ಚಾಲಕನ ನಿಯಂತ್ರಣ ತಪ್ಪಿ,ಭೀಕರ ಅಪಘಾತಕ್ಕೆ ಏಳುಮಂದಿ ಬಲಿ,


 

ಬೆಳಗಾವಿ: ಭೀಕರ ರಸ್ತೆ ಅಪಘಾತಕ್ಕೆ ಏಳು ಮಂದಿ ಬಲಿ ಮೂವರು ಗಂಭೀರ,


ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಕ್ರೂಸರ್ ವೊಂದು ನಾಲೆಗೆ ಉರುಳಿಬಿದ್ದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ ಘಟನೆ ತಾಲೂಕಿನ ಕಣಬರಗಿ ಸಮೀಪ ರವಿವಾರ ಬೆಳಗ್ಗೆ ನಡೆದಿರುವುದು ವರದಿಯಾಗಿದೆ.


ದಿನಗೂಲಿ ಕೆಲಸಕ್ಕೆಂದು ಗೋಕಾಕ್ ತಾಲೂಕಿನ ಅಕ್ಕತಂಗಿಯರ ಹಾಳ ಗ್ರಾಮದಿಂದ ಬೆಳಗಾವಿಗೆ ಬರುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಗಾಲೆಗೆ ಉರುಳಿಬಿದ್ದಿದೆ. ಈ ವೇಳೆ ಕ್ರೂಸರನಲ್ಲಿದ್ದವರ ಪೈಕಿ ಏಳು ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇನ್ನೂ ಮೂವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕ್ರೂಸರ್ ನಲ್ಲಿ 12 ಮಂದಿ ಇದ್ದರೆನ್ನಲಾಗಿದೆ. ಅಪಘಾತಕ್ಕೀಡಾದ ಕ್ರೂಸರ್ ಸಂಪೂರ್ಣ ನಜ್ಜುಗುಜ್ಜಾಗಿದೆ.


ಮಾರಿಹಾಳ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಭೇಟಿ ನೀಡಿದ್ದಾರೆ.






Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?