ಜಯಪುರ,ಬೈಕಿಗೆ ಡಿಕ್ಕಿ ಹೊಡೆದ ಕಾರ್, ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಘಟನೆ ಶಾಂತಿಪುರದಲ್ಲಿ ನಡೆದಿದೆ,
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹೇರೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಂತಿಪುರದ ಬಳಿ ಮಾರುತಿ ರಿಟ್ಸ್ ಕಾರು ಹಾಗೂಪಲ್ಸರ್ ಬೈಕ್ ನಡುವೆ ಭೀಕರ ಅಪಘಾತ, ಕಾರು ಚಾಲಕನ ನಿಯಂತ್ರಣ ತಪ್ಪಿ ಬೈಕಿಗೆ ಗುದ್ದಿದ್ದ ಕಾರು ರಸ್ತೆ ಬದಿಯಲ್ಲಿದ್ದ ಮನೆಯೊಂದಕ್ಕೆ ಗುದ್ದಿ ಮಗುಚಿ ಬಿದ್ದಿದೆ . ಕಾರು ಗುದ್ದಿದ ರಭಸಕ್ಕೆ ಮನೆಯ ಗೋಡೆ ಕುಸಿದು ಬಿದ್ದಿದ್ದು , ಮನೆಯಲ್ಲಿದ್ದವರಿಗೆ ಯಾವುದೇ ಅಪಾಯಕ್ಕೊಳಗಾಗಾದೆ ಸುರಕ್ಷಿತವಾಗಿದ್ದಾರೆ .
ಶುಕ್ರವಾರ ಮಧ್ಯಾಹ್ನ ಬಾಳೆಹೊನ್ನೂರು ಕಡೆಯಿಂದ ಬರುತ್ತಿದ್ದ ಕಾರು ಜಯಪುರ ಕಡೆಯಿಂದ ಬರುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದು ಭದ್ರಾವತಿ ಮೂಲದ ಬೈಕಿನ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು , ಆತನನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ . ಕಾರಿನ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು , ಕಾರಿನ ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ .
🖋 ವೀರಮಣಿ


Comments
Post a Comment