ಕರ್ನಾಟಕದಲ್ಲಿ ಕರೆಂಟ್ ಶಾಕ್,ಪ್ರತಿ ಯೂನಿಟ್,35 ಪೈಸೆ ಹೆಚ್ಚಳ,
ವರದಿ,🖋ಮಜೀದ್ ಕೊಪ್ಪ
ಬೆಂಗಳೂರು: ಕಳೆದ ಕೆಲವು ತಿಂಗಳಿಂದ ಚರ್ಚೆಯಲ್ಲಿರುವ ವಿದ್ಯುತ್ ದರ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿ ರಾಜ್ಯದ ಜನರಿಗೆ ವಿದ್ಯುತ್ ದರ ಏರಿಕೆಯ ಶಾಕ್ ಎದುರಾಗಲಿದೆ. ಪ್ರತಿ ಯೂನಿಟ್ಗೆ 35 ಪೈಸೆ ಹೆಚ್ಚಳ ಮಾಡಿ ಕೆಇಆರ್ಸಿ ಘೋಷಣೆ ಮಾಡಿದೆ. ಎಲ್ಲ ಎಸ್ಕಾಂಗಳ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ಗೆ 35 ಪೈಸೆ ಹೆಚ್ಚಳ ಮಾಡಲಾಗಿದೆ. ಏಪ್ರಿಲ್ 1ರಿಂದಲೇ ಪರಿಷ್ಕೃತ ದರ ಅನ್ವಯವಾಗಲಿದೆ. ಕಳೆದ ವರ್ಷ 30 ಪೈಸೆ ಹೆಚ್ಚಳ ಮಾಡಲಾಗಿತ್ತು. ಈ ಬಾರಿ ಪ್ರತಿ ಯೂನಿಟ್ಗೆ 35 ಪೈಸೆ ಹೆಚ್ಚಳ ಮಾಡಲಾಗಿದೆ.
ಜಾಹೀರಾತು:-
ಬೆಸ್ಕಾಂ, ಚೆಸ್ಕಾಂ, ಮೆಸ್ಕಾಂ, ಜೆಸ್ಕಾಂ ಸೇರಿದಂತೆ ಹೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ಗೆ 35 ಪೈಸೆ ಹೆಚ್ಚಳ ಮಾಡಲಾಗಿದ್ದು ಏಪ್ರಿಲ್ 1ರಿಂದಲೇ ಪರಿಷ್ಕೃತ ದರ ಅನ್ವಯವಾಗಲಿದೆ. ಎಸ್ಕಾಂಗಳು 1 ರೂ. 85 ಪೈಸೆ ಹೆಚ್ಚಳಕ್ಕೆ ಮನವಿ ಸಲ್ಲಿಸಿದ್ದವು. ಸಾಧಕ ಬಾಧಕ ಪರಿಶೀಲಿಸಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ 35 ಪೈಸೆ ಹೆಚ್ಚಿಸಿದೆ. ವಿದ್ಯುತ್ ದರ ಪರಿಷ್ಕರಣೆ ವಿಚಾರವಾಗಿ ವಸಂತನನಗರದ KERC ಕಚೇರಿಯಲ್ಲಿ ಅಧ್ಯಕ್ಷ ಮಂಜುನಾಥ್ ಸುದ್ದಿಗೋಷ್ಠಿ ನಡೆಸಿದ್ದು ಪ್ರತಿ ಯೂನಿಟ್ಗೆ 35 ಪೈಸೆ ಹೆಚ್ಚಳ ಮಾಡಿರುವುದಾಗಿ ತಿಳಿಸಿದ್ದಾರೆ.
ಆದಾಯ ಕೊರತೆ ಸರಿದೂಗಿಸಲು ದರ ಏರಿಕೆ ಮಾಡಲಾಗಿದೆ. ಇಂಧನ ಶುಲ್ಕ ಕೇವಲ 5 ಪೈಸೆ ಹೆಚ್ಚಳ ಮಾಡಿದ್ದೇವೆ. ಈ ಬಾರಿ ಶೇಕಡಾ 4.33ರಷ್ಟು ದರ ಹೆಚ್ಚಳ ಮಾಡಲಾಗಿದೆ. ಸರಾಸರಿ ಪ್ರತಿ ಯೂನಿಟ್ಗೆ 35 ಪೈಸೆ ಹೆಚ್ಚಳ ಮಾಡಲಾಗಿದೆ. ಇಂಧನ ವೆಚ್ಚ ಸೇರಿ ಒಟ್ಟು 35 ಪೈಸೆ ಏರಿಕೆ ಮಾಡಲಾಗಿದೆ ಎಂದರು. ಸೂಕ್ಷ್ಮ ಹಾಗೂ ಸಣ್ಣ ಪ್ರಮಾಣದ ಕೈಗಾರಿಕೆಗಳಿಗೆ 1 ವರ್ಷದವರೆಗೆ ಮಾಸಿಕ ಇಂಧನ ಬಳಕೆಯಲ್ಲಿ ರಿಯಾಯಿತಿ ನೀಡಲಾಗುವುದು. ಇಂಧನ ಬಳಕೆಯಲ್ಲಿ ಪ್ರತಿ ಯೂನಿಟ್ಗೆ 50 ಪೈಸೆ ರಿಯಾಯಿತಿ ನೀಡಲಾಗುವುದು ಹಾಗೂ ಸೀಸನಲ್ ಇಂಡಸ್ಟ್ರೀಸ್-ಯೂನಿಟ್ಗೆ 1 ರೂ. ರಿಯಾಯಿತಿ ಇಂಧನ ದರ ಯೋಜನೆ ಮುಂದುವರಿಯಲಿದೆ. ವಿದ್ಯುತ್ ವಾಹನಗಳ ಚಾರ್ಜಿಂಗ್ಗೆ ದರ ಏರಿಕೆ ಇಲ್ಲ. ಹಾಲಿ ದರವೇ ಮುಂದುವರಿಯಲಿದೆ ಎಂದು KERC ಅಧ್ಯಕ್ಷ ಮಂಜುನಾಥ್ ಹೇಳಿದ್ದಾರೆ.



Comments
Post a Comment