ತಲೆಮರೆಸಿಕೊಂಡಿದ್ದ ಕಲಬುರುಗಿಯ ಬಿ ಜೆ ಪಿ ನಾಯಕಿ ದಿವ್ಯಾ ಹಾಗರಗಿ,ಬಂಧನ,!ಗೃಹ ಸಚಿವರು ಹೇಳಿದ್ದೇನು,?

 


ಬೆಂಗಳೂರು,- ಪಿಎಸ್‍ಐ ನೇಮಕಾತಿ ಅಕ್ರಮದಲ್ಲಿ ಶಾಮೀಲಾಗಿ ಬಂಧನಕ್ಕೆ ಒಳಗಾಗಿರುವ ಆರೋಪಿಗಳ ವಿರುದ್ಧ ಕೋಕಾ ಕಾಯ್ದೆ ಜಾರಿಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ,


 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಅಕ್ರಮ ಪ್ರಕರಣ ಪ್ರಮುಖ ಆರೋಪಿ ದಿವ್ಯಾ ಹಾಗರಗಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಪುಣೆಯಲ್ಲಿ ಸಿಐಡಿ ಅಧಿಕಾರಿಗಳು ಪಿಎಸ್ಐ ನೇಮಕಾತಿ ಅಕ್ರಮದ ಕಿಂಗ್ ಪಿನ್ ದಿವ್ಯಾ ಹಾಗರಗಿಯನ್ನು ಬಂಧಿಸಿದ್ದಾರೆ.



ಕಲಬುರಗಿಯ ಬಿಜೆಪಿ ನಾಯಕಿಯಾಗಿರುವ ದಿವ್ಯಾ ಹಾಗರಗಿ ಅವರ ಒಡೆತನದ ಜ್ಞಾನಜ್ಯೋತಿ ಕಾಲೇಜಿನಲ್ಲಿ ಪಿಎಸ್ಐ ನೇಮಕಾತಿಯ ಪರೀಕ್ಷೆ ವೇಳೆ ಅಕ್ರಮ ನಡೆದಿರುವುದು ಪ್ರಾಥಮಿಕ ತನಿಖೆ ವೇಳೆ ಸಾಬೀತಾಗಿದೆ. ಆದರೆ ಈ ವಿಚಾರ ಹೊರಬರುತ್ತಿದ್ದಂತೆ ದಿವ್ಯಾ ಹಾಗರಗಿ ತಲೆಮರೆಸಿಕೊಂಡಿದ್ದರು.



ಅಕ್ರಮ ಹಗರಣ ಬೆಳಕಿಗೆ ಬಂದು ಬರೋಬ್ಬರಿ 18 ದಿನಗಳ ಬಳಿಕ ಆರೋಪಿ ದಿವ್ಯಾ ಹಾಗರಗಿಯ ಬಂಧನವಾಗಿದೆ. ದಿವ್ಯಾರನ್ನು ಬೆಳಗ್ಗೆ 10 ಗಂಟೆಗೆ ಪುಣೆಯಿಂದ ಸಿಐಡಿ ಅಧಿಕಾರಿಗಳು ಕಲಬುರಗಿಗೆ ಕರೆದುಕೊಂಡು ಬರಲಿದ್ದಾರೆ. ಸಿಐಡಿ ಅಧಿಕಾರಿ ಎಸ್ ರಾಘವೇಂದ್ರ ಹೆಗ್ಡೆ ನೇತೃತ್ವದಲ್ಲಿ ದಿವ್ಯಾ ಹಾಗರಗಿ ಬಂಧನವಾಗಿದೆ.






Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?