ರಾಜ್ಯದ ರಾಜಧಾನಿಯಲ್ಲಿ ಶಾಲೆ ಬಂದ್!
ಬೆಂಗಳೂರು: ಕೊರೊನಾ ವೈರಸ್ ಪ್ರಮಾಣ ಏರಿಕೆ ಕಾಣುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ಜಾರಿ ಮಾಡಲಾಗಿದೆ.
ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ಕೋವಿಡ್ ತಾಂತ್ರಿಕ ಸಮಿತಿಯ ಸಭೆ ನಡೆಯಿತು. ಸಭೆಯಲ್ಲಿ ಹಿರಿಯ ಸಚಿವರು, ಅಧಿಕಾರಿಗಳು ಭಾಗಿಯಾಗಿದ್ದರು.
ಬೆಂಗಳೂರಲ್ಲಿ 10 ಮತ್ತು 12 ನೇ ತರಗತಿಯನ್ನು ಹೊರತು ಪಡಿಸಿ ಉಳಿದ ಎಲ್ಲಾ ತರಗತಿಗಳನ್ನು ಬಂದ್ ಮಾಡಲು ರಾಜ್ಯ ಸರಕಾರ ತೀರ್ಮಾನ ಕೈಗೊಂಡಿದೆ. ಅಲ್ಲದೇ ನೈಟ್ ಕರ್ಪ್ಯೂ ಮುಂದುವರಿಸುವುದರ ಜೊತೆಗೆ ರಾಜ್ಯದಾದ್ಯಂತ ವೀಕೆಂಡ್ ಕರ್ಪ್ಯೂ ಜಾರಿ ಮಾಡಲು ರಾಜ್ಯ ಸರಕಾರ ತೀರ್ಮಾನ ಕೈಗೊಂಡಿದೆ.
ಇಂದು ರಾತ್ರಿಯಿಂದಲೇ ಹೊಸ ರೂಲ್ಸ್ ಜಾರಿಗೆ ಬರಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಮತ್ತು ಸುಧಾಕರ್ ಅವರು ಜಂಟಿ ಸುದ್ದಿ ಗೋಷ್ಠಿ ಯಲ್ಲಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ 10 ಮತ್ತು12 ನೇ ತರಗತಿಯನ್ನು ಹೊರತು ಪಡಿಸಿ ಉಳಿದ ಎಲ್ಲಾ ತರಗತಿಗಳನ್ನು ಎರಡು ವಾರದ ಮಟ್ಟಿಗೆ ಮುಚ್ಚಲಾಗುತ್ತದೆ. ಉಳಿದ ತರಗತಿಗಳಿಗೆ ಆನ್‌ಲೈನ್ ಕ್ಲಾಸ್ ನಡೆಸುವಂತೆ ಸೂಚನೆಯನ್ನು ನೀಡಲಾಗಿದೆ. ಜನವರಿ 5 ರಿಂದ ರಾತ್ರಿ 10 ಗಂಟೆಯಿಂದಲೇ ಹೊಸ ರೂಲ್ಸ್ ಜಾರಿಗೆ ಬರಲಿದೆ. ಜನವರಿ 6 ರಿಂದ ಎರಡು ದಿನಗಳ ಕಾಲ ವೀಕೆಂಡ್ ಕರ್ಪ್ಯೂ ಜಾರಿಗೆ ಬರಲಿದೆ. ಸದ್ಯ ಜಾರಿಯಲ್ಲಿರುವ ನೈಟ್ ಕರ್ಪ್ಯೂ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ.
Comments
Post a Comment