ಕೊಪ್ಪ, ಸಾರ್ವಜನಿಕ ಗಣೇಶೋತ್ಸವಕ್ಕೆ ನಿಯಮ,ಡಿ ಜೆ,ಹಾಕಲು ಅನುಮತಿಯಿಲ್ಲ,


 


ಸಾರ್ವಜನಿಕ ಗಣೇಶೋತ್ಸವಕ್ಕೆ ವಿಧಿಸಿರುವ ನಿಯಮಾವಳಿಗಳು,



1)ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಪೊಲೀಸ್ ಇಲಾಖೆ ಅನುಮತಿ ಕಡ್ಡಾಯ,

2)ನ್ಯಾಯಾಲಯದ ನಿರ್ದೇಶನದಂತೆ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ಧ್ವನಿವರ್ಧಕ ಬಳಕೆಗೆ ಅವಕಾಶ, 3)ಡಿ.ಜೆ. ಹಾಕಲು ಅನುಮತಿಯಿಲ್ಲ .

4) ಬೇರೆ ಧರ್ಮಗಳ ಜನರ ಭಾವನೆಗಳಿಗೆ ಧಕ್ಕೆತರುವಂತೆ ನಡೆದುಕೊಳ್ಳುವಂತಿಲ್ಲ .

5) ಮೂರ್ತಿ ಪ್ರತಿಷ್ಠಾಪನೆ ವೇಳೆ ಮೈಕ್ , ಪೊಲೀಸ್ , ವಿದ್ಯುತ್ ಇಲಾಖೆಯಿಂದ ಅನುಮತಿ ಪಡೆಯಲು ಏಕಗವಾಕ್ಷಿ ವ್ಯವಸ್ಥೆ . 6)ಪೊಸ್ಟರ್ , ಬ್ಯಾನರ್ ಅಳವಡಿಸಲು ಸ್ಥಳೀಯ ಆಡಳಿತದಿಂದ ಅನುಮತಿ ಕಡ್ಡಾಯ .

7)ಸಂಜೆ 6 ಗಂಟೆಯ ಒಳಗೆ ಗಣೇಶ ಮೂರ್ತಿಗಳನ್ನು ವಿಸರ್ಜಿಸಲು ಸೂಚನೆ .



ಕೇವಲ ಎಂಟು ದಿನಗಳಲ್ಲಿ ದೇಶಾದ್ಯಂತ ಗಣೇಶ ಚತುರ್ಥಿಯನ್ನು ಸಂಭ್ರಮದಿಂದ ಆಚರಿಸುವ ಸಲುವಾಗಿ ವಿವಿಧ ಸಾರ್ವಜನಿಕ ಮಂಡಳಿ ಹಾಗೂ ಊರಿನ ಜನರು ಭರದಿಂದ ಸಿದ್ಧತೆಗಳನ್ನು ಆರಂಭಿಸಿದ್ದಾರೆ . ಕಳೆದೆರಡು ವರ್ಷಗಳಿಂದ ಕೋವಿಡ್ ಮಹಾಮಾರಿ ಸೋಂಕು ಹೆಚ್ಚಿದ್ದರಿಂದ ಗಣೇಶ ಚತುರ್ಥಿಗೆ ತೀವ್ರ ಕಟ್ಟುನಿಟ್ಟಿನ ಸೂಚನೆಗಳಿದ್ದವು . ಈ ಬಾರಿ ಅದ್ದೂರಿಯಾಗಿ ಗಣೇಶೋತ್ಸವದ ತಯಾರಿಯಲ್ಲಿ ತೊಡಗಿದ್ದ ಮಂಡಳಿಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕೆಲ ನಿಯಮಗಳನ್ನು ವಿಧಿಸಿದ್ದು ಈ ಎಲ್ಲಾ ನಿಯಮಾವಳಿಗಳನ್ನು ಪಾಲಿಸಿಕೊಂಡು ಗಣೇಶೋತ್ಸವ ಆಚರಿಸುವಂತೆ ತಿಳಿಸಲಾಗಿದೆ,


ಈ ಕುರಿತಾಗಿ ಬಾಳೆಹೊನ್ನೂರಿನಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಕೊಪ್ಪ ಉಪವಿಭಾಗದ 9 ಠಾಣಾ ವ್ಯಾಪ್ತಿಯಲ್ಲಿ 199 ಕ್ಕೂ ಅಧಿಕ ಕಡೆಗಳಲ್ಲಿ ಗಣಪತಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುತ್ತದೆ . ಅದರಲ್ಲಿ 6-7 ಸ್ಥಳಗಳನ್ನು ಸೂಕ್ಷ್ಮ ಪ್ರದೇಶಗಳೆಂದು ಗುರುತಿಸಲಾಗಿದೆ . ಯಾವುದೇ ಅಹಿತಕರ ಘಟನೆಗಳು ಸಂಭವಿಸದ ಹಿನ್ನೆಲೆ ಅಗತ್ಯ ಕ್ರಮಗಳನ್ನು ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ಕೈಗೊಳ್ಳಲಿದೆ ಎಂದರು .


ವಿಸರ್ಜನಾ ಸಮಯ ವಿಸ್ತರಣೆಗೆ ಸಾರ್ವಜನಿಕರ ಮನವಿ : ಸಂಜೆ 6 ಗಂಟೆಯ ಒಳಗೆ ಗಣಪತಿ ಮೂರ್ತಿಗಳನ್ನು ವಿಸರ್ಜನೆ ಮಾಡಬೇಕು ಎಂಬುದಾಗಿ ಹೊರಡಿಸಿರುವ ನಿಯಮವನ್ನು ಸಡಿಲಿಕೆ ಮಾಡುವಂತೆ ಸಾರ್ವಜನಿಕರು ಕೋರಿದ್ದು ಸಂಜೆ ಆರು ಗಂಟೆಯ ಒಳಗೆ ಗಣಪತಿ ವಿಸರ್ಜನೆ ಅಸಾಧ್ಯ , ಕಳೆದ ಎರಡು ವರ್ಷಗಳಿಂದ ಕೊರೋನ ನಿಯಮಾವಳಿಗಳಿಂದ ಅದ್ದೂರಿ ಆಚರಣೆ ಹಾಗೂ ಗಣೇಶ ವಿಸರ್ಜನೆ ನಡೆದಿರಲಿಲ್ಲ . ಈ ಬಾರಿ ಗಣೇಶ ಹಬ್ಬವನ್ನು ಸಾರ್ವಜನಿಕವಾಗಿ ಸಂಭ್ರಮದಿಂದ ಆಚರಿಸಲಾಗುತ್ತದೆ ಆದ ಕಾರಣ ಕನಿಷ್ಠ ಎಂಟು ಗಂಟೆಯವರೆಗಾದರೂ ಸಮಯ ನೀಡಬೇಕು ಎಂದರು . ಈ ಕುರಿತಾಗಿ ಪ್ರತಿಕ್ರಿಯೆ ನೀಡಿದ ಎಸ್ಪಿ ಉಮಾ ಪ್ರಶಾಂತ್ ಗಣಪತಿ ವಿಸರ್ಜನೆಗೆ ಎಂಟು ಗಂಟೆವರೆಗೆ ಅವಕಾಶ ನೀಡುವ ಕುರಿತಾಗಿ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದರು .






🖊️ ವೀರಮಣಿ ಬಾಳೆಹೊನ್ನುರು

Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?