ಕೊಪ್ಪ ಬಸ್ ನಿಲ್ದಾಣದ ಸಂಚಾರ ಸಮಸ್ಯೆಗೆ ಶಾಶ್ವತ ಪರಿಹಾರ – ಕೆಡಿಪಿ ಸದಸ್ಯ ಮಹಮ್ಮದ್ ಸಾದಿಕ್ ಅವರ ಸಮಯೋಚಿತ ಕ್ರಮಕ್ಕೆ ಸಾರ್ವಜನಿಕರ ಮೆಚ್ಚುಗೆ,
ಕೊಪ್ಪ ಬಸ್ ನಿಲ್ದಾಣದ ಸಂಚಾರ ಸಮಸ್ಯೆಗೆ ಶಾಶ್ವತ ಪರಿಹಾರ – ಕೆಡಿಪಿ ಸದಸ್ಯ ಮಹಮ್ಮದ್ ಸಾದಿಕ್ ಅವರ ಸಮಯೋಚಿತ ಕ್ರಮಕ್ಕೆ ಸಾರ್ವಜನಿಕರ ಮೆಚ್ಚುಗೆ,
ಕೊಪ್ಪ, ಜುಲೈ 16:
ಕೊಪ್ಪ ಪಟ್ಟಣದ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ವಾಹನ ನಿಲುಗಡೆ (ಪಾರ್ಕಿಂಗ್) ಪ್ರದೇಶದಲ್ಲಿ ಅಳವಡಿಸಲಾಗಿದ್ದ ಎರಡು ಬ್ಯಾರಿಕೇಡ್ಗಳಿಂದ ಬಸ್ ಹಾಗೂ ಇತರೆ ವಾಹನಗಳ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗುತ್ತಿತ್ತು. ಒಂದೇ ಬಸ್ ಸಂಚರಿಸಲು ಅವಕಾಶವಿದ್ದ ಕಾರಣ ಬೈಕ್, ಆಟೋ ಹಾಗೂ ಇತರೆ ವಾಹನಗಳು ಪರಸ್ಪರ ಡಿಕ್ಕಿಯಾಗುವಂತಹ ಪರಿಸ್ಥಿತಿ ನಿರ್ಮಾಣವಾಗಿ, ಸಣ್ಣಪುಟ್ಟ ಅಪಘಾತಗಳು ಆಗಾಗ ಸಂಭವಿಸುತ್ತಿದ್ದವು.
ಈ ಸಮಸ್ಯೆಯನ್ನು ಗಮನಿಸಿದ ಕೆಡಿಪಿ ಸದಸ್ಯ ಮಹಮ್ಮದ್ ಸಾದಿಕ್ ಅವರು ತಕ್ಷಣವೇ ಪಿ ಎಸ್ ಐ ಮದು B E ಕೊಪ್ಪ ಇವರನ್ನು ಸಂಪರ್ಕಿಸಿ ಪರಿಸ್ಥಿತಿಯನ್ನು ವಿವರಿಸಿದರು. ಅವರ ಮನವಿಗೆ ಸ್ಪಂದಿಸಿದ ಪೊಲೀಸ್ ಇಲಾಖೆ ಸ್ಥಳಕ್ಕೆ ಆಗಮಿಸಿ ಸಂಚಾರ ವ್ಯವಸ್ಥೆಯನ್ನು ಪರಿಶೀಲಿಸಿ, ಅಗತ್ಯ ಬದಲಾವಣೆಗಳನ್ನು ಮಾಡಿತು.
ಎರಡು ಬ್ಯಾರಿಕೇಡ್ಗಳ ಬದಲಾಗಿ ನಾಲ್ಕು ಬ್ಯಾರಿಕೇಡ್ಗಳನ್ನು ಸೂಕ್ತ ರೀತಿಯಲ್ಲಿ ಅಳವಡಿಸಿದ ಪರಿಣಾಮ, ಬಸ್ಗಳು ಯಾವುದೇ ತೊಂದರೆಯಿಲ್ಲದೆ ಸುಗಮವಾಗಿ ಸಂಚರಿಸುತ್ತಿವೆ. ಜೊತೆಗೆ ವಾಹನ ನಿಲುಗಡೆ ವ್ಯವಸ್ಥೆಯೂ ಉತ್ತಮಗೊಂಡಿದ್ದು, ಎರಡೂ ದಿಕ್ಕಿನಿಂದ ಬರುವ ವಾಹನ ಚಾಲಕರಿಗೆ ಸ್ಪಷ್ಟವಾಗಿ ರಸ್ತೆ ಗೋಚರಿಸುವಂತಾಗಿದೆ. ಇದರಿಂದ ಸಂಚಾರ ದಟ್ಟಣೆ ಕಡಿಮೆಯಾಗಿದ್ದು, ಅಪಘಾತಗಳಾಗುವ ಸಾಧ್ಯತೆಯೂ ಕಡಿಮೆ,
ಸಾರ್ವಜನಿಕರ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕೆ ಆದ್ಯತೆ ನೀಡಿ ಸಮಸ್ಯೆಗೆ ತ್ವರಿತ ಪರಿಹಾರ ಕಂಡುಕೊಟ್ಟ ಕೆಡಿಪಿ ಸದಸ್ಯ ಮಹಮ್ಮದ್ ಸಾದಿಕ್ ಅವರ ಕಾರ್ಯವನ್ನು ಸಾರ್ವಜನಿಕರು ವ್ಯಾಪಕವಾಗಿ ಶ್ಲಾಘಿಸಿದ್ದಾರೆ. ಇದೇ ವೇಳೆ ಸಮಸ್ಯೆಗೆ ತಕ್ಷಣ ಸ್ಪಂದಿಸಿ ಅಗತ್ಯ ಕ್ರಮ ಕೈಗೊಂಡ ಪಿ ಎಸ್ ಐ ಮದು ಬಿ ಈ ಕೊಪ್ಪ, ಪೋಲಿಸ್ ಇಲಾಖೆಯ ಸಹಕಾರಕ್ಕೂ ನಾಗರಿಕರು ಅಭಿನಂದನೆ ಸಲ್ಲಿಸಿದ್ದಾರೆ.
ಸಣ್ಣ ಸಮಸ್ಯೆಯನ್ನೂ ಗಂಭೀರವಾಗಿ ಪರಿಗಣಿಸಿ ಜನಸಾಮಾನ್ಯರ ಹಿತದೃಷ್ಟಿಯಿಂದ ಕೈಗೊಂಡ ಈ ಕ್ರಮ, ಸಾರ್ವಜನಿಕ ಸೇವೆಗೆ ಉತ್ತಮ ಉದಾಹರಣೆಯಾಗಿದೆ.
🖋️ರೆಹಮಾನ್ ಸಣ್ಣಕೇರೆ
ವಾರ್ತಾ ಸಾರಥಿ ಡಿಜಿಟಲ್ ನ್ಯೂಸ್


Comments
Post a Comment