Posts

Showing posts from August, 2026

ನರಸಿಂಹರಾಜಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ,ಮನೆ ಕಳ್ಳತನ ಪ್ರಕರಣ ಭೇದಿಸಿ ₹11.30 ಲಕ್ಷ ಮೌಲ್ಯದ ಚಿನ್ನಾಭರಣ ವಶ!

Image
 ನರಸಿಂಹರಾಜಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ,ಮನೆ ಕಳ್ಳತನ ಪ್ರಕರಣ ಭೇದಿಸಿ ₹11.30 ಲಕ್ಷ ಮೌಲ್ಯದ ಚಿನ್ನಾಭರಣ ವಶ! , ನರಸಿಂಹರಾಜಪುರ: ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ಗಮನಿಸಿ ಮನೆಗೆ ನುಗ್ಗಿ ಚಿನ್ನಾಭರಣ ಕಳವು ಮಾಡಿದ್ದ ಪ್ರಕರಣವನ್ನು ನರಸಿಂಹರಾಜಪುರ ಪೊಲೀಸ್ ಠಾಣೆ ಪೊಲೀಸರು ಭೇದಿಸಿದ್ದಾರೆ. 2026ರ ಆಗಸ್ಟ್ 13ರಂದು ಮಧ್ಯಾಹ್ನ ಸುಮಾರು 12.30ರ ವೇಳೆಗೆ ಮನೆಯೊಂದರಲ್ಲಿ ಕಳ್ಳತನ ನಡೆದಿದ್ದು, ಮನೆಯ ಹಿಂಭಾಗದ ಬಾಗಿಲಿನಿಂದ ಒಳನುಗ್ಗಿದ ಕಳ್ಳರು 17 ಗ್ರಾಂ ತೂಕದ ಬಂಗಾರದ ತಾಳಿ ಸರ ಸೇರಿದಂತೆ ಸುಮಾರು ₹1.70 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಕಳವು ಮಾಡಿದ್ದರು. ಈ ಕುರಿತು ನರಸಿಂಹರಾಜಪುರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 79/2026ರಂತೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ವಿವಿಧ ಆಯಾಮಗಳಲ್ಲಿ ಮಾಹಿತಿ ಸಂಗ್ರಹಿಸಿ ಆರೋಪಿಯನ್ನು ಪತ್ತೆಹಚ್ಚಿದ್ದಾರೆ. ತನಿಖೆಯ ವೇಳೆ ಆರೋಪಿಯಿಂದ ಕಳವು ಮಾಡಲಾಗಿದ್ದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರ ಕಾರ್ಯಾಚರಣೆಯಲ್ಲಿ ಒಟ್ಟು 71 ಗ್ರಾಂ ಚಿನ್ನದ ಆಭರಣಗಳು ಹಾಗೂ ಕಳ್ಳತನಕ್ಕೆ ಬಳಸಿದ್ದ ಎನ್ನಲಾದ ಕೆಎ-18-ಇ-6362 ನೋಂದಣಿ ಸಂಖ್ಯೆಯ ಸ್ಕೂಟಿಯನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಚಿನ್ನಾಭರಣಗಳ ಒಟ್ಟು ಮೌಲ್ಯ ಸುಮಾರು ₹11.30 ಲಕ್ಷ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಪ್ರಕರಣವನ್ನು ನರಸಿಂಹರಾಜಪುರ ಪೊಲೀಸ್ ಠಾಣೆಯ ಅಧಿಕಾರಿಗಳ...

