ಕೊಪ್ಪ ಪೋಲಿಸ್ ಇಲಾಖೆ ವತಿಯಿಂದ ಅಂತರರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ವಿರೋಧಿ ದಿನಾಚರಣೆ: ವಿದ್ಯಾರ್ಥಿಗಳ ಜಾಗೃತಿ ಜಾಥಾ, ಅಣುಕು ಪ್ರದರ್ಶನ,
ಕೊಪ್ಪ, ಜೂನ್ 29: ಅಂತರರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಸಾಗಣೆ ವಿರೋಧಿ ದಿನದ ಅಂಗವಾಗಿ ಕೊಪ್ಪ ಪೊಲೀಸ್ ಠಾಣೆ ವತಿಯಿಂದ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.
ಈ ಅಂಗವಾಗಿ ಸಂತ ಜೋಸೆಫ್ ಪ್ರೌಢಶಾಲೆ ಹಾಗೂ ಕೆಪಿಎಸ್ ಕಾಲೇಜಿನ ವಿದ್ಯಾರ್ಥಿಗಳಿಂದ ಕೊಪ್ಪ ಪಟ್ಟಣದ ಮುಖ್ಯ ರಸ್ತೆಯಲ್ಲಿ ಭವ್ಯ ಜಾಗೃತಿ ಜಾಥಾ ನಡೆಯಿತು. ಜಾಥಾಕ್ಕೆ ಮಾನ್ಯ ಡಿವೈಎಸ್ಪಿ ಬಾಲಾಜಿ ಸಿಂಗ್ ಚಾಲನೆ ನೀಡಿ, ಯುವಜನತೆ ಮಾದಕ ವ್ಯಸನದಿಂದ ದೂರವಿದ್ದು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಕೊಪ್ಪ ಪೊಲೀಸ್ ಠಾಣೆಯ ಪಿಎಸ್ಐ ಮಧು, ಸಂತ ಜೋಸೆಫ್ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಅನಿತಾ ಸಿಸ್ಟರ್, ಕೆಪಿಎಸ್ ಕಾಲೇಜಿನ ಪ್ರಾಂಶುಪಾಲ ಶಿವಾಜಿ, ಪೊಲೀಸ್ ಸಿಬ್ಬಂದಿ, ರೋಟರಿ ಕ್ಲಬ್ಅಧ್ಯಕ್ಷರಾದ ರಾಘವೇಂದ್ರ ಭಟ್, ಸದಸ್ಯರಾದ ರಮೇಶ್, ಕೊಪ್ಪ ಕಾರ್ಯದರ್ಶಿಯಾದ ಬಾಲಚಂದ್ರ, ಶೈಲಜ ವಿಜಯ್ ಕುಮಾರ್ ಕೊಪ್ಪರವರು ಉಪಸ್ಥಿತರಿದ್ದರು ಕೊಪ್ಪ ಸದಸ್ಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಜಾಥಾ ಬಳಿಕ ಕೊಪ್ಪ ಬಸ್ ನಿಲ್ದಾಣದ ಬಳಿ ವಿದ್ಯಾರ್ಥಿಗಳು ಮಾದಕ ದ್ರವ್ಯ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಅರ್ಥಪೂರ್ಣ ಅಣುಕು ಪ್ರದರ್ಶನ ನೀಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ವಿದ್ಯಾರ್ಥಿಗಳ ಈ ಪ್ರದರ್ಶನ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಯಿತು.
ನಂತರ ಸಂತ ಜೋಸೆಫ್ ಪ್ರೌಢಶಾಲೆಯ ಆವರಣದಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಪ್ರಶಮಣಿ ಆಸ್ಪತ್ರೆಯ ಡಾ. ಉದಯಶಂಕರ್ ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ಮಾದಕ ವ್ಯಸನದಿಂದ ದೈಹಿಕ, ಮಾನಸಿಕ ಹಾಗೂ ಸಾಮಾಜಿಕವಾಗಿ ಉಂಟಾಗುವ ದುಷ್ಪರಿಣಾಮಗಳ ಕುರಿತು ವಿವರವಾಗಿ ತಿಳಿಸಿದರು. ವಿದ್ಯಾರ್ಥಿಗಳು ಯಾವುದೇ ರೀತಿಯ ಮಾದಕ ವಸ್ತುಗಳ ಆಕರ್ಷಣೆಗೆ ಒಳಗಾಗದೆ ಉತ್ತಮ ಜೀವನ ಮೌಲ್ಯಗಳನ್ನು ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದರು.
ಕಾರ್ಯಕ್ರಮವು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಮಾದಕ ವ್ಯಸನದ ವಿರುದ್ಧ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಯಿತು. ಸಮಾಜವನ್ನು ವ್ಯಸನಮುಕ್ತಗೊಳಿಸಲು ಪೊಲೀಸ್ ಇಲಾಖೆ, ಶಿಕ್ಷಣ ಸಂಸ್ಥೆಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಇಂತಹ ಜಂಟಿ ಪ್ರಯತ್ನಗಳು ಅತ್ಯಂತ ಶ್ಲಾಘನೀಯವಾಗಿವೆ.
🖋️ಅಬ್ದುಲ್ ರಹಿಮಾನ್ ಸಣ್ಣಕೇರೆ
ವಾರ್ತಾ ಸಾರಥಿ ಡಿಜಿಟಲ್ ನ್ಯೂಸ್









Comments
Post a Comment