ಜೂನ್ 6 ಕ್ಕೆ ಬಾಳೆಹೊನ್ನುರ್ ಬಂದ್,ಬೃಹತ್ ಪ್ರತಿಭಟನೆಯೊಂದಿಗೆ ರಸ್ತೆ ತಡೆ,


 

ಬಾಳೆಹೊನ್ನೂರು:- ಪಟ್ಟಣದ ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವಂತೆ ಒತ್ತಾಯಿಸಿ ಜೂನ್ 6 ಕ್ಕೆ ಬೃಹತ್ ಪ್ರತಿಭಟನೆಯೊಂದಿಗೆ ರಸ್ತೆ ತಡೆ ಮಾಡಿ ಬಾಳೆಹೊನ್ನೂರು ಬಂದ್ ಗೆ ಕರೆ ನೀಡಲಾಗಿದೆ,


ಈ ಹಿಂದೆ ಸಾರ್ವಜನಿಕರು ಹಲವು ಬಾರಿ ಮನವಿ ಮಾಡಿದ್ದರೂ ಆಸ್ಪತ್ರೆ ಮೇಲ್ದರ್ಜೆಗೆ ಏರಿಸಿಲ್ಲ ಈ ನಿಟ್ಟಿನಲ್ಲಿ ಹೋರಾಟ ಕೈಗೆತ್ತಿಕೊಳ್ಳುವ ಮೂಲಕ ನ್ಯಾಯಕ್ಕಾಗಿ ಪಕ್ಷಾತೀತವಾಗಿ ಹೋರಾಟ ಮಾಡಲು ತೀರ್ಮಾನಿಸಲಾಗಿದೆ . 

ಸೋಮವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಹೋರಾಟ ಸಮಿತಿ ರಚಿಸಲಾಗಿದ್ದು ಸಮಿತಿಯ ಅಧ್ಯಕ್ಷರಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಇರಲಿದ್ದು , ಸದಸ್ಯರಾಗಿ ಸಾರ್ವಜನಿಕರು ಜನಪ್ರತಿನಿಧಿಗಳು ಇರಲಿದ್ದಾರೆ . ಪ್ರತಿಭಟನೆ ಜೂನ್ 6 ಕ್ಕೆ ಬೆಳಿಗ್ಗೆ 10 ಗಂಟೆಯಿಂದ ನಡೆಯಲಿದೆ .

 ಕಳೆದ ಅನೇಕ ವರ್ಷಗಳಿಂದ ನಿರಂತರವಾಗಿ ಜನಪ್ರತಿನಿಧಿಗಳಿಗೆ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವಂತೆ ಮನವಿ ಸಲ್ಲಿಸಿದರು ಕೂಡ ಯಾರು ಈ ಕುರಿತಾಗಿ ಗಂಭೀರ ಚಿಂತನೆಯನ್ನು ನಡೆಸಿಲ್ಲ , ಪಕ್ಷಾತೀತವಾಗಿ ಬಂದ್ ಗೆ ಕರೆ ನೀಡಲಾಗಿದೆ . ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವುದರಿಂದ ಈ ಭಾಗದ ಅನೇಕ ರೋಗಿಗಳಿಗೆ ಸುಲಭವಾಗಿ ಗುಣಮಟ್ಟದ ಚಿಕಿತ್ಸೆ ದೊರೆಯುತ್ತದೆ,


  ಅಂಬುಜ ಅಧ್ಯಕ್ಷರು , ಆಸ್ಪತ್ರೆ ಮೇಲ್ದರ್ಜೆಗಾಗಿ ಹೋರಾಟ ಸಮಿತಿ ಬಾಳೆಹೊನ್ನೂರು





🖋 ವೀರಮಣಿ,







Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?