ಕೈ ಪಾಲಾದ ಹರಿಹರಪುರ ಗ್ರಾಮ ಪಂಚಾಯಿತಿ ಅಧಿಕಾರ,
ಹರಿಹರಪುರ ಪಂಚಾಯಿತಿ ಯಲ್ಲಿ 5 ಬಿಜೆಪಿ ಬೆಂಬಲಿತ ಸದಸ್ಯರು ಹಾಗೂ 4 ಕಾಂಗ್ರೆಸ್ ಬೆಂಬಲಿತ ಸದಸ್ಯರಿದ್ದರು . ಈ ಹಿಂದೆ ಅಧ್ಯಕ್ಷರಾಗಿದ್ದ ಮೊಹಮ್ಮದ್ ಶರೀಫ್ ಅವರ ಅಧ್ಯಕ್ಷ ಅವಧಿ ಮುಗಿದ ನಂತರ ವೆಂಕಟೇಶ್ ಎಂಬುವವರು ಅಧ್ಯಕ್ಷರಾಗಬೇಕಿತ್ತು , ಆದರೆ ಇಂದು ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ನಡೆದ ಈ ಬೆಳವಣಿಗೆಯಲ್ಲಿ ನಾಲ್ವರು ಕಾಂಗ್ರೆಸ್ ಬೆಂಬಲಿತ ಸದಸ್ಯರ ಬೆಂಬಲದೊಂದಿಗೆ ಮೊಹಮ್ಮದ್ ಶರೀಫ್ ಅವರು ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ .
ಕಳೆದ ಗ್ರಾಮ ಪಂಚಾಯಿತಿ ಚುನಾವಣೆ ನಂತರ ಬಿಜೆಪಿ ಸದಸ್ಯರ ಬೆಂಬಲದೊಂದಿಗೆ ಹರಿಹರಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ಬಿಜೆಪಿ ಬೆಂಬಲಿತ ಮೊಹಮ್ಮದ್ ಶರೀಫ್ ಅವರು ಇಂದು ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ದಿಢೀರ್ ಬೆಳವಣಿಗೆಯಲ್ಲಿ ಕಮಲಕ್ಕೆ ಗುಡ್ ಬೈ ಹೇಳಿ ಬಿಜೆಪಿಗೆ ಹೂ ಮುಡಿಸಿ ಕಾಂಗ್ರೆಸ್ ಜೊತೆಗೆ ಸ್ನೇಹ ಚಾಚಿದ್ದಾರೆ . ಈ ಮೂಲಕ ಕಾಂಗ್ರೆಸ್ ಸದಸ್ಯರ ಬೆಂಬಲದೊಂದಿಗೆ ಪುನಃ ಹರಿಹರಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ .
🖊️ ವೀರಮಣಿ


Comments
Post a Comment