ಅಂಗಡಿಗಳಲ್ಲಿ ಅನಧಿಕೃತ ಮದ್ಯ ಮಾರಾಟ ಮಾಡಿದರೆ,ಪರವಾನಿಗೆ ರದ್ದು,!
ಶಿವಮೊಗ್ಗ : ಅನಧಿಕೃತವಾಗಿ ಮದ್ಯ ಮಾರಾಟ ಮಾಡುವ ಅಂಗಡಿಗಳ ಪರವಾನಿಗೆ ರದ್ದುಪಡಿಸಿ ಕಾನೂನು ಕ್ರಮ ಜರುಗಿಸುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು .
ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮದ್ಯ ಮತ್ತು ಮಾದಕ ವಸ್ತುಗಳ ಬಳಕೆ ನಿಯಂತ್ರಣಕ್ಕಾಗಿ , ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜತೆಯಲ್ಲಿ ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುವ ಕುರಿತು ಆಯೋಜಿಸಲಾಗಿದ್ದ ಸಭೆಯಲ್ಲಿ ಮಾತನಾಡಿ ಅವರು , ರಾಜ್ಯವನ್ನು ವ್ಯಸನಮುಕ್ತಗೊಳಿಸಲು ಆಂದೋಲನದ ರೀತಿಯಲ್ಲಿ ಸರ್ಕಾರ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸುತ್ತಿದೆ . ಕಳೆದ ಸಾಲಿನಲ್ಲಿ ಟನ್‌ಗಟ್ಟಲೆ ಮಾದಕ್ಕ ವಸ್ತುಗಳನ್ನು ಪೊಲೀಸ್ ಇಲಾಖೆ ವಶಪಡಿಸಿಕೊಂಡಿದ್ದು , ಕಳೆದ ತಿಂಗಳು ನಾಶಗೊಳಿಸಲಾಗಿದೆ . ಆದರೆ ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರ ಸಹಕಾರವಿಲ್ಲದೆ ಈ ಪಿಡುಗನ್ನು ಸಂಪೂರ್ಣ ನಿರ್ಮೂಲನೆ ಮಾಡಲು ಸಾಧ್ಯವಿಲ್ಲ .
ಶಿವಮೊಗ್ಗ ಜಿಲ್ಲೆಯನ್ನು ವ್ಯಸನ ಮುಕ್ತ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳು ಸಂಘ ಸಂಸ್ಥೆಗಳ ಜತೆ ಕೈಜೋಡಿಸಿ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು . ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ , ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಪದಾಧಿಕಾರಿಗಳು , ವಿವಿಧ ಇಲಾಖಾ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು .
🖊️ ವೀರಮಣಿ

Comments
Post a Comment