ಆನೆ ದಾಳಿಗೆ ಮಹಿಳೆ ಬಲಿ, ಶಾಸಕ ಎಂ ಪಿ ಕುಮಾರಸ್ವಾಮಿ ಮೇಲೆ ಹಲ್ಲೆ !?


 

ಆನೆ ದಾಳಿಗೆ ಮಹಿಳೆ ಬಲಿ, ಶಾಸಕ ಎಂ ಪಿ ಕುಮಾರಸ್ವಾಮಿ ಮೇಲೆ ಹಲ್ಲೆ !?



ಚಿಕ್ಕಮಗಳೂರು:- ಜಿಲ್ಲೆಯ ಮೂಡಿಗೆರೆ ತಾಲೂಕಿನ ಹುಲ್ಲೆಮನೆ ಕುಂದೂರು ಗ್ರಾಮದಲ್ಲಿ ಕಾಡಾನೆ ತುಳಿದು ಮಹಿಳೆ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.


ಮಹಿಳೆಯ ಶವ ಇಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿರುವ ಆರೋಪ ಕೇಳಿ ಬಂದಿದೆ. ಭಾನುವಾರ ಬೆಳಗ್ಗೆ 7.30ಕ್ಕೆ ಕಾಡಾನೆ ತುಳಿದು ಮಹಿಳೆ ಸಾವನ್ನಪ್ಪಿದ್ದು, ಸಂಜೆ 6 ಗಂಟೆಗೆ ಗ್ರಾಮಕ್ಕೆ ಶಾಸಕ ಎಂ.ಪಿ.ಕುಮಾರಸ್ವಾಮಿ ತೆರಳಿದ್ದಾರೆ. ಈ ವೇಳೆ ಗ್ರಾಮಸ್ಥರು ಹಾಗೂ ಶಾಸಕರ ನಡುವೆ ಮಾತಿನ ಚಕಮಕಿ ನಡೆದಿದೆ. ಶಾಸಕ ಕುಮಾರಸ್ವಾಮಿ ಅವರನ್ನು ಪ್ರತಿಭಟನಾಕಾರರು ತರಾಟೆಗೆ ತೆಗೆದುಕೊಂಡಿದ್ದು, ಪ್ರಶ್ನೆ ಮಾಡಿದ ಜನರ ಮೇಲೆ ಪೊಲೀಸರು ಲಾಠಿ ಬೀಸಿರುವ ಆರೋಪ ಕೇಳಿ ಬಂದಿದೆ.


ಅಲ್ಲದೇ ಗ್ರಾಮದಿಂದ ಜೀಪ್ ನಲ್ಲಿ ಕೂರಿಸಿಕೊಂಡು ಶಾಸಕರನ್ನು ಪೊಲೀಸರು ಗ್ರಾಮದಿಂದ ಹೊರ ತಂದಿದ್ದಾರೆ. ಈ ವೇಳೆ ಶಾಸಕ ಎಂ.ಪಿ.ಕುಮಾರಸ್ವಾಮಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.


ಪ್ರತಿಭಟನೆಯ ವೇಳೆಯಲ್ಲಿ ಬೇಕು ಅಂತ ಕೆಲವರು ಗುಂಪು ಮಾಡಿಕೊಂಡು ಹಲ್ಲೆ ಮಾಡಿದ್ದಾರೆ. ಶಾಸಕರು ಆನೆ ಸಾಕಿದ್ದಾರೆ ಎಂದು ಜನ ಹೊಡೆದು ಕಳುಹಿಸಿದ್ದಾರೆ. ಸಂಚು ಮಾಡಿ ಹಲ್ಲೆ ಮಾಡಿದ್ದಾರೆ. ನನ್ನನ್ನು ರಕ್ಷಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ. ನಾನು ಅಲ್ಲೇ ಇರ್ತಿದ್ದೆ ಪೊಲೀಸರು ಮಿಸ್‌ಗೈಡ್ ಮಾಡಿ ಹೊರಗೆ ಕಳುಹಿಸಿದ್ದರು. ಸಾರ್ವಜನಿಕರ ಸೇವೆ ಮಾಡಲು ನಾವು ಇರೋದು. ಎಲ್ಲ ತಾಗ್ಯಕ್ಕೂ ರೆಡಿ ಇರ್ತೀವಿ.ಯಾವುದೇ ಕಾರಣಕ್ಕೂ ಆ ಜಾಗ ಬಿಟ್ಟು ಹೋಗುತ್ತಿರಲಿಲ್ಲ ಎಂದು ಹರಿದ ಬಟ್ಟೆಯಲ್ಲಿಯೇ ಶಾಸಕ ಎಂ.ಪಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.



🖋ವೀರಮಣಿ ಬಾಳೆಹೊನ್ನುರು

Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?