ಕೊಪ್ಪದ ಜನರಿಗೆ ಗುಡ್ ನ್ಯೂಸ್..! ಜುಲೈ 6ರಿಂದ ಬಾಳಗಡಿ–ಶೃಂಗೇರಿ ಮಾರ್ಗಕ್ಕೆ ಎರಡು ಹೊಸ KSRTC ಬಸ್‌ಗಳು,

 


ಕೊಪ್ಪದ ಜನರಿಗೆ ಗುಡ್ ನ್ಯೂಸ್..! ಜುಲೈ 6ರಿಂದ ಬಾಳಗಡಿ–ಶೃಂಗೇರಿ ಮಾರ್ಗಕ್ಕೆ ಎರಡು ಹೊಸ KSRTC ಬಸ್‌ಗಳು,


ಕೊಪ್ಪ, ಜುಲೈ 3: ಕೊಪ್ಪ ತಾಲ್ಲೂಕಿನ ವಿದ್ಯಾರ್ಥಿಗಳು, ನೌಕರರು ಹಾಗೂ ಸಾರ್ವಜನಿಕರ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಫಲ ಸಿಕ್ಕಿದೆ. ಬಾಳಗಡಿ ಮತ್ತು ಶೃಂಗೇರಿ ಮಾರ್ಗಗಳಿಗೆ ಜುಲೈ 6ರಿಂದ ಎರಡು ಹೊಸ ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ಆರಂಭವಾಗಲಿದ್ದು, ಇದರಿಂದ ಗ್ರಾಮೀಣ ಭಾಗದ ಜನರ ಸಂಚಾರಕ್ಕೆ ಹೊಸ ಚೈತನ್ಯ ದೊರೆಯಲಿದೆ.

ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಓಣಿತೋಟ ರತ್ನಾಕರ್ ಈ ಕುರಿತು ಮಾಹಿತಿ ನೀಡಿದ್ದು, ಬಾಳಗಡಿಯಲ್ಲಿ ಪ್ರಥಮ ದರ್ಜೆ ಕಾಲೇಜು ಸೇರಿದಂತೆ ಪ್ರಮುಖ ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸುತ್ತಿರುವ ಹಿನ್ನೆಲೆಯಲ್ಲಿ ಕೊಪ್ಪ–ಬಾಳಗಡಿ ನಡುವೆ ಪ್ರತಿ ಗಂಟೆಗೆ ಬಸ್ ಸೇವೆ ಕಲ್ಪಿಸಲಾಗಿದೆ. ಇದರಿಂದ ಪ್ರತಿನಿತ್ಯ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು, ಸರ್ಕಾರಿ ನೌಕರರು ಹಾಗೂ ಸಾರ್ವಜನಿಕರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.



ಹೊಸ ವೇಳಾಪಟ್ಟಿಯಂತೆ ಬೆಳಿಗ್ಗೆ ಹಾಗೂ ಸಂಜೆ ವೇಳೆಯಲ್ಲಿ ಶೃಂಗೇರಿ ಮಾರ್ಗಕ್ಕೂ ನೇರ ಬಸ್ ಸೇವೆ ಲಭ್ಯವಾಗಲಿದ್ದು, ಶೃಂಗೇರಿಗೆ ತೆರಳುವ ಭಕ್ತರು ಮತ್ತು ಸುತ್ತಮುತ್ತಲಿನ ಗ್ರಾಮಗಳ ಜನರು ಸುಲಭವಾಗಿ ಪ್ರಯಾಣಿಸಬಹುದಾಗಿದೆ. ಅಲ್ಲದೆ, ಈ ಬಸ್‌ಗಳು ಹಾಸನ ಮತ್ತು ಚಿಕ್ಕಮಗಳೂರು ಸಂಪರ್ಕವನ್ನೂ ಕಲ್ಪಿಸುವುದರಿಂದ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ.

ಈ ಹೊಸ ಬಸ್ ಸೇವೆ ಆರಂಭಿಸಲು ಸಹಕರಿಸಿದ ಶೃಂಗೇರಿ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ಡಿ. ರಾಜೇಗೌಡ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಶಿವಾನಂದ ಸ್ವಾಮಿ, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರು ಹಾಗೂ ಚಿಕ್ಕಮಗಳೂರು ಮತ್ತು ಬೇಲೂರು ಕೆಎಸ್‌ಆರ್‌ಟಿಸಿ ಘಟಕದ ಅಧಿಕಾರಿಗಳಿಗೆ ಕೊಪ್ಪ ತಾಲ್ಲೂಕಿನ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಪರವಾಗಿ ಓಣಿತೋಟ ರತ್ನಾಕರ್ ಕೃತಜ್ಞತೆ ಸಲ್ಲಿಸಿದ್ದಾರೆ.



ಹೊಸ ಬಸ್ ಸೇವೆಯಿಂದ ಬಾಳಗಡಿ ಕಾಲೇಜಿನ ವಿದ್ಯಾರ್ಥಿಗಳು, ಶೃಂಗೇರಿಗೆ ತೆರಳುವ ಭಕ್ತರು, ಸರ್ಕಾರಿ ನೌಕರರು ಹಾಗೂ ಗ್ರಾಮೀಣ ಭಾಗದ ಸಾರ್ವಜನಿಕರಿಗೆ ಸಮಯ ಮತ್ತು ಹಣದ ಉಳಿತಾಯವಾಗಲಿದ್ದು, ಕೊಪ್ಪ ತಾಲ್ಲೂಕಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಮತ್ತಷ್ಟು ಬಲಿಷ್ಠವಾಗಲಿದೆ ಎಂಬ ವಿಶ್ವಾಸ ವ್ಯಕ್ತವಾಗಿದೆ.


🖋️ ರೆಹಮಾನ್ ಸಣ್ಣಕೇರೆ 

ವಾರ್ತಾ ಸಾರಥಿ ಡಿಜಿಟಲ್ ನ್ಯೂಸ್ 

Comments

Popular posts from this blog

ಕೊಪ್ಪ ಬಸ್ ನಿಲ್ದಾಣದ ಸಂಚಾರ ಸಮಸ್ಯೆಗೆ ಶಾಶ್ವತ ಪರಿಹಾರ – ಕೆಡಿಪಿ ಸದಸ್ಯ ಮಹಮ್ಮದ್ ಸಾದಿಕ್ ಅವರ ಸಮಯೋಚಿತ ಕ್ರಮಕ್ಕೆ ಸಾರ್ವಜನಿಕರ ಮೆಚ್ಚುಗೆ,

ಆಪತ್ತಿನ ಕ್ಷಣದಲ್ಲಿ ಜೀವ ಉಳಿಸಿದ ಕೊಪ್ಪ ಅಗ್ನಿಶಾಮಕ ದಳ – ಸಮಯಪ್ರಜ್ಞೆಯ ಕಾರ್ಯಾಚರಣೆಗೆ ಸಾರ್ವಜನಿಕರ ಮೆಚ್ಚು

ಕೊಪ್ಪ,ಅಕ್ರಮವಾಗಿ ಜಾನುವಾರು ಸಾಗಾಟ ಆರೋಪ: ಇಬ್ಬರ ವಶ, ವಾಹನ ಜಪ್ತಿ,