ಹುಬ್ಬಳ್ಳಿ, ಸರಳವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಬರ್ಬರ ಹತ್ಯೆ,!
ಹುಬ್ಬಳ್ಳಿ : ಹುಬ್ಬಳ್ಳಿಯ ಖಾಸಗಿ ಹೋಟೆಲಿನಲ್ಲಿ ಸರಳವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಕೊಲೆ ಮಾಡಿರುವ ಘಟನೆ ನಡೆದಿದೆ .
ಮಂಗಳವಾರ ಬೆಳಗ್ಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ . ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸ್ ಆಯುಕ್ತ ಲಾಭೂರಾಮ , ಡಿಸಿಪಿ ಸಾಹಿಲ್ ಬಾಗ್ಲಾ ಪರಿಶೀಲನೆ ನಡೆಸಿದ್ದಾರೆ .
ಕರ್ನಾಟಕದ ಖ್ಯಾತ ವಾಸ್ತುತಜ್ಞ ಜ್ಯೋತಿಷಿಯಾಗಿದ್ದ ಚಂದ್ರಶೇಖರ ಗುರೂಜಿ ವಾಸ್ತು ಪರಿಹಾರದಲ್ಲಿ ಖ್ಯಾತಿಯಾಗಿದ್ದರು . ಇನ್ನೂ ಹುಬ್ಬಳ್ಳಿಯಲ್ಲಿ ತಮ್ಮ ನಿವಾಸದಿಂದ ಹೋಟೆಲ್'ಗೆ ಹೋಗಿದ್ದಾಗ , ಗುರೂಜಿಯನ್ನು ಹತ್ಯೆ ಮಾಡಲಾಗಿದೆ, ಭಕ್ತರ ಸೋಗಿನಲ್ಲಿ ಬಂದ ಇಬ್ಬರು ಯುವಕರು ಚಂದ್ರಶೇಖರ ಗುರೂಜಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿ ಎಸ್ಕೆಪ್ ಆಗಿದ್ದಾರೆ . ಸ್ಥಳಕ್ಕೆ ಪೊಲೀಸ್ ಕಮಿಷನರ್ ಲಾಬೂರಾವ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ . ಅಲ್ಲದೇ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ .

Comments
Post a Comment