ಖ್ಯಾತ ಹಾಸ್ಯ ನಟ ಮೋಹನ್ ಜುನೇಜ ಇನ್ನಿಲ್ಲ...ಕಂಬನಿ ಮಿಡಿದ ಕನ್ನಡ ಚಿತ್ರರಂಗ,

 

ಖ್ಯಾತ ಹಾಸ್ಯ ನಟ ಮೋಹನ್ ಜುನೇಜ ಇನ್ನಿಲ್ಲ...ಕಂಬನಿ ಮಿಡಿದ ಕನ್ನಡ ಚಿತ್ರರಂಗ,


 ಬೆಂಗಳೂರು:- ಕನ್ನಡದ ಖ್ಯಾತ ಹಾಸ್ಯ ನಟ ಮೋಹನ್ ಜುನೇಜ ಅವರು ನಿನ್ನೆ ರಾತ್ರಿ ಅನಾರೋಗ್ಯದಿಂದ ನಿಧನರಾಗಿದ್ದಾರೆ ಎನ್ನುವ ಮಾಹಿತಿ ತಿಳಿದು ಬಂದಿದೆ.


ಮೋಹನ್ ಅವರ ನಿಧನಕ್ಕೆ ಅವರ ಆಪ್ತರು, ಅಭಿಮಾನಿಗಳು ಕಣ್ಣೀರು ಮಿಡಿದಿದ್ದಾರೆ.  ನೂರಾರು ಚಿತ್ರಗಳಲ್ಲಿ ವಿವಿಧ ರೀತಿಯ ಪಾತ್ರ ಮಾಡಿರುವ ಮೋಹನ್ ಅವರು ಹಾಸ್ಯ ಪಾತ್ರದಲ್ಲಿ ಹೆಚ್ಚು ಮಿಂಚಿದ್ದರು.


ಕೆಜಿಎಫ್ ಚಿತ್ರದಲ್ಲಿ ಕೂಡ ಪಾತ್ರ ಮಾಡಿದ್ದ ಮೋಹನ್ ಅವರು ಜನರ ಮನಸ್ಸನ್ನು ಗೆದ್ದಿದ್ದರು.  ನಿನ್ನೆ ರಾತ್ರಿ ಮೋಹನ್ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಅವರನ್ನು ತಕ್ಷಣವೇ ಚಿಕ್ಕಬಾಣಾವರ ಸಪ್ತಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಇಂದು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.



🖊️,ವೇಣು ಗೋಪಾಲ್

Comments

Popular posts from this blog

ಕೊಪ್ಪ ಬಸ್ ನಿಲ್ದಾಣದ ಸಂಚಾರ ಸಮಸ್ಯೆಗೆ ಶಾಶ್ವತ ಪರಿಹಾರ – ಕೆಡಿಪಿ ಸದಸ್ಯ ಮಹಮ್ಮದ್ ಸಾದಿಕ್ ಅವರ ಸಮಯೋಚಿತ ಕ್ರಮಕ್ಕೆ ಸಾರ್ವಜನಿಕರ ಮೆಚ್ಚುಗೆ,

ಆಪತ್ತಿನ ಕ್ಷಣದಲ್ಲಿ ಜೀವ ಉಳಿಸಿದ ಕೊಪ್ಪ ಅಗ್ನಿಶಾಮಕ ದಳ – ಸಮಯಪ್ರಜ್ಞೆಯ ಕಾರ್ಯಾಚರಣೆಗೆ ಸಾರ್ವಜನಿಕರ ಮೆಚ್ಚು

ಕೊಪ್ಪ,ಅಕ್ರಮವಾಗಿ ಜಾನುವಾರು ಸಾಗಾಟ ಆರೋಪ: ಇಬ್ಬರ ವಶ, ವಾಹನ ಜಪ್ತಿ,