ಕೊಪ್ಪ ಪೊಲೀಸರ ಕಾರ್ಯಾಚರಣೆ: ಅಕ್ರಮವಾಗಿ ದನ ಸಾಗಾಟಕ್ಕೆ ಯತ್ನ, ಪ್ರಮುಖ ಆರೋಪಿ ಬಂಧನ,

Image
  ಕೊಪ್ಪ ಪೊಲೀಸರ ಕಾರ್ಯಾಚರಣೆ: ಅಕ್ರಮವಾಗಿ ದನ ಸಾಗಾಟಕ್ಕೆ ಯತ್ನ, ಪ್ರಮುಖ ಆರೋಪಿ ಬಂಧನ, ಕೊಪ್ಪ: ಗಡಿಕಲ್ ಚೆಕ್‌ಪೋಸ್ಟ್ ಬಳಿ ವಾಹನ ತಪಾಸಣೆ ವೇಳೆ ಪೊಲೀಸರನ್ನು ಕಂಡು ಕಾರು ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ದಿನಾಂಕ 06-07-2026ರಂದು ಬೆಳಗಿನ ಜಾವ ಸುಮಾರು 3 ಗಂಟೆಗೆ, ಕೊಪ್ಪ ಪೊಲೀಸ್ ಠಾಣೆಯ ಪಿಎಸ್‌ಐ ಮಧು ಅವರು ಸಿಬ್ಬಂದಿಗಳೊಂದಿಗೆ ಗಡಿಕಲ್ ಮುಖ್ಯ ರಸ್ತೆಯಲ್ಲಿ ರೌಂಡ್ಸ್ ಕರ್ತವ್ಯದಲ್ಲಿದ್ದರು. ಈ ವೇಳೆ ಗಡಿಕಲ್ ಚೆಕ್‌ಪೋಸ್ಟ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದಾಗ ತೀರ್ಥಹಳ್ಳಿ ಕಡೆಯಿಂದ ಬಂದ ಇನೋವಾ ಕಾರನ್ನು ನಿಲ್ಲಿಸುವಂತೆ ಸೂಚಿಸಲಾಗಿತ್ತು. ಆದರೆ ಕಾರಿನ ಚಾಲಕ ಕಾರನ್ನು ನಿಲ್ಲಿಸದೆ ಅತಿವೇಗವಾಗಿ ಚಲಾಯಿಸಿಕೊಂಡು ಹೋಗಿದ್ದಾನೆ. ಅನುಮಾನಗೊಂಡ ಪೊಲೀಸರು ಇಲಾಖಾ ಜೀಪಿನಲ್ಲಿ ಕಾರನ್ನು ಹಿಂಬಾಲಿಸಿದ್ದು, ಸುಮಾರು ಒಂದು ಕಿಲೋಮೀಟರ್ ದೂರದ ದೋರಗಲ್ ರಸ್ತೆ ಬಳಿ ಕಾರು ನಿಯಂತ್ರಣ ತಪ್ಪಿ ಒಂದು ಚಕ್ರ ಚರಂಡಿಗೆ ಬಿದ್ದಿದೆ. ಕಾರು ಪರಿಶೀಲಿಸಿದಾಗ ಅದರೊಳಗೆ ಒಂದು ಕೆಂಪು ಮಿಶ್ರಿತ ಕಂದು ಬಣ್ಣದ ದನ ಹಾಗೂ ಒಂದು ಕಪ್ಪು ಬಣ್ಣದ ದನವನ್ನು ಕಾಲು ಮತ್ತು ಕುತ್ತಿಗೆಗೆ ಹಗ್ಗ ಕಟ್ಟಿ, ಹಿಂಸಾತ್ಮಕವಾಗಿ ಸಾಗಿಸುತ್ತಿರುವುದು ಪತ್ತೆಯಾಗಿದೆ. ಕಾರಿನಲ್ಲಿದ್ದ ಮೂವರು ವ್ಯಕ್ತಿಗಳನ್ನು ಪೊಲೀಸರು ಹಿಡಿಯಲು ಪ್ರಯತ್ನಿಸಿದಾಗ, ಅವರು ಕತ್ತಲಿನಲ್ಲೇ ಪರಾರಿಯಾಗಿ...

ಕೊಪ್ಪ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಾಯಿಗಳ ಹಾವಳಿ: ಸಾರ್ವಜನಿಕರ ಸುರಕ್ಷತೆಗೆ ತಕ್ಷಣ ಕ್ರಮ ಅಗತ್ಯ,

Image
  ಕೊಪ್ಪ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಾಯಿಗಳ ಹಾವಳಿ: ಸಾರ್ವಜನಿಕರ ಸುರಕ್ಷತೆಗೆ ತಕ್ಷಣ ಕ್ರಮ ಅಗತ್ಯ, ಕೊಪ್ಪ: ಕೊಪ್ಪದಲ್ಲಿರುವ ತಾಯಿ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆ ಹಲವು ವರ್ಷಗಳಿಂದ ಉತ್ತಮ ಆರೋಗ್ಯ ಸೇವೆ ನೀಡುತ್ತಾ, ಹೆರಿಗೆ ಹಾಗೂ ಮಕ್ಕಳ ಚಿಕಿತ್ಸೆಯಲ್ಲಿ ಸಾರ್ವಜನಿಕರ ವಿಶ್ವಾಸ ಗಳಿಸಿರುವ ಪ್ರಮುಖ ಆಸ್ಪತ್ರೆಯಾಗಿದೆ. ಬಡವರು ಸೇರಿದಂತೆ ಎಲ್ಲ ವರ್ಗದ ಜನರಿಗೆ ಉಚಿತ ಹಾಗೂ ಉತ್ತಮ ವೈದ್ಯಕೀಯ ಸೇವೆ ದೊರೆಯುತ್ತಿರುವುದು ಶ್ಲಾಘನೀಯ. ಆದರೆ ಇತ್ತೀಚಿನ ದಿನಗಳಲ್ಲಿ ಆಸ್ಪತ್ರೆಯ ಆವರಣದೊಳಗೆ ನಾಯಿಗಳು ನಿರ್ಭಯವಾಗಿ ಪ್ರವೇಶಿಸಿ ಓಡಾಡುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ವಿಶೇಷವಾಗಿ ಗರ್ಭಿಣಿಯರು, ಬಾಣಂತಿಯರು, ನವಜಾತ ಶಿಶುಗಳು, ಮಕ್ಕಳು ಹಾಗೂ ಅನಾರೋಗ್ಯದಿಂದ ಚಿಕಿತ್ಸೆ ಪಡೆಯಲು ಬರುವ ರೋಗಿಗಳ ಸುರಕ್ಷತೆಯ ದೃಷ್ಟಿಯಿಂದ ಇದು ಗಂಭೀರ ವಿಷಯವಾಗಿದೆ. ಆಸ್ಪತ್ರೆಯೊಳಗೆ ಬಂದಿರುವ ನಾಯಿಯೊಂದು ಯಾರಿಗಾದರೂ ಕಚ್ಚಿದರೆ ಅಥವಾ ದಾಳಿ ಮಾಡಿದರೆ, ಅದರ ಹೊಣೆಗಾರಿಕೆ ಯಾರದ್ದು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡುತ್ತಿದೆ. ಈಗಾಗಲೇ ಅನಾರೋಗ್ಯದಿಂದ ಬಳಲುತ್ತಿರುವವರು ಚಿಕಿತ್ಸೆಗಾಗಿ ಬರುವ ಆಸ್ಪತ್ರೆಯೊಳಗೆ ಇಂತಹ ಪ್ರಾಣಿಗಳ ಹಾವಳಿ ಕಂಡುಬರುವುದು ಆರೋಗ್ಯ ಮತ್ತು ಸ್ವಚ್ಛತೆಯ ದೃಷ್ಟಿಯಿಂದಲೂ ಸೂಕ್ತವಲ್ಲ. ಆಸ್ಪತ್ರೆಯ ಆವರಣಕ್ಕೆ ನಾಯಿಗಳು ಹಾಗೂ ಇತರ ಪ್ರಾಣಿಗಳು ಪ್ರವೇಶಿಸದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್...

