ಗೃಹಜ್ಯೋತಿ ಯೋಜನೆ ಪರಿಷ್ಕರಣ ಸಭೆ ಯಶಸ್ವಿ – ಮೂರು ತಾಲ್ಲೂಕುಗಳ ಅಧಿಕಾರಿಗಳು, ಗ್ಯಾರಂಟಿ ಸಮಿತಿ ಸದಸ್ಯರ ಭಾಗಿ,
ಗೃಹಜ್ಯೋತಿ ಯೋಜನೆ ಪರಿಷ್ಕರಣ ಸಭೆ ಯಶಸ್ವಿ – ಮೂರು ತಾಲ್ಲೂಕುಗಳ ಅಧಿಕಾರಿಗಳು, ಗ್ಯಾರಂಟಿ ಸಮಿತಿ ಸದಸ್ಯರ ಭಾಗಿ,
ಕೊಪ್ಪ, ಜುಲೈ 16:
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆ ಕುರಿತು ಪರಿಷ್ಕರಣ ಸಭೆಯು ಗುರುವಾರ ಕೊಪ್ಪ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ಶೃಂಗೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಪ್ಪ, ಶೃಂಗೇರಿ ಹಾಗೂ ಎನ್.ಆರ್.ಪುರ ತಾಲ್ಲೂಕುಗಳ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಈ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ. ಶಿವಾನಂದ ಸ್ವಾಮಿ ವಹಿಸಿದ್ದರು.
ಸಭೆಯಲ್ಲಿ ಗೃಹಜ್ಯೋತಿ ಯೋಜನೆಯ ಪರಿಣಾಮಕಾರಿ ಅನುಷ್ಠಾನ, ಯೋಜನೆಗೆ ಸಂಬಂಧಿಸಿದ ಸಾರ್ವಜನಿಕರ ಸಮಸ್ಯೆಗಳು, ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸುವ ಕ್ರಮಗಳು ಹಾಗೂ ಯೋಜನೆಯ ಪರಿಷ್ಕರಣೆಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಅಧಿಕಾರಿಗಳು ಮತ್ತು ಸಮಿತಿ ಸದಸ್ಯರೊಂದಿಗೆ ಸಮಗ್ರವಾಗಿ ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ಶೃಂಗೇರಿ ಕ್ಷೇತ್ರದ ಮೂರು ತಾಲ್ಲೂಕುಗಳ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು, ಮೆಸ್ಕಾಂ ಇಲಾಖೆಯ ಎಲ್ಲಾ ಅಧಿಕಾರಿಗಳು ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಸಭೆಯು ಯಶಸ್ವಿಯಾಗಿ ನೆರವೇರಿತು.
ಈ ಸಂದರ್ಭದಲ್ಲಿ ಭದ್ರ ಕಾಡ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಂಶುಮಂತ್, ಕೊಪ್ಪ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಓಣಿತೋಟ ರತ್ನಾಕರ್, ಶೃಂಗೇರಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಕೆ. ರಾಜು, ಎನ್.ಆರ್.ಪುರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷೆ ಚಂದ್ರಮ್ಮ, ಮೆಸ್ಕಾಂ ಇಲಾಖೆಯ ಸಿದ್ದೇಶ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.


Comments
Post a Comment