ಬಾಳೆಹೊನ್ನೂರು ಸಮೀಪ ಭೀಕರ ರಸ್ತೆ ಅಪಘಾತ ; ಸ್ಥಳದಲ್ಲೇ ಬೈಕ್ ಸವಾರನ ದುರ್ಮರಣ,
ವರದಿ:-ವೀರಮಣಿ
ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಸಮೀಪದ ಬೆಳಸೆ ಖಾಂಡ್ಯ ಕ್ಲಬ್ ಬಳಿ ಬೈಕ್ ಹಾಗೂ ಬಸ್ಸಿನ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ .
ಚಿಕ್ಕಮಗಳೂರಿನಿಂದ ಶೃಂಗೇರಿ ಕಡೆಗೆ ಚಲಿಸುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಬೈಕಿನ ನಡುವೆ ಈ ಅಪಘಾತ ಉಂಟಾದ ಪರಿಣಾಮ ಕೆಲ ಸಮಯ ರಸ್ತೆ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು . ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟರು . ಪೊಲೀಸರು ಈ ಕುರಿತು ವಿಚಾರಣೆ ನಡೆಸುತ್ತಿದ್ದಾರೆ .
Comments
Post a Comment