ಮೆಸ್ಕಾಂನಲ್ಲಿ 356 ಲೈನ್‌ಮ್ಯಾನ್ ಹುದ್ದೆ ಭರ್ತಿ: ಮಲೆನಾಡಿನ ಸಿಬ್ಬಂದಿ ಕೊರತೆ ನೀಗಿಸಲು ಒತ್ತಾಯ,

Image
  ಮೆಸ್ಕಾಂನಲ್ಲಿ 356 ಲೈನ್‌ಮ್ಯಾನ್ ಹುದ್ದೆ ಭರ್ತಿ: ಮಲೆನಾಡಿನ ಸಿಬ್ಬಂದಿ ಕೊರತೆ ನೀಗಿಸಲು ಒತ್ತಾಯ, ಕೊಪ್ಪ: ಮೆಸ್ಕಾಂ ಇಲಾಖೆಯಲ್ಲಿ ಹಲವು ವರ್ಷಗಳಿಂದ ಖಾಲಿ ಉಳಿದಿದ್ದ ಲೈನ್‌ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹ ಕ್ರಮವಾಗಿದೆ. ರಾಜ್ಯಾದ್ಯಂತ ಒಟ್ಟು 356 ಲೈನ್‌ಮ್ಯಾನ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಈ ತಿಂಗಳ ಅಂತ್ಯದೊಳಗೆ ಕರ್ತವ್ಯ ಆದೇಶ ನೀಡುವ ನಿರೀಕ್ಷೆಯಿದೆ. ಮಲೆನಾಡು ಭಾಗದಲ್ಲಿ ಮೆಸ್ಕಾಂ ಸಿಬ್ಬಂದಿ ಕೊರತೆಯಿಂದಾಗಿ ವಿದ್ಯುತ್ ನಿರ್ವಹಣೆ ಸೇರಿದಂತೆ ಹಲವು ಸೇವೆಗಳಲ್ಲಿ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನೇಮಕಾತಿ ಸಂದರ್ಭದಲ್ಲಿ ನಡೆಯುವ ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಮಲೆನಾಡು ಭಾಗಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಓಣಿತೋಟ ರತ್ನಾಕರ್ ಮನವಿ ಮಾಡಿದ್ದಾರೆ. ಕೊಪ್ಪ ಮೆಸ್ಕಾಂ ಡಿವಿಷನ್ ವ್ಯಾಪ್ತಿಯ ಕೊಪ್ಪ, ಶೃಂಗೇರಿ ಹಾಗೂ ಎನ್.ಆರ್.ಪುರ ತಾಲ್ಲೂಕುಗಳಲ್ಲಿ ಒಟ್ಟು 62 ಲೈನ್‌ಮ್ಯಾನ್ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳನ್ನು ಆದ್ಯತೆಯ ಮೇರೆಗೆ ಭರ್ತಿ ಮಾಡುವ ಮೂಲಕ ಮಲೆನಾಡಿನ ಸಿಬ್ಬಂದಿ ಕೊರತೆಯನ್ನು ನೀಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ವಿಶೇಷವಾಗಿ ಕೊಪ್ಪ ತಾಲ್ಲೂಕಿನಲ್ಲಿ 22 ಲೈನ್‌ಮ್ಯಾನ್ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳನ್ನ...

