ಠಾಣೆಯ ಮೆಟ್ಟಿಲೇರಿದ ಇಬ್ಬರು ಯುವತಿಯರು ನಮಗೆ ವಿವಾಹ ಮಾಡಿಸಿಕೊಡಿ ಎಂದು
ತುಮಕೂರು: ಇಬ್ಬರು ಯುವತಿಯರು ನಮಗೆ ಮದುವೆ ಆಗಿ ಪರಸ್ಪರ ಒಟ್ಟಿಗೆ ಬದುಕಲು ಅವಕಾಶ ಮಾಡಿಕೊಡಿ ಎಂದು ಪೊಲೀಸರ ಮೊರೆ ಹೋಗಿದ್ದಾರೆ.
ನಗರದ ತಿಲಕ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಬ್ಬರು ಯುವತಿಯರು ಒಂದೇ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು ಇಬ್ಬರೂ ತುಮಕೂರಿನಲ್ಲೇ ವಾಸಿಸುತ್ತಿದ್ದರು.
ಕೆಲದಿನಗಳ ಹಿಂದೆ ಕಾಣೆಯಾಗಿದ್ದ ಈ ಯುವತಿಯರು ಬಳಿಕ ತುಮಕೂರಿಗೆ ಆಗಮಿಸಿ ಮದುವೆಯಾಗುವುದಾಗಿ ತೀರ್ಮಾನಿಸಿ ಪೊಲೀಸರಲ್ಲಿ ರಕ್ಷಣೆ ಕೋರಿದ್ದಾರೆ. ಆದರೆ ಇದಕ್ಕೆ ಪೊಲೀಸರು ನಿರಾಕರಿಸಿದ್ದಾರೆ.
ಮದುವೆ ಮಾಡಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಆ ಯುವತಿಯರು ಬೆದರಿಕೆ ಹಾಕಿದ್ದಾರೆ. ಬಳಿಕ ಇಬ್ಬರನ್ನು ಕೂಡ ಅವರವರ ಪೋಷಕರು ಕರೆದುಕೊಂಡು ಹೋಗಿದ್ದಾರೆ.

Comments
Post a Comment