ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿ ಇಸ್ಮಾಯಿಲ್, ಉಪಾಧ್ಯಕ್ಷರಾಗಿ ಗಾಯಿತ್ರಿ ವಸಂತ್ ಅಧಿಕಾರ ಸ್ವೀಕಾರ

 

ವರದಿ:-ವೀರಮಣಿ



ಕೊಪ್ಪ: ಕೊಪ್ಪ ಪಟ್ಟಣ ಪಂಚಾಯಿತಿಯಲ್ಲಿ ಇಂದು ನಡೆದ ಪದಗ್ರಹಣ ಸಮಾರಂಭದಲ್ಲಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಇಸ್ಮಾಯಿಲ್(ಇದಿನಬ್ಬ) ಹಾಗೂ ಉಪಾಧ್ಯಕ್ಷರಾಗಿ ಗಾಯಿತ್ರಿ ವಸಂತ್ ಅಧಿಕಾರ ಸ್ವೀಕರಿಸಿದರು.ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್, ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್ ಉಪ ಸಭಾಪತಿ ಎಮ್. ಕೆ. ಪ್ರಾಣೇಶ್ ಉಪಸ್ಥಿತರಿದ್ದರು.




ಈ ವೇಳೆ ಮಾತನಾಡಿದ ಡಿ.ಎನ್.ಜೀವರಾಜ್, ಪಟ್ಟಣ ಪಂಚಾಯ್ತಿಗಳ ಅಭಿವೃದ್ಧಿ ಕಾರ್ಯಗಳಿಗೆ ಈ ಬಾರಿಯ ಬಜೆಟ್ ನಲ್ಲಿ 7 ಕೋಟಿಯಷ್ಟು ಹಣವನ್ನು ಮೀಸಲಿರಿಸಲಾಗಿದ್ದು, ಸಿಕ್ಕ ಅನುದಾನವನ್ನು ಸೂಕ್ತವಾಗಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು. ಬಸವರಾಜ ಬೊಮ್ಮಾಯಿಯವರು ತಮ್ಮ ಚೊಚ್ಚಲ ಬಜೆಟ್ನಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಅನೇಕ ಹೊಸ ಯೋಜನೆಗಳನ್ನು ಘೋಷಿಸಿದ್ದು, ಜಿಲ್ಲೆಯ ಜನರ ನೆನಪಿನಲ್ಲಿ ಸದಾಕಾಲ ಉಳಿಯುವಂತಹ ಬಜೆಟ್ ಇದಾಗಿದೆ ಎಂದು ಹೇಳಿದರು.




Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?