ಕೊಪ್ಪ ತಾಲ್ಲೂಕು ಮುಸ್ಲಿಂ ಒಕ್ಕೂಟದ ನೂತನ ಸಾರಥಿಯಾಗಿ ಶಫೀ ಅಹಮ್ಮದ್ ಅವಿರೋಧ ಆಯ್ಕೆ,
ಕೊಪ್ಪ ತಾಲ್ಲೂಕು ಮುಸ್ಲಿಂ ಒಕ್ಕೂಟದ ನೂತನ ಸಾರಥಿಯಾಗಿ ಶಫೀ ಅಹಮ್ಮದ್ ಅವಿರೋಧ ಆಯ್ಕೆ,
ಕೊಪ್ಪ, ಜುಲೈ 2: ಕೊಪ್ಪ ತಾಲ್ಲೂಕಿನ ಮುಸ್ಲಿಂ ಸಮುದಾಯದ ಸರ್ವತೋಮುಖ ಅಭಿವೃದ್ಧಿ, ಶೈಕ್ಷಣಿಕ ಪ್ರಗತಿ, ಸಾಮಾಜಿಕ ಸಾಮರಸ್ಯ ಹಾಗೂ ಸಮುದಾಯದ ಹಿತಾಸಕ್ತಿಗಾಗಿ ಕಾರ್ಯನಿರ್ವಹಿಸುತ್ತಿರುವ ಕೊಪ್ಪ ತಾಲ್ಲೂಕು ಮುಸ್ಲಿಂ ಸಂಯುಕ್ತ ಜಮಾತ್ (ರಿ.) ಇದರ ನೂತನ ಅಧ್ಯಕ್ಷರಾಗಿ ಹಿರಿಯ ಸಮಾಜಸೇವಕ ಹಾಗೂ ಗುತ್ತಿಗೆದಾರ ಜನಾಬ್ ಶಫೀ ಅಹಮ್ಮದ್ (ರಾಘವೇಂದ್ರ ನಗರ) ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜುಲೈ 1ರಂದು ಕೊಪ್ಪದಲ್ಲಿ ನಡೆದ ಸಂಘಟನೆಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ಸಭೆಯಲ್ಲಿ ಹಾಜರಿದ್ದ ಪದಾಧಿಕಾರಿಗಳು ಹಾಗೂ ಸದಸ್ಯರು ಸರ್ವಾನುಮತದಿಂದ ಶಫೀ ಅಹಮ್ಮದ್ ಅವರನ್ನು ಸಂಘಟನೆಯ ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಿ ಜವಾಬ್ದಾರಿ ವಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸದಸ್ಯರು, ಶಫೀ ಅಹಮ್ಮದ್ ಅವರು ಹಲವು ವರ್ಷಗಳಿಂದ ಸಮಾಜ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಅವರ ಅನುಭವ, ನಾಯಕತ್ವ ಮತ್ತು ಸೇವಾ ಮನೋಭಾವದಿಂದ ಸಂಘಟನೆ ಇನ್ನಷ್ಟು ಬಲಿಷ್ಠವಾಗಿ ಬೆಳೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶಫೀ ಅಹಮ್ಮದ್ ಅವರು, ತಮ್ಮ ಮೇಲೆ ವಿಶ್ವಾಸವಿಟ್ಟು ಜವಾಬ್ದಾರಿ ನೀಡಿದ ಎಲ್ಲಾ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದರು. ಸಮಾಜದ ಅಭಿವೃದ್ಧಿ, ಶಿಕ್ಷಣ, ಯುವಜನರ ಸಬಲೀಕರಣ ಹಾಗೂ ಪರಸ್ಪರ ಸಹಕಾರಕ್ಕೆ ಹೆಚ್ಚಿನ ಆದ್ಯತೆ ನೀಡಿ ಎಲ್ಲರನ್ನು ಒಗ್ಗೂಡಿಸಿಕೊಂಡು ಕಾರ್ಯನಿರ್ವಹಿಸುವುದಾಗಿ ಅವರು ಭರವಸೆ ನೀಡಿದರು.
ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶಫೀ ಅಹಮ್ಮದ್ ಅವರಿಗೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಗಣ್ಯರು, ಸಮಾಜದ ಮುಖಂಡರು ಹಾಗೂ ಸಾರ್ವಜನಿಕರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
🖋️ ರೆಹಮಾನ್ ಸಣ್ಣಕೇರೆ
ವಾರ್ತಾ ಸಾರಥಿ ಡಿಜಿಟಲ್ ನ್ಯೂಸ್,



Comments
Post a Comment