ಶೃಂಗೇರಿ : ಪಿಕಪ್ ಅಪಘಾತ 12 ಮಂದಿ ಆಸ್ಪತ್ರೆಗೆ ದಾಖಲು,
ವರದಿ:-ಮಜೀದ್ ಕೊಪ್ಪ
ಶೃಂಗೇರಿ :- ತೋಟದ ಕಾರ್ಮಿಕರನ್ನು ಕೆಲಸಕ್ಕೆಂದು ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಪಿಕಪ್ ಅಪಘಾತ ಉಂಟಾದ ಕಾರಣ 12 ಮಂದಿ ಶೃಂಗೇರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ,
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ನೆಮ್ಮಾರು ಸಮೀಪದ ಯಡದಳ್ಳಿಯ ಬಳಿ ಕೆಲಸಗಾರರನ್ನು ತೋಟದ ಕೆಲಸಕ್ಕೆಂದು ಪಿಕಪ್ ವಾಹನದಲ್ಲಿ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಪಿಕಪ್ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಗಾಯಗೊಂಡವರಿಗೆ ಶೃಂಗೇರಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಗಂಭೀರವಾಗಿ ಗಾಯಗೊಂಡ ಐವರನ್ನು ಬೇರೆ ಆಸ್ಪತ್ರೆಗಳಿಗೆ ರವಾನಿಸಲು ವೈದ್ಯರು ಸೂಚನೆ ನೀಡಿದ್ದಾರೆ.


Comments
Post a Comment