ಕೊಪ್ಪಳದ ಅಶೋಕ ವೃತ್ತದಲ್ಲಿ ದೇವನಹಳ್ಳಿ ಚಳುವಳಿನಿರತ ರೈತರ ಬಂಧನ ಖಂಡಿಸಿ ಪ್ರತಿಭಟನೆ.
ಕೊಪ್ಪಳದ ಅಶೋಕ ವೃತ್ತದಲ್ಲಿ ದೇವನಹಳ್ಳಿ ಚಳುವಳಿನಿರತ ರೈತರ ಬಂಧನ ಖಂಡಿಸಿ ಪ್ರತಿಭಟನೆ. ಕೊಪ್ಪಳ : ದೇವನಹಳ್ಳಿ ಚಳುವಳಿ ನಿರತ ರೈತರ ಬಂಧನ ಖಂಡಿಸಿ ಸಂಯುಕ್ತ ಹೋರಾಟ - ಕರ್ನಾಟಕ ಜಿಲ್ಲಾ ಮಂಡಳಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳಿಂದ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಎಚ್ಚರಿಕೆ ನೀಡಿ ಬಂಧಿತ ರೈತರನ್ನು ಬಿಡುಗಡೆಗೆ ಆಗ್ರಹಿಸಿದರು. ಕೊಪ್ಪಳ ಜಿಲ್ಲೆಯ ರೈತ ಪರ ಚಳವಳಿಗಾರರು ಮಾತನಾಡಿ ದೇವನಹಳ್ಳಿ ಸೇರಿದಂತೆ 13 ಗ್ರಾಮಗಳಲ್ಲಿನ ರೈತರು ಸರ್ಕಾರದ ಬಲವಂತದ ಭೂ ಸ್ವಾಧೀನ ರೈತ ವಿರೋಧಿ ನೀತಿಗಳನ್ನು ಪ್ರತಿಭಟಿಸಿ, ಸುಮಾರು 1180 ದಿನಗಳಿಂದ, ದೇವನಹಳ್ಳಿಯ ಸಂತೆ ಮೈದಾನದಲ್ಲಿ ಶಾಂತಿಯುತ ಚಳುವಳಿಯನ್ನು ನಡೆಸುತ್ತಿದ್ದರು. ಇಂಥದೊಂದು ದೀರ್ಘಾವಧಿಯ ರೈತ ಚಳುವಳಿ ನಡೆಯುತ್ತಿದ್ದರೂ, ಸರ್ಕಾರ ಮಾತ್ರ ಎನೂ ನಡೆಯುತ್ತಿಲ್ಲವೆಂಬಂತೆ ಜಾಣ ಕುರುಡುತನ ಪ್ರದರ್ಶಿಸಿತು. ಇದು ರೈತರ ತಾಳ್ಮೆಗೆಡಲು ಕಾರಣವಾಯಿತು. ಇದರಿಂದಾಗಿ ರೈತರ ಚಳುವಳಿಯು ತೀವ್ರತೆ ಪಡೆಯಿತು. ಕೊಪ್ಪಳ ನಗರದಲ್ಲಿ 25. 06. 2025ರಂದು ದೇವನಹಳ್ಳಿಯ ರೈತ ಚಳುವಳಿಗೆ ಬೆಂಬಲಿಸಿದ ವಿವಿಧ ಸಂಘಟನೆಗಳ ಮುಖಂಡರು ಮಾತನಾಡಿ ರಾಜ್ಯದ ವಿವಿಧ ಜಿಲ್ಲೆಗಳ ರೈತರು, ಕಾರ್ಮಿಕರು, ಜನಪರ ಸಂಘಟನೆಗಳ ಕಾರ್ಯಕರ್ತರು ದೇವನಹಳ್ಳಿ ಚಲೋ ಚಳುವಳಿಯ ಭಾಗವಾಗಿ ಅಲ್ಲಿ ಸಾವಿರ ಸಾವಿರ ಸಂಖ...