ಮಲೆನಾಡಿನ ಹೆಮ್ಮೆಯ ಪುತ್ರ ಶರಣ್ ಕೆ.ಪಿ.: ರಾಷ್ಟ್ರೀಯ ವಾಲಿಬಾಲ್‌ ಕ್ಷೇತ್ರದಲ್ಲಿ ಮಿಂಚುತ್ತಿರುವ ಪ್ರತಿಭೆ,

Image
  ಮಲೆನಾಡಿನ ಹೆಮ್ಮೆಯ ಪುತ್ರ ಶರಣ್ ಕೆ.ಪಿ.: ರಾಷ್ಟ್ರೀಯ ವಾಲಿಬಾಲ್‌ ಕ್ಷೇತ್ರದಲ್ಲಿ ಮಿಂಚುತ್ತಿರುವ ಪ್ರತಿಭೆ, ಕೊಪ್ಪ: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹುಲ್ಲುಮಕ್ಕಿ ಗ್ರಾಮದ ಪ್ರತಿಭಾವಂತ ವಾಲಿಬಾಲ್ ಆಟಗಾರ ಶರಣ್ ಕೆ.ಪಿ. ಅವರು ರಾಷ್ಟ್ರೀಯ ಮಟ್ಟದ ವಾಲಿಬಾಲ್ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡುತ್ತಿದ್ದು, ಇದೀಗ ಐದನೇ ಆವೃತ್ತಿಯ ಪ್ರೈಮ್ ವಾಲಿಬಾಲ್ ಲೀಗ್‌ನಲ್ಲಿ ಕೊಲ್ಕತ್ತಾ ಥಂಡರ್‌ಬೋಲ್ಟ್ಸ್ ತಂಡವನ್ನು ಪ್ರತಿನಿಧಿಸುತ್ತಿರುವುದು ಕೊಪ್ಪ ತಾಲೂಕು ಸೇರಿದಂತೆ ಇಡೀ ಜಿಲ್ಲೆಯ ಕ್ರೀಡಾಭಿಮಾನಿಗಳಿಗೆ ಹೆಮ್ಮೆಯ ಸಂಗತಿಯಾಗಿದೆ. ವಾಲಿಬಾಲ್ ಕ್ರೀಡೆಯಲ್ಲಿ ತಮ್ಮ ಅದ್ಭುತ ಪ್ರತಿಭೆ, ಅಚಲ ಪರಿಶ್ರಮ ಹಾಗೂ ಅಮೋಘ ಪ್ರದರ್ಶನದ ಮೂಲಕ ಗಮನ ಸೆಳೆದಿರುವ ಶರಣ್, ಯಶಸ್ವಿ ಅಟ್ಯಾಕರ್ ಆಟಗಾರರಾಗಿ ಹಲವು ಪಂದ್ಯಗಳಲ್ಲಿ ತಂಡದ ಗೆಲುವಿಗೆ ಪ್ರಮುಖ ಕೊಡುಗೆ ನೀಡಿದ್ದಾರೆ. ತಮ್ಮ ಆಕ್ರಮಣಕಾರಿ ಆಟದ ಮೂಲಕ ಪಂದ್ಯಗಳ ಫಲಿತಾಂಶವನ್ನೇ ಬದಲಿಸುವ ಸಾಮರ್ಥ್ಯ ಹೊಂದಿರುವ ಅವರು, ಕ್ರೀಡಾ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಶರಣ್ ಅವರು ಕೇರಳ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಅಲ್ಲದೆ, ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿಯೂ ಭಾಗವಹಿಸಿ ತಮ್ಮ ಪ್ರತಿಭೆಯನ್ನು ರಾಷ್ಟ್ರಮಟ್ಟದಲ್ಲಿ ಪ್ರದರ್ಶಿಸಿದ್ದಾರೆ. ಶರಣ್ ಕೆ.ಪಿ. ಅವರ ಪ್ರಮುಖ ಸಾಧನೆಗಳು • 2025 – ಕೇರಳ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿದರ...

ಸಣ್ಣಕೆರೆ ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಶಿಕ್ಷಕಿ ಭಾರತೀ ಅವರ ಸ್ವಯಂಪ್ರೇರಿತ ಸೇವೆ,

