ಕೊಪ್ಪ:- ಪ್ರತಿಭೆಗೆ ಪ್ರೋತ್ಸಾಹ: ಕೊಪ್ಪದಲ್ಲಿ ವಿದ್ಯಾರ್ಥಿಗಳಿಗೆ ಸನ್ಮಾನ, ವಿದ್ಯಾರ್ಥಿಗಳ ಸಾಧನೆಗೆ ಕೊಪ್ಪದಲ್ಲಿ ಭರ್ಜರಿ ಗೌರವ,


 


ಕೊಪ್ಪ:- ಪ್ರತಿಭೆಗೆ ಪ್ರೋತ್ಸಾಹ: ಕೊಪ್ಪದಲ್ಲಿ ವಿದ್ಯಾರ್ಥಿಗಳಿಗೆ ಸನ್ಮಾನ,ವಿದ್ಯಾರ್ಥಿಗಳ ಸಾಧನೆಗೆ ಕೊಪ್ಪದಲ್ಲಿ ಭರ್ಜರಿ ಗೌರವ,


 ಮುಸ್ಲಿಂ ಸಂಯುಕ್ತ ಒಕ್ಕೂಟ ಕೊಪ್ಪ ಇವರ ವತಿಯಿಂದ ಪ್ರತಿಭಾ ಪುರಸ್ಕಾರ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದ ಕೊಪ್ಪ ಕಾರ್ಯಕ್ರಮ,



ಕೊಪ್ಪ: ಕೊಪ್ಪ ತಾಲ್ಲೂಕು ಮುಸ್ಲಿಂ ಸಂಯುಕ್ತ ಒಕ್ಕೂಟದ ಆಶ್ರಯದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿ–ವಿದ್ಯಾರ್ಥಿನಿಯರಿಗೆ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಶುಕ್ರವಾರ ಕೊಪ್ಪ ಪುರಭವನದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.



ಕೊಪ್ಪ ತಾಲ್ಲೂಕಿನ ಜಮಾಅತ್‌ಗಳನ್ನು ಒಳಗೊಂಡಿರುವ ಈ ಒಕ್ಕೂಟದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಮಾಜದ ಗಣ್ಯರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಜಯಪುರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಷಾ ಗುಪ್ತಾ, ಇಂತಹ ಪ್ರೋತ್ಸಾಹಕಾರಿ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಇನ್ನಷ್ಟು ಸಾಧನೆ ಮಾಡಲು ಪ್ರೇರಣೆಯಾಗುತ್ತವೆ. ವಿದ್ಯಾರ್ಥಿಗಳು ಮೊಬೈಲ್ ಹಾಗೂ ಇಂಟರ್ನೆಟ್‌ನಲ್ಲಿ ಸಮಯ ವ್ಯರ್ಥ ಮಾಡದೆ ಉತ್ತಮ ಭವಿಷ್ಯ ನಿರ್ಮಾಣದತ್ತ ಗಮನ ಹರಿಸಬೇಕು ಎಂದು ಕರೆ ನೀಡಿದರು.



ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಯಪುರ ಬಿಜಿಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಮುಸ್ತಾಕ್ ಅಹ್ಮದ್ ಮಾತನಾಡಿ, “ಶಿಕ್ಷಣವೇ ಸಮಾಜವನ್ನು ಕತ್ತಲೆಯಿಂದ ಬೆಳಕಿನೆಡೆಗೆ ಕೊಂಡೊಯ್ಯುವ ಶಕ್ತಿಯಾಗಿದೆ. ಮುಸ್ಲಿಂ ಸಮುದಾಯ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದಾಗ ಮಾತ್ರ ಸಮಾಜದಲ್ಲಿ ಮುನ್ನಡೆ ಸಾಧಿಸಲು ಸಾಧ್ಯ” ಎಂದು ಹೇಳಿದರು.



ಪ್ರಸ್ತಾವಿಕವಾಗಿ ಮಾತನಾಡಿದ ಸಂಯುಕ್ತ ಜಮಾಅತ್ ಉಪಾಧ್ಯಕ್ಷ ಹಾಗೂ ತಾಲ್ಲೂಕು ಕೆಡಿಪಿ ಸದಸ್ಯ ಮಹಮ್ಮದ್ ಸಾಧಿಕ್ ನಾರ್ವೆ, “ವಕ್ಫ್ ವಿಚಾರದ ಸಂದರ್ಭದಲ್ಲಿ ಒಗ್ಗಟ್ಟಿನಿಂದ ಹುಟ್ಟಿಕೊಂಡ ಈ ಒಕ್ಕೂಟ ಇದೀಗ ಸಾಮಾಜಿಕ ಸೇವಾ ಕ್ಷೇತ್ರದಲ್ಲಿಯೂ ಕಾರ್ಯನಿರ್ವಹಿಸುತ್ತಿದೆ. ಬಡ ಕುಟುಂಬಗಳ ಯುವತಿಯರ ವಿವಾಹ, ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನೆರವು ಸೇರಿದಂತೆ ಹಲವಾರು ಸೇವಾ ಕಾರ್ಯಗಳನ್ನು ಮುಂದುವರಿಸುತ್ತಿದ್ದೇವೆ” ಎಂದರು.



ಸಂಘಟನೆಯ ಅಧ್ಯಕ್ಷ ವೈ.ಎಚ್. ಅಬ್ದುಲ್ ಹಮೀದ್ ಮಾತನಾಡಿ, “ಇದು ನಮ್ಮ ಒಕ್ಕೂಟದ ಎರಡನೇ ಕಾರ್ಯಕ್ರಮ. ಸಮುದಾಯದ ವಿದ್ಯಾರ್ಥಿಗಳಿಗೆ ಇನ್ನಷ್ಟು ಸಾಧನೆ ಮಾಡಲು ಈ ಕಾರ್ಯಕ್ರಮ ಪ್ರೇರಣೆಯಾಗಲಿ” ಎಂದು ಆಶಿಸಿದರು.



ಕಾರ್ಯಕ್ರಮದಲ್ಲಿ ಬಿಎಎಂಎಸ್ ಪದವಿ ಪಡೆದ ಡಾ. ಮುಫೀಝಾ ರಿಯಾನಾ, ಹೋಮಿಯೋಪತಿ ಪದವಿ ಪಡೆದ ಡಾ. ತಸ್ಮಿಯಾ ಜಿ.ಎ. ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು. ಜೊತೆಗೆ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ನಲವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪೋಷಕರ ಸಮ್ಮುಖದಲ್ಲಿ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.


ಉಪಾಧ್ಯಕ್ಷ ಶಫಿ ಅಹ್ಮದ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಸುಲ್ತಾನ್ ವಂದಿಸಿದರು.

Comments

Popular posts from this blog