ತೀರ್ಥಹಳ್ಳಿ ಪೋಲಿಸ್ ಠಾಣೆ ವ್ಯಾಪ್ತಿಯ ರೌಡಿ ಶೀಟರ್ ಗಳ ಪೆರೇಡ್..!
ತೀರ್ಥಹಳ್ಳಿ ಪೋಲಿಸ್ ಠಾಣೆ ವ್ಯಾಪ್ತಿಯ ರೌಡಿ ಶೀಟರ್ ಗಳ ಪೆರೇಡ್..!
ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದು, ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾದರೆ ಹುಷಾರ್,!
ಡಿವೈಎಸ್ಪಿ ಶಾಂತವೀರ ಖಡಕ್ ವಾರ್ನಿಂಗ್.
ತೀರ್ಥಹಳ್ಳಿ:-ಇತ್ತೀಚೆಗೆ ತೀರ್ಥಹಳ್ಳಿ ಡಿವೈಎಸ್ಪಿ ಶಾಂತವೀರ ರವರು ತಮ್ಮ ವಿಶೇಷ
ಕಲ್ಪನೆಯೊಂದಿಗೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳ ಸಹಕಾರದಿಂದ ತೀರ್ಥಹಳ್ಳಿ ತಾಲ್ಲೂಕಿನ ಒಂದಿಷ್ಟು ರೌಡಿಶೀಟರ್ ಗಳನ್ನು ಸನ್ನಡತೆಯ ಆಧಾರದ ಮೇಲೆ ರೌಡಿಶೀಟರ್ ಪಟ್ಟಿಯಿಂದ ಕೈಬಿಡಲಾಗಿದ್ದು ಅವರಿಗೆ ರೌಡಿಶೀಟರ್ ಹಣೆಪಟ್ಟಿಯನ್ನು ಮುಕ್ತಿಗೊಳಿಸಿ ಇನ್ನಾದರು ಜೀವನದಲ್ಲಿ ಉತ್ತಮ ಸಂಪನ್ಮೂಲ ವ್ಯಕ್ತಿಗಳಾಗಿ ಜೀವನ ನಡೆಸಿ ಯಾವುದೇ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗದೆ ಮತ್ತೊಮ್ಮೆ ಪುನ ರೌಡಿಶೀಟರ್ ಗಳ ಆಗಬೇಡಿ ಎಂದು ತಿಳಿಹೇಳಿ ರೌಡಿ ಶೀಟರ್ ಪಟ್ಟಿಯಿಂದ ಕೈಬಿಟ್ಟು ಅವರಿಗೆ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗಿದ್ದರು ಶಾಂತವೀರ ರವರಗೆ ಈ ವಿಶೇಷ ಕಾಳಜಿಗೆ ಅನೇಕ ಕುಟುಂಬಗಳು,ಸಾಮಾಜಿಕ ಚಿಂತಕರು ಹಾಗೂ ಮಾನವತೆಯ ಮಂದಿ ಹ್ಯಾಂಡ್ಸ್ ಆಫ್ ಹೇಳಿ ಶಿವಮೊಗ್ಗ ಪೊಲೀಸ್ ಇಲಾಖೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು.
ಡಿವೈಎಸ್ಪಿ ಶಾಂತವೀರ ರವರು
ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನಿರಂತರವಾಗಿ ಶ್ರಮಿಸುತ್ತಿದ್ದು,ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಪಟ್ಟಿಯಲ್ಲಿರುವವರ ಪರೇಡ್ ನಡೆಸಿದ ಶಾಂತವೀರ ರವರು ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದು ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿ ಸಮಾಜದ ಸ್ವಾಸ್ಥ ಹಾಳು ಮಾಡುವ ರೌಡಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದು ಸಮಾಜದಲ್ಲಿ ಉತ್ತಮ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ,ಎಚ್ಚರಿಕೆಯಿಂದ ಇರುವಂತೆಯೂ ರೌಡಿ ಪಟ್ಟಿಯಲ್ಲಿರುವವರಿಗೆ ಎಚ್ಚರಿಕೆ ನೀಡಿದ್ದಾರೆ.
ಖಡಕ್ ಪೊಲೀಸ್ ಅಧಿಕಾರಿಯಾಗಿರುವ ಶಾಂತವೀರ ರವರು ತೀರ್ಥಹಳ್ಳಿ ಡಿವೈಎಸ್ಪಿ ಅಧಿಕಾರ ವಹಿಸಿಕೊಂಡ ನಂತರ ಕೆಲವೊಂದು ಅಕ್ರಮ ಚಟುವಟಿಕೆಗಳಿಗೆ ಬ್ರೇಕ್ ಬಿದ್ದಿದ್ದು ಪಟ್ಟಣದಲ್ಲಿ ಪುಂಡು ಪೋಕರಿಗಳ ಹಾವಳಿ ಕಾಟ ಸ್ವಲ್ಪ ಮಟ್ಟಿಗೆ ನಿಯಂತ್ರಣಕ್ಕೆ ಬಂದಿದ್ದು
ಇವರ ಮಾರ್ಗದರ್ಶನದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನಿರಂತರವಾಗಿ ತೀರ್ಥಹಳ್ಳಿ ಪೊಲೀಸರು ಶ್ರಮಿಸುತ್ತಿದ್ದಾರೆ.
🖋 ವೀರಮಣಿ




Comments
Post a Comment