Image
  ಸಣ್ಣಕೆರೆ ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಶಿಕ್ಷಕಿ ಭಾರತೀ ಅವರ ಸ್ವಯಂಪ್ರೇರಿತ ಸೇವೆ, ಮಕ್ಕಳ ಶೈಕ್ಷಣಿಕ ಪ್ರಗತಿಗೆ ದಾನಿಗಳ ಸಹಕಾರ ಪಡೆದು ಮಾದರಿ ಕಾರ್ಯ ಕೊಪ್ಪ: ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರದ ಅನುದಾನದ ಜೊತೆಗೆ ಶಿಕ್ಷಕರು, ಪೋಷಕರು, ದಾನಿಗಳು ಹಾಗೂ ಸಾರ್ವಜನಿಕರ ಸಹಕಾರವೂ ಅಗತ್ಯ. ಈ ನಿಟ್ಟಿನಲ್ಲಿ ಕೊಪ್ಪ ಹರಂದೂರು ಪಂಚಾಯಿತಿ ವ್ಯಾಪ್ತಿಯ ಸಣ್ಣಕೆರೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಭಾರತೀ ಅವರು ಸ್ವಯಂಪ್ರೇರಣೆಯಿಂದ ಕಾರ್ಯನಿರ್ವಹಿಸುತ್ತಿದ್ದು, ಮಕ್ಕಳ ಶೈಕ್ಷಣಿಕ ಪ್ರಗತಿಗೆ ಅರ್ಥಪೂರ್ಣ ಕೊಡುಗೆ ನೀಡುತ್ತಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಕಲಿಯುವ ಮಕ್ಕಳಿಗೂ ಉತ್ತಮ ಗುಣಮಟ್ಟದ ಶಿಕ್ಷಣ, ಅಗತ್ಯ ಕಲಿಕಾ ಸಾಮಗ್ರಿಗಳು ಹಾಗೂ ಉತ್ತಮ ಶೈಕ್ಷಣಿಕ ವಾತಾವರಣ ದೊರೆಯಬೇಕು ಎಂಬ ಆಶಯದೊಂದಿಗೆ ಭಾರತೀ ಅವರು ಶಾಲೆಯ ವಿದ್ಯಾರ್ಥಿಗಳ ಅಗತ್ಯಗಳನ್ನು ಗುರುತಿಸಿ, ಊರಿನ ಪ್ರಮುಖರು ಹಾಗೂ ದಾನಿಗಳ ಸಹಕಾರವನ್ನು ಪಡೆದು ಪುಸ್ತಕಗಳು, ಕಲಿಕಾ ಸಾಮಗ್ರಿಗಳು ಸೇರಿದಂತೆ ಅಗತ್ಯ ವಸ್ತುಗಳನ್ನು ಮಕ್ಕಳಿಗೆ ತಲುಪಿಸುತ್ತಿದ್ದಾರೆ. ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸುವುದು, ಪುಸ್ತಕಗಳ ಮಹತ್ವ ತಿಳಿಸುವುದು, ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದು ಹಾಗೂ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಬೆಳೆಸುವುದು ಅವರ ಕಾರ್ಯದ ಪ್ರಮುಖ ಉದ್ದೇಶವಾಗಿದೆ. ಶಾಲೆಯ ಅಭಿವೃದ್ಧಿಯ...

QR ಸ್ಕ್ಯಾನ್ ಮಾಡಿ ದೂರು ನೀಡಿ! ಕಳಪೆ ಆಹಾರಕ್ಕೆ ಸರ್ಕಾರದ ಹೊಸ ಅಸ್ತ್ರ,

Image
  QR ಸ್ಕ್ಯಾನ್ ಮಾಡಿ ದೂರು ನೀಡಿ! ಕಳಪೆ ಆಹಾರಕ್ಕೆ ಸರ್ಕಾರದ ಹೊಸ ಅಸ್ತ್ರ, ಕಳಪೆ ಆಹಾರಕ್ಕೆ ಕಡಿವಾಣ: ಹೋಟೆಲ್‌, ಪಿಜಿ, ಮೆಡಿಕಲ್‌ ಸ್ಟೋರ್‌ಗಳಲ್ಲಿ ‘QR’ ಕಣ್ಗಾವಲು ಬೆಂಗಳೂರು: ಸಾರ್ವಜನಿಕರು ಆಹಾರ ಸೇವಿಸುವ ಹೋಟೆಲ್‌, ಪಿಜಿ, ಮೆಡಿಕಲ್‌ ಸ್ಟೋರ್‌ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಇನ್ಮುಂದೆ QR ಕೋಡ್‌ ಅಳವಡಿಸಿ, ಸಾರ್ವಜನಿಕರಿಂದ ಬರುವ ದೂರುಗಳಿಗೆ ತ್ವರಿತವಾಗಿ ಸ್ಪಂದಿಸುವ ವ್ಯವಸ್ಥೆ ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಆಹಾರದ ಗುಣಮಟ್ಟ, ಸೇವೆಯಲ್ಲಿನ ಸಮಸ್ಯೆ ಅಥವಾ ಇತರ ಯಾವುದೇ ಅಹಿತಕರ ಅನುಭವಗಳ ಕುರಿತು ಸಾರ್ವಜನಿಕರು QR ಕೋಡ್‌ ಸ್ಕ್ಯಾನ್ ಮಾಡುವ ಮೂಲಕ ನೇರವಾಗಿ ದೂರು ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತದೆ. ಸಾರ್ವಜನಿಕರಿಂದ ಸಲ್ಲಿಕೆಯಾಗುವ ದೂರುಗಳು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತ್ವರಿತವಾಗಿ ತಲುಪುವಂತೆ ವ್ಯವಸ್ಥೆ ರೂಪಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಆಹಾರ ಇಲಾಖೆ ಕೈಗೊಂಡಿರುವ ವಿವಿಧ ಕಾರ್ಯಾಚರಣೆಗಳ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಸಾರ್ವಜನಿಕರ ದೂರುಗಳಿಗೆ ಶೀಘ್ರವಾಗಿ ಸ್ಪಂದಿಸುವ ಉದ್ದೇಶದಿಂದ ಈ QR ಕೋಡ್‌ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ಹೇಳಿದರು. ಕರ್ನಾಟಕದಲ್ಲಿ ಮೊದಲ ಬಾರಿಗೆ ಈ ರೀತಿಯ ವ್ಯವಸ್ಥೆ ಅನುಷ್ಠಾನಗೊಳ್ಳಲಿದೆ ಎಂದು ಸಚಿವರು ಮಾಹಿತಿ ನೀಡಿದ್ದು, ಆಹಾರದ ಗುಣಮಟ್ಟ ಹಾಗೂ ಸಾರ್ವಜನಿಕರ ಸುರಕ್ಷ...

