ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ,!


 ಬೆಂಗಳೂರು: ಕೊರೊನಾ ಮೂರನೇ ಅಲೆ ಮತ್ತು ಒಮಿಕ್ರಾನ್ ಅಪಾಯವನ್ನು ತಡೆಯಲು ರಾಜ್ಯ ಸರ್ಕಾರ ಮುಂದಾಗಿದ್ದು, ಕಠಿಣ ಕ್ರಮ ಜಾರಿಗೆ ತಂದಿದೆ. ಅದರಂತೆ ಐದೂವರೆ ತಿಂಗಳ ಬಳಿಕ ರಾಜ್ಯದಲ್ಲಿ ಮತ್ತೆ ವೀಕೆಂಡ್ ಕರ್ಫ್ಯೂ ಜಾರಿಗೆ ತರಲಾಗಿದೆ. ಇಂದು ರಾತ್ರಿ 8 ರಿಂದ ಸೋಮವಾರ ಮುಂಜಾನೆ 5 ಗಂಟೆವರೆಗೆ ಸುಮಾರು 57 ಗಂಟೆಗಳ ಕಾಲ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ತುರ್ತು ಸೇವೆ ಹೊರತುಪಡಿಸಿ ಉಳಿದಂತೆ ಎಲ್ಲಾ ಸೇವೆಗಳು ಬಂದ್​ ಮಾಡಲಾಗಿದೆ. ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿರುವ ರಾಜ್ಯ ಸರ್ಕಾರ, ಹೋಟೆಲ್‌ಗಳು, ಬಾರ್ ಅಂಡ್​ ರೆಸ್ಟೋರೆಂಟ್ ಸೇರಿದಂತೆ ಯಾವುದೇ ರೀತಿಯ ಸೇವೆಗಳು ವೀಕೆಂಡ್ ಕರ್ಫ್ಯೂನಲ್ಲಿ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ವಿನಾಯಿತಿ ಪಡೆದಿರುವ 10, 11, 12 ತರಗತಿಗಳು ಕೂಡ ಬಂದ್​ ಆಗಲಿವೆ. ಕೇವಲ ಫುಡ್ ಡೆಲಿವರಿ ಬಾಯ್ಸ್, ಕೈಗಾರಿಕೆ, ಟಿಲಿಕಾಂ ಸೇರಿದಂತೆ ವಿನಾಯಿತಿ ಪಡೆದವರಿಗೆ ಮಾತ್ರ ಓಡಾಡುವುದಕ್ಕೆ ಅವಕಾಶವಿದೆ.

ರಾಜ್ಯದಲ್ಲಿ ಒಮಿಕ್ರಾನ್ ಹರಡುವಿಕೆಯನ್ನು ನಿಯಂತ್ರಿಸಲು ಸರ್ಕಾರ ನೈಟ್ ಕರ್ಪ್ಯೂ ಹಾಗೂ ವೀಕೆಂಡ್ ಕರ್ಪ್ಯೂ ಜಾರಿ ಮಾಡಿದೆ. ರೆಡ್ ಜೋನ್ ಜಿಲ್ಲೆಯಾಗಿರುವ ಬೆಂಗಳೂರು ನಗರದಲ್ಲಿ 1 ರಿಂದ 9 ಹಾಗೂ ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳ ಭೌತಿಕ ತರಗತಿ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ಹೀಗಾಗಿ ಎಲ್ಲ ಕೋಚಿಂಗ್ ಕೇಂದ್ರಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಸೂಚನೆ ನೀಡಲಾಗಿದೆ. ವಿಕೆಂಡ್ ಕರ್ಪ್ಯೂ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳನ್ನು ನಡೆಸದಿರಲು ಸೂಕ್ತ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಅಲ್ಲದೇ ಆಯಾ ಜಿಲ್ಲೆಗಳ ಉಪನಿರ್ದೇಶಕರಿಗೆ ಈ ಬಗ್ಗೆ ಗಮನಹರಿಸಲು ಸೂಚನೆ ನೀಡಲಾಗಿದೆ.

ವೀಕೆಂಡ್ ಕರ್ಫ್ಯೂ ವೇಳೆ ಏನಿರುತ್ತೆ?

– ಹಾಲಿನ ಬೂತ್​ಗಳು

– ತರಕಾರಿ ಮತ್ತು ಹಣ್ಣಿನ ಮಂಡಿಗಳು

– ದಿನಸಿ ಅಂಗಡಿಗಳು, ಮಾಂಸದ ಅಂಗಡಿಗಳು, ಮೀನು ಮಾರುಕಟ್ಟೆಗಳು ತೆರೆದಿರುತ್ತದೆ.

– ಬೀದಿ ಬದಿ ವ್ಯಾಪಾರಿಗಳ ಕಾರ್ಯಚಟುವಟಿಕೆ ಎಂದಿನಂತಿರಲಿದೆ.

