ಮರಿಯ ಬೇಕರಿ ಮೇಲೆ ದಾಳಿ,ಹೋಂ ಮೇಡ್ ವೈನ್ ವಶ,
ಬಾಳೆಹೊನ್ನುರು:- ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಮರಿಯ ಬೇಕರಿ ಮೇಲೆ ದಾಳಿ ನಡೆಸಿರುವ ಅಬಕಾರಿ ಪೊಲೀಸರು ಹೋಂ ಮೇಡ್ ವೈನ್ ನ್ನು ವಶಕ್ಕೆ ಪಡೆದಿದ್ದಾರೆ.
ಬೇಕರಿಯ ಮಾಲೀಕ ಸ್ಥಳದಿಂದ ಪರಾರಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬೇಕರಿ ಮೇಲೆ ದಾಳಿ ನಡೆಸಿರುವ ಅಬಕಾರಿ ಅಧಿಕಾರಿಗಳು 16.50 ಲೀಟರ್ ಹೋಂ ಮೇಡ್ ವೈನ್ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಹೆಚ್ಚಿನ ಮಾಹಿತಿಯನ್ನು ಅಧಿಕಾರಿಗಳು ಕಲೆ ಹಾಕುತ್ತಿದ್ದು ಆರೋಪಿ ಲಿಯೊನಾರ್ಡೋ ಡಿಸೋಜಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ.
ಘಟನಾ ಸಂಬಂಧ ಈ ರೀತಿಯ ಕೃತ್ಯಗಳಲ್ಲಿ ಭಾಗಿಯಾಗುವವರಿಗೆ ಎಚ್ಚರಿಕೆ ನೀಡಿರುವ ಅಧಿಕಾರಿಗಳು, ಅಕ್ರಮವಾಗಿ ಮದ್ಯ ಮಾರಾಟ ಹಾಗೂ ಶೇಖರಣೆ ಮಾಡುವುದು ಕಂಡು ಬಂದಲ್ಲಿ ಕಾನೂನಿನ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂಬುದಾಗಿ ತಿಳಿಸಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಅಬಕಾರಿ ಇನ್ಸ್ಪೆಕ್ಟರ್ ವಿಠಲ ಪಿ, ಜೀರಂಕಲಗಿ. ಸಬ್ ಇನ್ಸ್ಪೆಕ್ಟರ್ ಎಸ್.ಹೆಚ್ ರೇಖಾ, ಎಂ.ವಿ ಲೋಕೇಶ್, ಕಿಜಾರ್ ಅಹ್ಮದ್ ಸೇರಿದಂತೆ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.
🖊️ ವೀರಮಣಿ


Comments
Post a Comment