ಕೊಪ್ಪ ಗ್ರಾಮಾಂತರ ಗ್ರಾ.ಪಂ.ನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ,

Image
  ಕೊಪ್ಪ ಗ್ರಾಮಾಂತರ ಗ್ರಾ.ಪಂ.ನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ , ಕೊಪ್ಪ: ದೇಶದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೊಪ್ಪ ಗ್ರಾಮಾಂತರ ಗ್ರಾಮ ಪಂಚಾಯಿತಿಯಲ್ಲಿ ಶನಿವಾರ (ಆ.15) ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕೊಪ್ಪ ತಾಲ್ಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಓಣಿತೋಟ ರತ್ನಾಕರ್ ಅವರು ಧ್ವಜಾರೋಹಣ ನೆರವೇರಿಸಿ, ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಮಹನೀಯರನ್ನು ಸ್ಮರಿಸಿದರು. ಈ ಸಂದರ್ಭದಲ್ಲಿ ಕೊಪ್ಪ ಗ್ರಾಮಾಂತರ ಗ್ರಾಮ ಪಂಚಾಯಿತಿ ಪಿಡಿಒ ಅನಿಲ್, ಕಸಬಾ ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಪೂಜಾರಿ, ಗ್ಯಾರೆಂಟಿ ಸಮಿತಿ ಸದಸ್ಯ ನರೇಂದ್ರ ಶೆಟ್ಟಿ, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕೊಪ್ಪ ತಾಲ್ಲೂಕಿನಾದ್ಯಂತ ಸಂಭ್ರಮದಿಂದ ಸ್ವಾತಂತ್ರ್ಯೋತ್ಸವ ಆಚರಣೆ,

Image
  ಕೊಪ್ಪ ತಾಲ್ಲೂಕಿನಾದ್ಯಂತ ಸಂಭ್ರಮದಿಂದ ಸ್ವಾತಂತ್ರ್ಯೋತ್ಸವ ಆಚರಣೆ, ಕೊಪ್ಪ: ದೇಶದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೊಪ್ಪ ತಾಲ್ಲೂಕಿನಾದ್ಯಂತ ವಿವಿಧ ಜುಮ್ಮಾ ಮಸೀದಿಗಳು ಹಾಗೂ ಧಾರ್ಮಿಕ ಸಂಸ್ಥೆಗಳ ವತಿಯಿಂದ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಣ್ಣಕೆರೆಯ ಹಂಝತುಲ್ ಖರ್ರಾರ್ ಜುಮ್ಮಾ ಮಸೀದಿಯಲ್ಲಿ ಅಧ್ಯಕ್ಷರಾದ ಎಸ್.ಕೆ. ಅಬೂಬಕರ್, ಉಪಾಧ್ಯಕ್ಷರಾದ ಕೆ.ಎಂ. ಇಬ್ರಾಹಿಂ, ಕಾರ್ಯದರ್ಶಿ ಫಾರೂಕ್, ಸಹಕಾರ್ಯದರ್ಶಿ ಪಿ.ಕೆ. ಅನ್ಸಾರ್, ಖಜಾಂಜಿ ರಫೀಕ್, ಖತೀಬ್ ಶಾಹೀದ್ ಅಲ್ ಅಫ್ಲಿ ಸೇರಿದಂತೆ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಅದೇ ರೀತಿ ಕೊಪ್ಪದ ಮೊಹಿದ್ದೀನ್ ಜುಮ್ಮಾ ಮಸೀದಿಯ ಅಧ್ಯಕ್ಷ ಝೃನುದ್ದೀನ್ ಹಾಗೂ ಪದಾಧಿಕಾರಿಗಳು, ಸದಸ್ಯರು, ನಾರ್ವೆಯ ಹಿದಾಯತುಲ್ ಇಸ್ಲಾಂ ಜುಮ್ಮಾ ಮಸೀದಿಯ ಅಧ್ಯಕ್ಷ ಶರೀಫ್ ಸೇರಿದಂತೆ ವಿವಿಧ ಮಸೀದಿಗಳ ಅಧ್ಯಕ್ಷರು, ಪದಾಧಿಕಾರಿಗಳು, ಖತೀಬರು ಹಾಗೂ ಸದಸ್ಯರು ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಪಾಲ್ಗೊಂಡರು. ಹರಿಹರಪುರದ ನೂರುಲ್ ಹುದಾ ಶಾಫಿ ಜುಮ್ಮಾ ಮಸೀದಿ, ಕೊಪ್ಪದ ಜಾಮೀಯ ಜುಮ್ಮಾ ಮಸೀದಿ, ಮಸ್ಜಿದ್ ಎ ನೂರ್, ನೂರುಲ್ ಇಸ್ಲಾಂ ಅರಬ್ಬಿ ಮದ್ರಸ, ಭಾರತ್ ರೈಸ್ ಮಿಲ್, ಹಾಗೂ ರಾಘವೇಂದ್ರ ನಗರದ ನೂರುಲ್ ಆಲಂ ಜುಮ್ಮಾ ಮಸೀದಿಯ ಅಧ್ಯಕ್ಷರು, ಪದಾಧಿಕಾರಿಗಳು, ಖತೀಬರು ಹಾಗೂ ಸದಸ್ಯರು ಕೂಡ ಸ್ವಾತಂತ್ರ್ಯೋತ್ಸವ ಆಚರಣೆಯಲ್ಲಿ ಭಾಗವಹಿಸಿದರು. ದೇಶದ ಸ್ವಾತಂತ್ರ್ಯಕ್ಕಾಗ...

