗಿದೆ.
ಮೈಸೂರು ಮೂಲದ ಆರೋಪಿ, ಬಿಪಿನ್ ರಾವತ್ ಅವ್ರ ಸಾವನ್ನ ಸಂಭ್ರಮಿಸಿ ಫೇಸ್ ಬುಕ್ʼನಲ್ಲಿ ಪೋಸ್ಟ್ ಹಾಕಿದ್ದ. ಈತ ‘ಬಿಪಿನ್ ರಾವತ್, ಮೋದಿ ಗುಲಾಮತನದ ಒಂದು ತಲೆಮಾರು’, ‘ಚೀನಾ ಭಾರತ ಗಡಿಯಲ್ಲಿ ಬಂದು ಹಳ್ಳಿಗಳನ್ನ ನಿರ್ಮಿಸಿದಾಗ ಮೋದಿಯಂತೆ ಬುಡಬುಡಿಕೆ ಹೇಳಿಕೆ ಕೊಟ್ಟ ವ್ಯಕ್ತಿ’, ರಾವತ್ ಸಾವಿನಿಂದ ದೇಶವಂತೂ ಪಾರಾಗಿದೆ ಎಂದು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದ. ಈ ಕುರಿತು ಒಂದು ಪ್ರಕರಣ ಮಂಗಳೂರಿನಲ್ಲಿ ದಾಖಲಾಗಿದ್ದು, ಸಧ್ಯ ಈ ಲ್ಯಾಬ್ ಟೆಕ್ನಿಷಿಯನ್ʼನನ್ನ ಪೊಲೀಸರು ಬಂಧಿಸಿದ್ದಾರೆ.
Comments
Post a Comment