ಮಂಡ್ಯ:- ಹಿರಿಯ ಅಧಿಕಾರಿ ಭೇಟಿ ವೇಳೆ ಅಶಿಸ್ತು ತೋರಿದ ಪೇದೆ ಸಸ್ಪೆಂಡ್.!


ಮಂಡ್ಯ:- ಹಿರಿಯ ಅಧಿಕಾರಿ ಭೇಟಿ ವೇಳೆ ಅಶಿಸ್ತು ತೋರಿದ ಪೇದೆ ಸಸ್ಪೆಂಡ್.!



ಹಿರಿಯ ಅಧಿಕಾರಿ ಭೇಟಿ ವೇಳೆ ಅಶಿಸ್ತು ತೋರಿದ ಪೇದೆ ಸಸ್ಪೆಂಡ್.!ಆದೇಶ ಹೊರಡಿಸಿದ ಮಂಡ್ಯ ಜಿಲ್ಲಾ ಪೋಲಿಸ್ ಅಧೀಕ್ಷಕ ಎನ್.ಯತೀಶ್..!


ಮಂಡ್ಯ :- ಮದ್ದೂರು ಪಟ್ಟಣದ ಪೋಲೀಸ್ ಠಾಣೆಗೆ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದ ಸಂದರ್ಭದಲ್ಲಿ ಸಮವಸ್ತ್ರ ಧರಿಸುವಲ್ಲಿ ಅಶಿಸ್ತು ತೋರಿದ ಹಿನ್ನೆಲೆಯಲ್ಲಿ ಪೇದೆಯೊಬ್ಬನನ್ನು ಅಮಾನತು ಮಾಡಿ ಮಂಡ್ಯ ಜಿಲ್ಲಾ ಪೋಲಿಸ್ ಅಧೀಕ್ಷಕ ಎನ್.ಯತೀಶ್ ಆದೇಶ ಹೊರಡಿಸಿದ್ದಾರೆ.

ಮದ್ದೂರು ಪಟ್ಟಣದ ಪೋಲೀಸ್ ಠಾಣೆಗೆ ಮಂಗಳವಾರ ದಕ್ಷಿಣ ವಲಯ ಐಜಿಪಿ ಪ್ರವೀಣ್ ಮಧುಕರ್ ಪವಾರ್ ಭೇಟಿ ನೀಡಿದ್ದರು. ಠಾಣೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮದ್ದೂರು ಪೋಲೀಸ್ ಠಾಣೆಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಯೋಗ ಕ್ಷೇಮವನ್ನು ವಿಚಾರಿಸಿ, ಯಾವುದಾದರೂ ಸಮಸ್ಯೆಗಳಿದ್ದರೆ ತಮ್ಮ ಬಳಿ ಮುಕ್ತವಾಗಿ ಚರ್ಚಿಸಬಹುದು ಎಂದು ಐಜಿಪಿ ಪ್ರವೀಣ್ ಮಧುಕರ್ ಪವಾರ್ ಮನವಿ ಮಾಡಿದರು.ಪ್ರತಿಯೊಬ್ಬ ಸಿಬ್ಬಂದಿಗಳ ಸಮಸ್ಯೆಗಳನ್ನು ಸ್ವತಃ ತಾವೇ ಖುದ್ದಾಗಿ ವಿಚಾರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಮದ್ದೂರು ಸಂಚಾರಿ ಪೊಲೀಸ್ ಠಾಣೆಯ ಪೇದೆ ಕೃಷ್ಣಮೂರ್ತಿ (489) ಅವರು ಸಮವಸ್ತ್ರ ಧರಿಸುವಲ್ಲಿ ಅಶಿಸ್ತಿನಿಂದ ವರ್ತಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಪೋಲಿಸ್ ಅಧೀಕ್ಷಕ ಎನ್.ಯತೀಶ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.





🖊️ ವೀರಮಣಿ



Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?