ಕೊರೊನಾ 4ನೇ ಅಲೆ ಆತಂಕ,! ರಸ್ತೆಯಲ್ಲಿ ಉಗುಳಿದ್ರೂ ಬೀಳುತ್ತೆ ದಂಡ ! ರಾಜ್ಯ ಸರ್ಕಾರದ ಮಹತ್ವದ ಆದೇಶ,
ಬೆಂಗಳೂರು : ಕೊರೊನಾ ನಾಲ್ಕನೇ ಅಲೆ ರಾಜ್ಯಕ್ಕೆ ಕಾಲಿಟ್ಟಿರುವ ಬಗ್ಗೆ ತಜ್ಞರು ಎಚ್ಚರಿಕೆ ನೀಡಿದ ಬೆನ್ನಲ್ಲೇ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಿ ರಾಜ್ಯದಲ್ಲಿ ಮತ್ತೆ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಪಾಲನೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇದೇ ವೇಳೆ ಸಾರ್ವಜನಿಕ ಸ್ಥಳದಲ್ಲಿ ಉಗುಳುವುದನ್ನು ನಿಷೇಧಿಸಲಾಗಿದ್ದು, ಉಗುಳಿದರೆ ಅದು ದಂಡನಾರ್ಹ ಅಪರಾಧವಾಗುತ್ತದೆ ಎಂದು ಘೋಷಿಸಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಹಾಕಿಕೊಳ್ಳಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಕನಿಷ್ಠ 2 ಅಡಿ ಅಂತರ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ನಿರ್ಬಂಧಿಸಲಾಗಿದೆ. ವಾಹನದಲ್ಲಿ ತೆರಳುವ ವೇಳೆ ಸಾರ್ವಜನಿಕ ಉಗುಳಿದರೆ ಹಾಗೂ ಮಾಸ್ಕ್ ಹಾಕದಿದ್ದರೆ ದಂಡ ಶುಲ್ಕ ವಿಧಿಸಲು ಸ್ಥಳೀಯ ಆಡಳಿತಕ್ಕೆ ಅಧಿಕಾರ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇತರ ರಾಜ್ಯಗಳಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ, ಕೆಲಸದ ಸ್ಥಳಗಳಲ್ಲಿ ಮತ್ತು ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸುವಾಗ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.



Comments
Post a Comment