ಚಿಕ್ಕಮಗಳೂರು: ಪಡಿತರ ವಿತರಣೆ ಸೇವೆ ತಾತ್ಕಾಲಿಕ ಸ್ಥಗಿತ,
ಚಿಕ್ಕಮಗಳೂರು: ಪಡಿತರ ವಿತರಣೆ ಸೇವೆ ತಾತ್ಕಾಲಿಕ ಸ್ಥಗಿತ
ಚಿಕ್ಕಮಗಳೂರು, ಜೂನ್ 24: ಕರ್ನಾಟಕ ರಾಜ್ಯ ದತ್ತಾಂಶ ಕೇಂದ್ರದಲ್ಲಿ ನಿರ್ವಹಣಾ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆಗೆ ಬಳಸುವ ಇ-ಪಿಒಎಸ್ (e-POS) ಯಂತ್ರಗಳ ಸೇವೆ ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೂನ್ 25ರಂದು ಬೆಳಿಗ್ಗೆ 9 ಗಂಟೆಯಿಂದ ಜೂನ್ 26ರಂದು ಬೆಳಿಗ್ಗೆ 9 ಗಂಟೆಯವರೆಗೆ ಆನ್ಲೈನ್ ಸೇವೆ ಲಭ್ಯವಿರುವುದಿಲ್ಲ. ಈ ಅವಧಿಯಲ್ಲಿ ಸಾರ್ವಜನಿಕರಿಗೆ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ವಿತರಣೆ ಸೇವೆ ನೀಡಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಲಾಗಿದೆ.
ಆದ್ದರಿಂದ ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಹಾಗೂ ಸಾರ್ವಜನಿಕರು ಈ ಅವಧಿಯಲ್ಲಿ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡುವುದನ್ನು ತಪ್ಪಿಸಿ, ಸೇವೆ ಪುನರಾರಂಭವಾದ ಬಳಿಕ ಅಗತ್ಯ ವಸ್ತುಗಳನ್ನು ಪಡೆದುಕೊಳ್ಳುವಂತೆ ಇಲಾಖೆ ಮನವಿ ಮಾಡಿದೆ.
ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ಕೋರಿದ್ದಾರೆ.
ವಾರ್ತಾ ಸಾರಥಿ ಡಿಜಿಟಲ್ ನ್ಯೂಸ್ 📰



Comments
Post a Comment