ಎನ್ ಆರ್,ಪುರ, ಭೀಕರ ರಸ್ತೆ ಅಪಘಾತ,ಒಂದು ಸಾವು,ಹತ್ತು ಮಂದಿ ಗಂಭೀರ,


 


ನರಸಿಂಹರಾಜಪುರ:- ತಾಲ್ಲೂಕಿನ ಮುತ್ತಿನಕೊಪ್ಪ ಬಳಿ ಟಿಪ್ಪರ್ ಹಾಗೂ ಕೆಕೆಬಿ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟು 15 ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ನಡೆದಿದೆ, ಮುತ್ತಿನ ಕೊಪ್ಪ ಕಾಲೇಜು ಬಳಿ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ . ಎನ್.ಆರ್ ಪುರ ಕಡೆಯಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಕೆಕೆಬಿ ಬಸ್ ಹಾಗೂ ಶಿವಮೊಗ್ಗ ಕಡೆಯಿಂದ ಆಗಮಿಸುತ್ತಿದ್ದ ಟಿಪ್ಪರ್ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ . ಮೃತರು ಲಕ್ಕವಳ್ಳಿ ಮೂಲದ ರತ್ನಮ್ಮ ( 56 ) ಎಂದು ಗುರುತಿಸಲಾಗಿದೆ . ಅಪಘಾತವಾದ ಕೂಡಲೇ ಶಿವಮೊಗ್ಗಕ್ಕೆ ಕೊಂಡೊಯ್ಯುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ



ಗಾಯಾಳುಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು , ಗಂಭೀರವಾಗಿ ಗಾಯಗೊಂಡ 10 ಪ್ರಯಾಣಿಕರನ್ನು ಶಿವಮೊಗ್ಗ ಮೆಗ್ಗಾನ್ ಅಸ್ಪತ್ರೆಗೆ ರವಾನಿಸಲಾಗುತ್ತಿದೆ,ಎನ್ ಆರ್ ಪುರ ಪೋಲಿಸರು ತನಿಖೆ ನಡೆಸುತ್ತಿದ್ದಾರೆ.





🖊️ವೀರಮಣಿ ಬಾಳೆಹೊನ್ನುರು,

Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?