ಕೊಪ್ಪದಲ್ಲಿ ಉಚಿತ ಆರೋಗ್ಯ ಶಿಬಿರ: ಸಾರ್ವಜನಿಕರಿಗೆ ಆರೋಗ್ಯ ತಪಾಸಣೆ ಹಾಗೂ ಔಷಧ ವಿತರಣೆ,

Image
  ಕೊಪ್ಪದಲ್ಲಿ ಉಚಿತ ಆರೋಗ್ಯ ಶಿಬಿರ: ಸಾರ್ವಜನಿಕರಿಗೆ ಆರೋಗ್ಯ ತಪಾಸಣೆ ಹಾಗೂ ಔಷಧ ವಿತರಣೆ, ಕೊಪ್ಪ, ಆ.14: ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕೊಪ್ಪದಲ್ಲಿ ಆಗಸ್ಟ್ 15ರಂದು ಉಚಿತ ಆರೋಗ್ಯ ಶಿಬಿರವನ್ನು ಆಯೋಜಿಸಲಾಗಿದೆ. ಕೊಪ್ಪದ ಶ್ರೀ ಚೌಡೇಶ್ವರಿ ದೇವಸ್ಥಾನದ ಆವರಣದಲ್ಲಿ ಬೆಳಗ್ಗೆ 9.30ರಿಂದ ಶಿಬಿರ ನಡೆಯಲಿದ್ದು, ಶಂಕರ ಕಣ್ಣಿನ ಆಸ್ಪತ್ರೆ ಶಿವಮೊಗ್ಗ ಹಾಗೂ ಪ್ರಶಮನಿ ಆಸ್ಪತ್ರೆ ಕೊಪ್ಪ,ವೈದ್ಯರು ಸೇರಿದಂತೆ ತಜ್ಞ ವೈದ್ಯರು ಸಾರ್ವಜನಿಕರ ಆರೋಗ್ಯ ತಪಾಸಣೆ ನಡೆಸಲಿದ್ದಾರೆ. ಶಿಬಿರದಲ್ಲಿ ಕಣ್ಣಿನ ಪರೀಕ್ಷೆ ಮತ್ತು ಚಿಕಿತ್ಸೆ, ಕಿವಿ-ಮೂಗು-ಗಂಟಲು ತಪಾಸಣೆ, ಹಾಗೂ ರಕ್ತದೊತ್ತಡ ಪರೀಕ್ಷೆ, ಮಧುಮೇಹ ತಪಾಸಣೆ, ಮಕ್ಕಳ ಆರೋಗ್ಯ ತಪಾಸಣೆ, ಮಹಿಳೆಯರ ಆರೋಗ್ಯ ತಪಾಸಣೆ ಸೇರಿದಂತೆ ವಿವಿಧ ಆರೋಗ್ಯ ಸೇವೆಗಳನ್ನು ಉಚಿತವಾಗಿ ನೀಡಲಾಗುತ್ತದೆ. ಅಗತ್ಯವಿರುವವರಿಗೆ ವೈದ್ಯರ ಸಲಹೆಯಂತೆ ಔಷಧಿ ಹಾಗೂ ಇತರೆ ಆರೋಗ್ಯ ಸೇವೆಗಳನ್ನು ಸಹ ಒದಗಿಸಲಾಗುತ್ತದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ. ಈ ಆರೋಗ್ಯ ಶಿಬಿರವನ್ನು ನಮ್ಮೂರ ವಾರ್ತೆ ವಾರಪತ್ರಿಕೆ, ಕೊಪ್ಪ ವತಿಯಿಂದ ಆಯೋಜಿಸಲಾಗಿದ್ದು, ಸಂಪಾದಕರಾದ ಅರುಣ್ ಸಾಗರ್ ಅವರು ಶಿಬಿರದ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದ್ದಾರೆ. ದಿನಾಂಕ: 15-08-2026, ಶನಿವಾರ ಸಮಯ: ಬೆಳಗ್ಗೆ 9.30ರಿಂದ  ಸ್ಥಳ: ಶ್ರೀ ಚೌಡೇ...

