ರಾತ್ರೋ ರಾತ್ರಿ ಆದೇಶ ವಾಪಸ್,ತೀವ್ರ ವಿರೋಧಕ್ಕೆ ಶರಣಾದ ಸರ್ಕಾರ,!
ರಾತ್ರೋ ರಾತ್ರಿ ಆದೇಶ ವಾಪಸ್,ತೀವ್ರ ವಿರೋಧಕ್ಕೆ ಶರಣಾದ ಸರ್ಕಾರ,!
ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಗಳ ಕಚೇರಿಗಳಲ್ಲಿ ಅಧಿಕಾರಿಗಳ ಪೂರ್ವಾನುಮತಿ ಇಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ, ವಿಡಿಯೋ ತೆಗೆಯುವುದನ್ನು ಸರ್ಕಾರ ನಿಷೇಧಿಸಿ ನಿನ್ನೆ ಆದೇಶಿಸಿದ್ದ ರಾಜ್ಯ ಸರ್ಕಾರ, ತೀವ್ರ ವಿರೋಧಕ್ಕೆ ಮಣಿದು ರಾತ್ರೋರಾತ್ರಿ ಆದೇಶ ಹಿಂಪಡೆದಿದೆ.
‘ಶೇ 40ರ ಲಂಚದ ಆಪಾದನೆಗೆ ಗುರಿಯಾಗಿದ್ದ ಸರ್ಕಾರ, ಭ್ರಷ್ಟಾಚಾರ ನಡೆಯಲು ಅನುಕೂಲ ಮಾಡಿಕೊಡುವುದಕ್ಕಾಗಿ ಈ ನಿಷೇಧ ಹೇರಿದೆ’ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಅಲ್ಲದೇ ವಿರೋಧ ಪಕ್ಷದ ನಾಯಕರೂ ಕೂಡ ಸರ್ಕಾರದ ಈ ನಡೆಯನ್ನು ಖಂಡಿಸಿದ್ದರು.
ಸರ್ಕಾರದ ವಿರುದ್ಧ ಸಾಕಷ್ಟು ಟೀಕೆಗಳು ಕೇಳಿಬರುತ್ತಿದ್ದಂತೆ ರಾತ್ರೋರಾತ್ರಿ ಈ ಆದೇಶವನ್ನು ಸರ್ಕಾರ ವಾಪಸ್ ಪಡೆದಿದೆ.


Comments
Post a Comment