– ಆಸ್ಪತ್ರೆಗಳು, ನರ್ಸಿಂಗ್‌ ಹೋಂ, ಮೆಡಿಕಲ್‌ ಶಾಪ್‌, ನ್ಯಾಯಬೆಲೆ ಅಂಗಡಿಗಳು ಕಾರ್ಯಚಟುವಟಿಕೆ ನಡೆಸಲಿವೆ.

– ಎಲ್ಲ ಪದಾರ್ಥಗಳನ್ನು ಹೋಂ ಡೆಲಿವರಿ ಮಾಡಲು ಅನುವು.

– ಪೆಟ್ರೋಲ್‌ ಬಂಕ್‌ಗಳು, ಕೃಷಿ ಮಾರುಕಟ್ಟೆಗಳು ತೆರೆಯಲಿವೆ.

– ಹೋಟೆಲ್‌ ತೆರೆಯಲಿದ್ದು, ಕೇವಲ ಪಾರ್ಸೆಲ್‌ಗೆ ಮಾತ್ರ ಅವಕಾಶ.

– ಐಟಿ ಬಿಟಿ ಕಂಪನಿಗಳು, ಕೈಗಾರಿಕೆಗಳ ಕಾರ್ಯಚಟುವಟಿಕೆ ಯಥಾಸ್ಥಿತಿಯಲ್ಲಿರಲಿದೆ.

ವೀಕೆಂಡ್ ಕರ್ಫ್ಯೂಗೆ ಯಾವ ಸೇವೆಗಳಿಗೆ ಕಡಿವಾಣ?

– ಚಿತ್ರಮಂದಿರಗಳು, ಮಾಲ್‌ಗಳು ತೆರೆಯುವಂತಿಲ್ಲ.

– ವಾಹನ ಸರ್ವೀಸ್ ಸೆಂಟರ್‌ಗಳು ಕಾರ್ಯನಿರ್ವಹಿಸಲ್ಲ.

– ಈಜು ಕೊಳಗಳು, ಜಿಮ್‌ ತೆರೆಯುವಂತಿಲ್ಲ.

– ಪಬ್‌, ಕ್ಲಬ್‌, ಬಾರ್‌ ಅಂಡ್‌ ರೆಸ್ಟೋರೆಂಟ್‌, ಬಾರ್‌ಗಳು ತೆರೆಯಲ್ಲ.

– ಸಾರ್ವಜನಿಕ ಗ್ರಂಥಾಲಯಗಳು, ಬ್ಯೂಟಿ ಪಾರ್ಲರ್‌ಗಳು, ಸಲೂನ್‌ ಶಾಪ್‌ ತೆರೆಯುವುದಿಲ್ಲ.

ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಇಲ್ಲ

ಇಂದಿನಿಂದ ವೀಕೆಂಡ್ ಕರ್ಪ್ಯೂ ಹಿನ್ನಲೆ ರಾತ್ರಿ 8:30 ಕ್ಕೆ ದೇವಸ್ಥಾನಗಳು ಮುಚ್ಚಲಿವೆ. ಇಂದು ಶುಕ್ರವಾರ ಹಿನ್ನಲೆ ಹೆಚ್ಚಿನ ಭಕ್ತರು ದರ್ಶನಕ್ಕೆ ಬರುತ್ತಾರೆ. ಆದರೆ ಸರ್ಕಾರದ ಮಾರ್ಗಸೂಚಿಯಂತೆ ದೇವಸ್ಥಾನ ಮುಚ್ಚುತ್ತೇವೆ. ಇಂದು ರಾತ್ರಿ 8:30 ರಿಂದ ಸೋಮವಾರ ಬೆಳ್ಳಗ್ಗಿನ 5ರವರೆಗೆ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಇಲ್ಲ. ಎರಡು ದಿವಸ ಆರ್ಚಕರಿಂದ ಎಂದಿನಂತೆ ಪೂಜಾ ಸೇವೆಗಳನ್ನು ಮಾಡಲಾಗುತ್ತದೆ. ಆದರೆ ಭಕ್ತರಿಗೆ ಮಾತ್ರ ಅವಕಾಶ ಇರಲ್ಲ ಎಂದು ಮಲ್ಲೇಶ್ವರಂ ಗಂಗಮ್ಮ ದೇವಸ್ಥಾನದ ಅರ್ಚಕರು ಹೇಳಿದ್ದಾರೆ.








Comments

Popular posts from this blog

ಕೊಪ್ಪ, ಶಾಲೆಯ ಮಕ್ಕಳನ್ನ ಅಟೋ ಚಾಲಕರ ಸೀಟಿನಿಂದ ಇಳಿಸಿದ ಪಿ ಎಸ್ ಐ ಬಸವರಾಜ್, ಚಾಲಕರಿಗೆ ಎಚ್ಚರಿಕೆ

250ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಅಹಮದಾಬಾದ್‌ನಲ್ಲಿ ಪತನ,!