ಕಾವೇರಿ ನೀರಿನ ವಿವಾದ: ಆ.13ರಂದು ಕರ್ನಾಟಕ ಬಂದ್ — 12 ಗಂಟೆ ರಾಜ್ಯಾದ್ಯಂತ ಪ್ರತಿಭಟನೆ

Image
  ಕಾವೇರಿ ನೀರಿನ ವಿವಾದ: ಆ.13ರಂದು ಕರ್ನಾಟಕ ಬಂದ್ — 12 ಗಂಟೆ ರಾಜ್ಯಾದ್ಯಂತ ಪ್ರತಿಭಟನೆ ಬೆಂಗಳೂರು/ಕರ್ನಾಟಕ, ಆ.12: ಕಾವೇರಿ ನೀರಿನ ವಿವಾದ ಮತ್ತೆ ತೀವ್ರಗೊಂಡಿದ್ದು, ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ಆದೇಶವನ್ನು ವಿರೋಧಿಸಿ ಆಗಸ್ಟ್ 13, ಗುರುವಾರ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳು ಬಂದ್‌ಗೆ ಕರೆ ನೀಡಿದ್ದು, ರಾಜ್ಯದಾದ್ಯಂತ ಹಲವು ಕನ್ನಡಪರ, ರೈತ, ಕಾರ್ಮಿಕ ಹಾಗೂ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಸುಮಾರು 1600ಕ್ಕೂ ಹೆಚ್ಚು ಕನ್ನಡ ಸಂಘಟನೆಗಳು ಹಾಗೂ ಇತರೆ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿರುವುದಾಗಿ ಸಂಘಟನೆಗಳು ತಿಳಿಸಿವೆ. CWMA ಆದೇಶದಂತೆ ಕರ್ನಾಟಕದಿಂದ ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರು ಹರಿಸಬೇಕಾಗಿದೆ. ರಾಜ್ಯದಲ್ಲಿಯೇ ನೀರಿನ ಕೊರತೆ ಎದುರಾಗಿರುವ ಸಂದರ್ಭದಲ್ಲಿ ಈ ಆದೇಶದಿಂದ ರೈತರಿಗೆ ಹಾಗೂ ರಾಜ್ಯದ ಜನತೆಗೆ ತೊಂದರೆಯಾಗಲಿದೆ ಎಂದು ಪ್ರತಿಭಟನಾಕಾರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆಗಸ್ಟ್ 13ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ 12 ಗಂಟೆಗಳ ಕಾಲ ಬಂದ್ ನಡೆಸಲು ಕರೆ ನೀಡಲಾಗಿದೆ. ಬೆಳಗಾವಿಯಿಂದ ಚಾಮರಾಜನಗರದವರೆಗೆ ರಾಜ್ಯಾದ್ಯಂತ ಬಂದ್‌ಗೆ ಬೆಂಬಲ ವ್ಯಕ್ತವಾಗುವ ನಿರೀಕ್ಷೆಯಿದೆ. ಕರ್ನಾಟಕ ಫಿಲ್ಮ್ ಚೇಂಬರ್, ಹೋಟೆಲ್ ಅಸೋಸಿಯೇಷನ್, ಲಾರ...

ಕೊಪ್ಪ,ಅಕ್ರಮವಾಗಿ ಜಾನುವಾರು ಸಾಗಾಟ ಆರೋಪ: ಇಬ್ಬರ ವಶ, ವಾಹನ ಜಪ್ತಿ,

Image
  ಅಕ್ರಮವಾಗಿ ಜಾನುವಾರು ಸಾಗಾಟ ಆರೋಪ: ಇಬ್ಬರ ವಶ, ವಾಹನ ಜಪ್ತಿ, ಕೊಪ್ಪ, ಆ.10: ಯಾವುದೇ ಪರವಾನಗಿ ಹಾಗೂ ಅಗತ್ಯ ದಾಖಲೆಗಳಿಲ್ಲದೆ ನಾಲ್ಕು ದನಗಳನ್ನು ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡುತ್ತಿದ್ದ ಆರೋಪದ ಮೇರೆಗೆ ಇಬ್ಬರನ್ನು ಕೊಪ್ಪ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಶೃಂಗೇರಿಯ ಉಮೇಶ್ ಎಂಬುವರಿಂದ ನಾಲ್ಕು ದನಗಳನ್ನು ವ್ಯಾಪಾರ ಮಾಡಿಕೊಂಡು, ಯಾವುದೇ ಪರವಾನಗಿ ಅಥವಾ ಸೂಕ್ತ ದಾಖಲೆಗಳಿಲ್ಲದೆ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಎನ್.ಆರ್.ಪುರ ತಾಲ್ಲೂಕಿನ ಶೆಟ್ಟಿಕೊಪ್ಪ ನಿವಾಸಿಗಳಾದ ಬದ್ರುದ್ದೀನ್ ಹಾಗೂ ಹನೀಪ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ದನಗಳನ್ನು ಸಾಗಾಟಕ್ಕೆ ಬಳಸಲಾಗುತ್ತಿದ್ದ ಸುಜುಕಿ ಸೂಪರ್ ಕ್ಯಾರಿ ವಾಹನ (KA-36 C-0100) ಅನ್ನು ಸಹ ಕೊಪ್ಪ ಪೊಲೀಸರು ವಶಕ್ಕೆ ಪಡೆದು ಜಪ್ತಿ ಮಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. 🖋️ ರೆಹಮಾನ್ ಸಣ್ಣಕೇರೆ  ವಾರ್ತಾ ಸಾರಥಿ ಡಿಜಿಟಲ್ ನ್ಯೂಸ್