ಹೊಸ ವರ್ಷ ಹಾಗೂ ಕ್ರಿಸ್ ಮಸ್ ಹಬ್ಬಕ್ಕೆ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ.!


 ವರದಿ:- ವೀರಮಣಿ 


ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ  ಎಂಜಿರಸ್ತೆ ಮತ್ತು ಬ್ರಿಗೆಡ್‌ ರಸ್ತೆ ಸಾಮೂಹಿಕವಾಗಿ ಜನರು ಸೇರುವುದನ್ನು ನಿಷೇಧಿಸಲಾಗಿದೆ.

 ರೆಸ್ಟೋರೆಂಟ್‌, ಕ್ಲಬ್‌ಗಳಲ್ಲಿ ಪಾರ್ಟಿ ಮಾಡುವಂತಿಲ್ಲ. ಡಿಸ್ಕೋ ಜಾಕಿ (ಡಿಜೆ), ಇತ್ಯಾದಿ ಅಬ್ಬರದ ಸಂಗೀತಗಳಿಗೆ ನಿಷೇಧ ಹೇರಲಾಗಿದೆ. ರೆಸ್ಟೋರೆಂಟ್‌, ಕ್ಲಬ್‌ಗಳಲ್ಲಿ ಇರುವ ಕೆಪ್ಯಾಸಿಟಿಗಿಂತ ಶೇ.50ರಷ್ಟು ಮಾತ್ರ ಜನರು ಇರಲು ಅವಕಾಶ ಕಲ್ಪಿಸಲಾಗಿದೆ.

ಅ‍ಪಾರ್ಟ್‌ಮೆಂಟ್‌ಗಳಲ್ಲಿ ಕೂಡ ಸಾಮೂಹಿಕವಾಗಿ ಪಾರ್ಟಿ ಮಾಡುವಂತಿಲ್ಲ, ಡಿಸ್ಕೋ ಜಾಕಿ ಇತ್ಯಾದಿ ಸಂಗೀತ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ. ಇವುಗಳ ಜವಾಬ್ದಾರಿಯನ್ನು ಆಯಾ ಅಪಾರ್ಟ್‌ಮೆಂಟ್‌ ಅಸೋಸಿಯೇಷನ್‌ ನೋಡಿಕೊಳ್ಳಬೇಕು.

 ಡಿಸೆಂಬರ್‌ 30ರಿಂದ ಜನವರಿ 2ನೇ ತಾರೀಖಿನವರೆಗೆ ಈ ನಿಷೇಧ ಚಾಲ್ತಿಯಲ್ಲಿ ಇರುತ್ತದೆ. ಆದರೆ 25ರಂದು ಕ್ರಿಸ್‌ಮಸ್‌ ಇರುವ ಹಿನ್ನೆಲೆಯಲ್ಲಿ ಅವುಗಳಿಗೂ ಕೆಲವೊಂದು ನಿಯಮ ಮಾಡಲಾಗಿದೆ. ಕ್ರಿಸ್‌ಮಸ್‌ ಯಾವುದೇ ಬಹಿರಂಗ ಪಾರ್ಟಿ ಮಾಡುವಂತಿಲ್ಲ.


* ಕ್ರಿಸ್‌ಮಸ್‌ ಸಂದರ್ಭದಲ್ಲಿ ಆಂತರಿಕವಾಗಿ ಪ್ರಾರ್ಥನೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಆದರೆ ಕೋವಿಡ್‌ನ ಎಲ್ಲಾ ನಿಯಮಗಳನ್ನು ಪಾಲನೆ ಮಾಡಬೇಕು. ಸಾಮಾಜಿಕ ಅಂತರ, ಸೆನಿಟೈಸರ್‌ ಎಲ್ಲವನ್ನೂ ಕಾಪಾಡಬೇಕು. ಕ್ಲಬ್‌ಗೆ ಬರುವವರಿಗೆ ಎರಡು ಡೋಸ್‌ ಲಸಿಕೆ ಕಡ್ಡಾಯ ಮಾಡಲಾಗಿದೆ. ಅಲ್ಲಿರುವ ಸಿಬ್ಬಂದಿಗೆ ಪರೀಕ್ಷೆ ಮಾಡಿಸಬೇಕು.

Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?