S EX ಪದ ಬಳಕೆ: ಸಾರಿಗೆ ಇಲಾಖೆಗೆ ಮಹಿಳಾ ಆಯೋಗ ನೋಟಿಸ್


 

ನವದೆಹಲಿ: ದ್ವಿ ಚಕ್ರ ವಾಹನದ ನಂಬರ್ ಪ್ಲೇಟ್ ನಲ್ಲಿ SEX ಎಂದು ಬರೆದಿರುವುದು ಯುವತಿಗೆ ಮುಜುಗರ ಉಂಟು ಮಾಡಿದ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಇದೀಗ ದೆಹಲಿ ಮಹಿಳಾ ಆಯೋಗವು ಸಾರಿಗೆ ಇಲಾಖೆಗೆ ನೋಟಿಸ್ ಕಳುಹಿಸಿದೆ.

SEX ಎಂಬ ನೋಂದಣಿ ಸಂಖ್ಯೆಯನ್ನು ಬದಲಿಸುವಂತೆ ಕೋರಿರುವ  ದೆಹಲಿ ಮಹಿಳಾ ಆಯೋಗ ಈ ಸರಣಿಯಲ್ಲಿ ನೋಂದಣಿಯಾಗಿರುವ ಒಟ್ಟು ವಾಹನ ಸಂಖ್ಯೆಯನ್ನು ಸಲ್ಲಿಸುವಂತೆ ತಿಳಿಸಿದೆ. ಇನ್ನೂ ಈ ಸಂಬಂಧ ಪ್ರತಿಕ್ರಿಯಿಸಿರುವ ಸಾರಿಗೆ ಇಲಾಖೆ ಇಲಾಖೆಯಿಂದ ಬಂದಿರುವ  ದೂರುಗಳ ವಿವರವನ್ನು ಕೇಳಿದ್ದು, ಈ ಬಗ್ಗೆ 4 ದಿನಗಳೊಳಗೆ ವಿವರವಾದ ಕ್ರಮವನ್ನು ಕೈಗೊಳ್ಳುತ್ತೇವೆ ಎಂದು ಹೇಳಿದೆ.


ದೆಹಲಿಯಲ್ಲಿ ದ್ವಿಚಕ್ರ ವಾಹನಗಳೀಗೆ ಎಸ್ ಇಂಗ್ಲಿಷ್ ಅಕ್ಷರವನ್ನು ಸೂಚಕವಾಗಿ ನೀಡಲಾಗುತ್ತದೆ. ರಾಜ್ಯದ ಸೂಚಕವಾಗಿ ಡಿಎಲ್ ಅಕ್ಷರದ ಜೊತೆಗೆ ಜಿಲ್ಲೆಯನ್ನು ಪ್ರತಿನಿಧಿಸುವ ಸಂಖ್ಯೆ ನೀಡಲಾಗುತ್ತದೆ. ಕಾರಿಗೆ ‘ಸಿ’ ಹಾಗೂ ಬೈಕ್ ಗೆ ‘ಎಸ್’ ಅಕ್ಷರವನ್ನು ಸೂಚಕವಾಗಿ ನೀಡಲಾಗುತ್ತದೆ. ದೆಹಲಿಯಲ್ಲಿ ಈಗ ಇಎಕ್ಸ್ ಸೀರಿಸ್ ನಡೆಯುತ್ತಿದೆ. ಹೀಗಾಗಿ ಕೆಲವು ದ್ವಿಚಕ್ರ ವಾಹನಗಳಿಗೆ ಎಸ್ ಇ ಎಕ್ಸ್(SEX) ಎಂಬ ನಂಬರ್  ನೀಡಲಾಗುತ್ತಿದೆ. ಇದರಿಂದಾಗಿ ಸೀಮಿತ ಮನಸ್ಥಿತಿಯ ಜನರ ನಡುವೆ ಈ ನಂಬರ್ ಪಡೆದ ಮಹಿಳೆಯರು ಮುಜುಗರಕ್ಕೀಡಾಗುವ ಸನ್ನಿವೇಶಗಳು ಸೃಷ್ಟಿಯಾಗಿವೆ.

Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?