ಸ್ನೇಹಿತನ ಶವ ತರಲು ಹೋಗಿ,ಜೊತೆಯಲ್ಲಿ ಶವವಾಗಿ ಬಂದರು,!
ರಾಯಚೂರು:-
ರಾಯಚೂರಿನ ಲಿಂಗಸುಗೂರು ತಾಲೂಕಿನ ಗೊಲ್ಲಪಲ್ಲಿ ಬಳಿ ನಿನ್ನೆ ಎರಡು ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದರು. ಇವರು
ಬೆಂಗಳೂರಿನಲ್ಲಿ ಮೃತಪಟ್ಟಿದ್ದ ಗೆಳೆಯನ ಶವವನ್ನು ಊರಿಗೆ ಕೊಂಡೊಯ್ಯುತ್ತಿದ್ದ ವೇಳೆ ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಅಂಬರೀಷ್ (30), ಗೋವಿಂದ್ (35) ದೇವರಾಜ್ (34) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.ಕಾರು ಚಾಲಕ ಉಸ್ಮಾನ್ ಪಾಷಾ ಹಾಗೂ ಯಲ್ಲಾಲಿಂಗ ಎಂಬವರಿಗೆ ಗಂಭೀರ ಗಾಯಗಳಾಗಿವೆ.
ಇವರು ಬೆಂಗಳೂರಿನ ನಾಯಂಡಹಳ್ಳಿಯಲ್ಲಿ ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು.ಇವರ ಸ್ನೇಹಿತ ಬಸಯ್ಯ ಎಂಬಾತ ನಿನ್ನೆ ಬೆಂಗಳೂರಿನಲ್ಲಿ ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದ. ಆತನ ಶವವವನ್ನು ತೆಗೆದುಕೊಂಡು ನಿನ್ನೆ ಬೆಂಗಳೂರಿನಿಂದ ಹೊರಟು ಯಾದಗಿರಿ ಜಿಲ್ಲೆಯ ವಡಗೇರಾ ಎಂಬಲ್ಲಿಗೆ ಹೊರಟಿದ್ದರು. ಈ ವೇಳೆ ಕಾರುಗಳ ನಡುವೆ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ.


Comments
Post a Comment