Nr ಪುರ:- ರಾತ್ರಿಯ ವೇಳೆಯಲ್ಲಿ ನಡೆದ ಬೈಕ್ ಅಪಘಾತದಲ್ಲಿ ಮೃತಪಟ್ಟ ಇಬ್ಬರು ಯುವಕರು,!
Nr ಪುರ:- ರಾತ್ರಿಯ ವೇಳೆಯಲ್ಲಿ ನಡೆದ ಬೈಕ್ ಅಪಘಾತದಲ್ಲಿ ಮೃತಪಟ್ಟ ಇಬ್ಬರು ಯುವಕರು,
ಭದ್ರಾವತಿಯ ಜಂಕ್ಷನ್ ಸರ್ಕಲ್ ನಿಂದ ಒಂದು ಕಿಲೋಮೀಟರ್ ಅಂತರದಲ್ಲಿ ಬೈಕ್ ನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ಬೈಕ್ ನಲ್ಲಿದ್ದ ಉತ್ತಮ್ ಹಾಗೂ ಮನೋಜ್ ಮೃತಪಟ್ಟ ಇಬ್ಬರೂ ಯುವಕರು,
ಮೃತರ ಶರೀರವನ್ನು ಭದ್ರಾವತಿಯ ಆಸ್ಪತ್ರೆಯಲ್ಲಿರಿಸಲಾಗಿದ್ದು ಮರಣೋತ್ತರ ಪರೀಕ್ಷೆಯ ನಂತರ ಮೃತ ಯುವಕರ ದೇಹವನ್ನು ನರಸಿಂಹರಾಜಪುರಕ್ಕೆ ತರಲಾಗುವುದು ಎಂಬ ಮಾಹಿತಿ ದೊರಕಿದೆ.
ನಿನ್ನೆ ರಾತ್ರಿ 10-30 ರ ಸಮಯದಲ್ಲಿ ಕುವೆಂಪು ವಿದ್ಯಾರ್ಥಿಗಳಾದ ಉತ್ತಮ ಚಕ್ರವರ್ತಿ, ಮನೋಜ್ ಎಂಬ ಇಬ್ವರು ವಿದ್ಯಾರ್ಥಿಗಳು ಶಂಕರಘಟ್ಟದಿಂದ ಭದ್ರಾವತಿಗೆ ಹೋಗುವಾಗ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾರೆ.
ಡಿಕ್ಕಿಯಿಂದಾಗಿ ಇಬ್ಬರೂ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಉತ್ತಮ ಚಕ್ರವರ್ತಿ ಮತ್ತು ಮನೋಜ್ ಇಬ್ವರೂ ಸಹ ಎನ್ ಆರ್ ಪುರದ ನಿವಾಸಿಗಳಾಗಿದ್ದು, ಉತ್ತಮ್ ಎಂಸಿಎ ದ್ವಿತೀಯ ವರ್ಷದಲ್ಲಿ ಓದುತ್ತಿದ್ದರೆ, ಮನೋಜ್ ಎಂಕಾಂನಲ್ಲಿ ಓದುತ್ತಿದ್ದಾರೆ. ಪ್ರಕರಣ ಭದ್ರಾವತಿ ಗ್ರಾಮಾಂತರ ಠಾಣ ವ್ಯಾಪ್ತಿಯಲ್ಲಿ ನಡೆದಿದೆ.
🖊️ಮಜೀದ್ ಕೊಪ್ಪ



Comments
Post a Comment