ಕೊಪ್ಪಳದಲ್ಲಿ ಜೂನ್ 27 ಕ್ಕೆ ಮನುಷ್ಯ ಮನಸ್ಸುಗಳನ್ನು ಪೋಣಿಸುವ ಸೌಹಾರ್ದ ನಡಿಗೆ,


 


ಕೊಪ್ಪಳದಲ್ಲಿ ಜೂನ್ 27 ಕ್ಕೆ ಮನುಷ್ಯ ಮನಸ್ಸುಗಳನ್ನು ಪೋಣಿಸುವ ಸೌಹಾರ್ದ ನಡಿಗೆ,


   ಕೊಪ್ಪಳ : ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ ರಾಜ್ಯ ಸಮಿತಿ ಕರೆಯ ಮೇರೆಗೆ ಜೂನ್ 27 ರಂದು ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ನಗರದ ಕೇಂದ್ರೀಯ ಬಸ್ ನಿಲ್ದಾಣ ಬಳಿಯ ಕನಕ ದಾಸ ವೃತ್ತ ದಿಂದ ಅಶೋಕ ವೃತ್ತದ ವರೆಗೆ ಸೌಹಾರ್ದ ನಡಿಗೆ ಕಾರ್ಯಕ್ರಮ ನಡೆಸಲು ವಿವಿಧ ಸಂಘಟನೆಗಳ ಮುಖಂಡರು ಪೂರ್ವ ಭಾವಿ ಸಭೆಯಲ್ಲಿ ತೀರ್ಮಾನಿಸಿದರು.


  


   ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ ಎಸ್.ಎಸ್.ಎಫ್. ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಸಿರ್ ಸಖಾಫಿ ಪ್ರಸ್ತಾವಿಕವಾಗಿ ಮಾತನಾಡಿ ದೇಶದೆಲ್ಲೆಡೆ ಕೋಮುದ್ವೇಷ ಹರಡುವ ಕೆಲಸ ನಿರಂತರವಾಗಿ ಎಗ್ಗಿಲ್ಲದೆ ನಡೆಯುತ್ತಿದೆ. ಇತ್ತೀಚೆಗೆ ಕರ್ನಾಟಕದಲ್ಲಿ ಇದು ಮಿತಿಮೀರಿ ಹೋಗಿರುವುದು ನಾವು ಕಾಣುತ್ತಿದ್ದೇವೆ. ಈ ಸಂದರ್ಭದಲ್ಲಿ ನಾಡಿನ ಭಾವೈಕ್ಯತೆಯ ಪರಂಪರೆಯನ್ನು ಎತ್ತಿ ಹಿಡಿದು ಸೌಹಾರ್ದತೆಯ ಸಂದೇಶವನ್ನು ಸಾರುವ ಕಾರ್ಯಕ್ರಮಗಳು ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸುನ್ನೀ ಸ್ಪೂಡೆಂಟ್ಸ್ ಫೆಡರೇಷನ್ ರಾಜ್ಯದ ಇಪ್ಪತ್ತು ಪ್ರಮುಖ ಪಟ್ಟಣಗಳಲ್ಲಿ 'ಮನುಷ್ಯ ಮನಸ್ಸುಗಳನ್ನು ಪೋಣಿಸುವ' ಎಂಬ ಘೋಷ ವಾಕ್ಯದೊಂದಿಗೆ ಹಿಂದೂ.ಮುಸ್ಲಿಮ್.ಕ್ರೈಸ್ತ ಹಾಗೂ ಇನ್ನಿತರ ಜಾತಿ ಧರ್ಮಗಳ ನಾಯಕರನ್ನು ಸೇರಿಸಿ ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ ಜಿಲ್ಲಾ ಕೇಂದ್ರ ಕೊಪ್ಪಳ ನಗರದಲ್ಲಿ 'ಸೌಹಾರ್ದ ನಡಿಗೆ' ಕಾರ್ಯಕ್ರಮ ಜೂನ್ 27ನೇ ತಾರೀಕು ಶುಕ್ರವಾರ ಬೆಳಿಗ್ಗೆ 10:00 ಗಂಟೆಗೆ ನಡೆಯಲಿದೆ. ಸೌಹಾರ್ದತೆ ಬಯಸುವ ತಮ್ಮೆಲ್ಲರಿಗೂ ಪ್ರೀತಿಪೂರ್ವಕ ಆಮಂತ್ರಿಸುತ್ತಿದ್ದೇವೆ ಎಂದು ಹೇಳಿದರು.

   ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ ರಾಷ್ಟ್ರೀಯ ಸಮಿತಿ ಕಾರ್ಯದರ್ಶಿ ಮತ್ತು ಮಸ್ ದರ್ ಪ್ರಿಸ್ಕೂಲ್ ಆಡಳಿತಾಧಿಕಾರಿ ಮುಹಮ್ಮದ್ ಸಫ್ವಾನ್ ಮಾತನಾಡಿ ಸಮಾಜದಲ್ಲಿ ಮುಸ್ಲಿಮರನ್ನು ಕಂಡರೆ ಅನ್ಯ ಧರ್ಮೀಯರಿಗೆ ಆಗುವುದಿಲ್ಲ. ಅನ್ಯ ಧರ್ಮೀಯರು ಕಂಡರೆ ಮುಸ್ಲಿಮರಲ್ಲಿ ಕೆಲವರಿಗೆ ಆಗುವುದಿಲ್ಲ. ಕೋಮುವಾದಿಗಳು ಇಂತಹ ವಾತಾವರಣ ನಿರ್ಮಾಣ ಮಾಡುತ್ತಿದ್ದಾರೆ. ಐಕ್ಯತೆ ಬಯಸುವ ಎಲ್ಲಾ ಧರ್ಮದವರು ಒಂದಾಗಿ ಸೌಹಾರ್ದತೆಯಿಂದ ಕೂಡಿ ಬಾಳಲು ನಮ್ಮ ಸಂಘಟನೆಯಿಂದ ಸೌಹಾರ್ದ ನಡಿಗೆ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಹೇಳಿದರು.

     ಭ್ರಾತೃತ್ವ ಸಮಿತಿಯ ಜಿಲ್ಲಾ ಸಂಚಾಲಕ ಎಸ್.ಎ.ಗಫಾರ್ ಮಾತನಾಡಿ ಈಗಿನ ದಿನಗಳಲ್ಲಿ ಎಲ್ಲಾ ಧರ್ಮಗಳನ್ನು ಒಟ್ಟಿಗೆ ಸೇರಿಸುವ ಮೂಲಕ ಸೌಹಾರ್ದತೆ ಕಾಪಾಡುವ ಕಾರ್ಯಕ್ರಮಗಳು ತುಂಬಾ ಅಗತ್ಯವಿದೆ. ಕೊಪ್ಪಳದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಜಾತ್ಯಾತೀತ ಮನೋಭಾವನೆಯುಳ್ಳ ಎಲ್ಲರೂ ಪಾಲ್ಗೊಳ್ಳುವ ಮೂಲಕ ಬೆಂಬಲಿಸುತ್ತೇವೆ ಎಂದು ಹೇಳಿದರು.

 ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

 ಪಾಸ್ಟರ್ಸ್ ಅಸೋಸಿಯೇಷನ್ ಜಿಲ್ಲಾ ಅಧ್ಯಕ್ಷ ಚನ್ನಬಸಪ್ಪ ಅಪ್ಪಣ್ಣವರ್ ಮಾತನಾಡಿ ನಮ್ಮಲ್ಲಿ ಹಿಂದೂ ಮುಸ್ಲಿಮ್ ಕ್ರಿಶ್ಚಿಯನ್ ಎಂಬ ಭೇದ ಭಾವ ಇಲ್ಲ,ಆದರೆ ಕೆಲವರು ಇತ್ತೀಚೆಗೆ ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ. ನಾವೆಲ್ಲರೂ ಸೇರಿ ಸೌಹಾರ್ದ ನಡಿಗೆ ಕಾರ್ಯಕ್ರಮ ಯಶಸ್ವಿಗೊಳಿಸೋಣ ಎಂದು ಹೇಳಿದರು.

     ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ ನಗರ ಘಟಕದ ಮಾಜಿ ಗೌರವ ಅಧ್ಯಕ್ಷ ಮೌಲಾನಾ ಖಾರಿ ಮೊಹಮ್ಮದ್ ಅಬುಲ್ ಹಸನ್ ಖಾಝಿ ಪೂರ್ವ ಭಾವಿ ಸಭೆ ಅಧ್ಯಕ್ಷತೆ ವಹಿಸಿದ್ದರು.


     ಕರ್ನಾಟಕ ಮುಸ್ಲಿಮ್ ಜಮಾಅತ್ ಸಂಚಾಲಕ ಕರೀಮ್ ಗಚ್ಚಿನಮನಿ. ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ ಮಾಜಿ ಜಿಲ್ಲಾ ಅಧ್ಯಕ್ಷ ಮೊಹಮ್ಮದ್ ರಾಶೀದ್ ಖಾಝಿ. ಯುವ ಮುಖಂಡ ಸೈಯ್ಯದ್ ಅಬ್ದುಲ್ ಖಾದರ್ ಪೀರಝಾದೆ. ಯಲಬುರ್ಗಾ ಪಟ್ಟಣದ ಆಶ್ರಫ್ ಅಲಿ ದರ್ಗಾ ಕಮಿಟಿ ಸದಸ್ಯ ಖಾದರ್ ಬಾಷಾ ಮಾಸ್ತರ್. ಯಲಬುರ್ಗಾ ತಾಲೂಕಿನ ದಮ್ಮೂರಿನ ಜಾಮಿಯಾ ಮಸೀದಿಯ ಅಧ್ಯಕ್ಷ ಫಕೀರ್ ಸಾಬ್ ಗುರಿಕಾರ ಮುಂತಾದವರು ಭಾಗವಹಿಸಿದ್ದರು.






Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?