ಫುಟ್ಬಾಲ್ ಪಂದ್ಯದ ವೇಳೆ ಗ್ಯಾಲರಿ ಕುಸಿತ; 60ಕ್ಕೂ ಅಧಿಕ ಮಂದಿಗೆ ಗಾಯ, ಹಲವರು ಗಂಭೀರ,
March 20, 2022
ಫುಟ್ಬಾಲ್ ಪಂದ್ಯದ ವೇಳೆ ತಾತ್ಕಾಲಿಕ ಗ್ಯಾಲರಿ ಕುಸಿದು ಬಿದ್ದು 60 ಮಂದಿ ಗಾಯಗೊಂಡಿದ್ದು, ಹಲವರ ಸ್ಥಿತಿ ಗಂಭೀರವಾಗಿರುವ ಘಟನೆ ಮಲಪ್ಪುರಂ ಸಮೀಪದ ವಂಡೂರಿನ ಪೂಂಗೊಡೆಯಲ್ಲಿ ನಡೆದಿದೆ.
ಗಾಯಾಳುಗಳನ್ನು ಮಂಜೇರಿ ವೈದ್ಯಕೀಯ ಕಾಲೇಜು ಆಸ್ಪತ್ರೆ ಹಾಗೂ ವಂಡೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಫುಟ್ಬಾಲ್ ಪಂದ್ಯಾವಳಿಯ ಅಂತಿಮ ಪಂದ್ಯದ ವೇಳೆ ತಾತ್ಕಾಲಿಕ ಗ್ಯಾಲರಿ ಕುಸಿದಿದೆ.
ಘಟನೆ ನಡೆದ ಸಂದರ್ಭದಲ್ಲಿ ಸುಮಾರು 3 ಸಾವಿರ ಮಂದಿ ಪಂದ್ಯ ವೀಕ್ಷಿಸಲು ಹಾಜರಿದ್ದರು ಎಂದು ತಿಳಿದುಬಂದಿದೆ.
ಯುನೈಟೆಡ್ ಎಫ್ ಸಿ ನೆಲ್ಲಿಕುತ್ ಮತ್ತು ರಾಯಲ್ ಟ್ರಾವೆಲ್ ಕೋಝಿಕ್ಕೋಡ್ ನಡುವಿನ ಫೈನಲ್ ಪಂದ್ಯದ ವೇಳೆ ಈ ಅವಘಡ ಸಂಭವಿಸಿದೆ.
ಅತಿ ಜನಸಂದಣಿ ಘಟನೆಗೆ ಕಾರಣ ಎನ್ನಲಾಗಿದೆ. ಸಂಘಟಕರು ಇಷ್ಟು ಜನರನ್ನು ನಿರೀಕ್ಷಿಸಿರಲಿಲ್ಲ ಮತ್ತು ಅವರನ್ನು ನಿಯಂತ್ರಿಸಲು ಮೈದಾನದಲ್ಲಿ ಯಾವುದೇ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿಲ್ಲ.ರಜೆ ಹಿನ್ನೆಲೆಯಲ್ಲಿ ಹೆಚ್ಚಿನ ಜನ ಪಂದ್ಯ ವೀಕ್ಷಣೆಗೆ ಸೇರಿದ್ದರು ಎಂದು ತಿಳಿದುಬಂದಿದೆ.


Comments
Post a Comment