ಬುದ್ಧಿವಾದ ಹೇಳಿದ ತಂದೆ ತಾಯಿಯ ಕೊಲೆಗೆ ಮಗನಿಂದ ಯತ್ನ,!




 ಉಡುಪಿ:- ಯುವಕನೋರ್ವ ತಂದೆತಾಯಿಯನ್ನೇ ಕೊಲೆಗೆ ಯತ್ನಿಸಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ . ಹಂದಾಡಿ ಗ್ರಾಮದ ಜಯರಾಮ ಶೆಟ್ಟಿ ಹಾಗೂ ಹೆಂಡತಿ ಪೂರ್ಣಿಮಾ ಶೆಟ್ಟಿಯನ್ನುಇವರ ಪುತ್ರ ರಜತ್ ಶೆಟ್ಟಿ ಕೊಲೆಗೆ ಯತ್ನಿಸಿದ್ದಾನೆ .

ಅಪ್ಪ- ಅಮ್ಮ ಇಬ್ಬರೂ ಶಿಕ್ಷಕರಾಗಿದ್ದರು . ರಜತ್ ಕೆಲಸ ಮಾಡದೇ ಮನೆಯಲ್ಲಿ ಇದ್ದನು . ತಂದೆತಾಯಿ ಅ ಆತನಿಗೆ ಬುದ್ದಿ ಹೇಳಿ ಕೆಲಸಕ್ಕೆ ಹೋಗುವಂತೆ ಹೇಳಿದ್ದರು .


ಇದರಿಂದ ಕೋಪಗೊಂಡಿದ್ದ ರಜತ್ ತಂದೆ- ತಾಯಿ ಕೆಲಸ  ಮುಗಿಸಿ ಮನೆಗೆ ಬರುವಾಗ ಅವಾಚ್ಯವಾಗಿ ಬೈದು ಏಕಾಏಕಿ ತನ್ನ ತಾಯಿಯ ಸೀರೆ , ಕರಿಮಣಿ ತಾಳಿಯನ್ನು ಎಳೆದು ಹಲ್ಲೆ ನಡೆಸಿದ್ದಾನೆ . ಬಳಿಕ ಕತ್ತಿಯನ್ನು ಹಿಡಿದುಕೊಂಡು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ . ಈ ಕುರಿತು ಬ್ರಹ್ಮಾವರ ಠಾಣೆಯಲ್ಲಿ ಕೇಸ್ ದಾಖಲಾಗಿದೆ .




Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?