ಚಿಕಿತ್ಸೆ ಫಲಿಸದೆ,ಅಪಘಾತಕ್ಕೀಡಾದ ಬೈಕ್ ಸವಾರನ ದುರ್ಮರಣ,
ಕೊಪ್ಪ:- ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ದುರ್ಮರಣ,
ಕೊಪ್ಪ:-ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕೊಪ್ಪದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಕೊನೆಯುಸಿರೆಳೆದಿದ್ದಾರೆ . ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಂದೂರು ಗ್ರಾಮದ ಅಚ್ಚರಡಿ ನಿವಾಸಿ ಕೃಪಾಕರ,22 ಮೃತಪಟ್ಟ ಯುವಕ .
ಕೃಪಾಕರ ಗುರುವಾರ ರಾತ್ರಿ ನರಸಿಂಹರಾಜಪುರ ಪಟ್ಟಣಕ್ಕೆ ಅಪಾಚೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಪಟ್ಟಣದ ಕುದುರೇಗುಂಡಿ ಸಮೀಪ ಎಮ್ಮೆಯೊಂದು ಅಡ್ಡಬಂದಿದ್ದರಿಂದ ಬೈಕ್ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿತ್ತು . ಅವಘಡದಲ್ಲಿ ಗಂಭೀರ ಗಾಯಗೊಂಡಿದ್ದ ಕೃಪಾಕರ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು . ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವುಬದುಕಿನ ಮಧ್ಯೆ ಹೋರಾಡುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ,
ಘಟನೆಗೆ ಸಂಬಂಧಿಸಿದ ಕೊಪ್ಪ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ,
🖋ಮಜೀದ್ ಕೊಪ್ಪ


Comments
Post a Comment