ಮೆಸ್ಕಾಂನಲ್ಲಿ 356 ಲೈನ್ಮ್ಯಾನ್ ಹುದ್ದೆ ಭರ್ತಿ: ಮಲೆನಾಡಿನ ಸಿಬ್ಬಂದಿ ಕೊರತೆ ನೀಗಿಸಲು ಒತ್ತಾಯ,
ಮೆಸ್ಕಾಂನಲ್ಲಿ 356 ಲೈನ್ಮ್ಯಾನ್ ಹುದ್ದೆ ಭರ್ತಿ: ಮಲೆನಾಡಿನ ಸಿಬ್ಬಂದಿ ಕೊರತೆ ನೀಗಿಸಲು ಒತ್ತಾಯ,
ಕೊಪ್ಪ: ಮೆಸ್ಕಾಂ ಇಲಾಖೆಯಲ್ಲಿ ಹಲವು ವರ್ಷಗಳಿಂದ ಖಾಲಿ ಉಳಿದಿದ್ದ ಲೈನ್ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹ ಕ್ರಮವಾಗಿದೆ. ರಾಜ್ಯಾದ್ಯಂತ ಒಟ್ಟು 356 ಲೈನ್ಮ್ಯಾನ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಈ ತಿಂಗಳ ಅಂತ್ಯದೊಳಗೆ ಕರ್ತವ್ಯ ಆದೇಶ ನೀಡುವ ನಿರೀಕ್ಷೆಯಿದೆ.
ಮಲೆನಾಡು ಭಾಗದಲ್ಲಿ ಮೆಸ್ಕಾಂ ಸಿಬ್ಬಂದಿ ಕೊರತೆಯಿಂದಾಗಿ ವಿದ್ಯುತ್ ನಿರ್ವಹಣೆ ಸೇರಿದಂತೆ ಹಲವು ಸೇವೆಗಳಲ್ಲಿ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನೇಮಕಾತಿ ಸಂದರ್ಭದಲ್ಲಿ ನಡೆಯುವ ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಮಲೆನಾಡು ಭಾಗಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಓಣಿತೋಟ ರತ್ನಾಕರ್ ಮನವಿ ಮಾಡಿದ್ದಾರೆ.
ಕೊಪ್ಪ ಮೆಸ್ಕಾಂ ಡಿವಿಷನ್ ವ್ಯಾಪ್ತಿಯ ಕೊಪ್ಪ, ಶೃಂಗೇರಿ ಹಾಗೂ ಎನ್.ಆರ್.ಪುರ ತಾಲ್ಲೂಕುಗಳಲ್ಲಿ ಒಟ್ಟು 62 ಲೈನ್ಮ್ಯಾನ್ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳನ್ನು ಆದ್ಯತೆಯ ಮೇರೆಗೆ ಭರ್ತಿ ಮಾಡುವ ಮೂಲಕ ಮಲೆನಾಡಿನ ಸಿಬ್ಬಂದಿ ಕೊರತೆಯನ್ನು ನೀಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ವಿಶೇಷವಾಗಿ ಕೊಪ್ಪ ತಾಲ್ಲೂಕಿನಲ್ಲಿ 22 ಲೈನ್ಮ್ಯಾನ್ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಸಾರ್ವಜನಿಕರಿಗೆ ಸಮರ್ಪಕ ವಿದ್ಯುತ್ ಸೇವೆ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಮಲೆನಾಡಿನ ಹಿತದೃಷ್ಟಿಯಿಂದ ಕೊಪ್ಪ ಡಿವಿಷನ್ ವ್ಯಾಪ್ತಿಯಲ್ಲಿಯೇ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸುವಂತೆ ಮೆಸ್ಕಾಂ ಇಲಾಖೆಗೆ ಮನವಿ ಮಾಡಿರುವ ಓಣಿತೋಟ ರತ್ನಾಕರ್, 356 ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಂಡ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ, ಇಂಧನ ಸಚಿವರು ಹಾಗೂ ಶೃಂಗೇರಿ ಕ್ಷೇತ್ರದ ಶಾಸಕ ಮತ್ತು ನವೀಕರಿಸಬಹುದಾದ ಇಂಧನ ನಿಗಮದ ಅಧ್ಯಕ್ಷ ಟಿ.ಡಿ.ರಾಜೇಗೌಡರಿಗೆ ಅಭಿನಂದನೆಗಳನ್ನು ಸಲ್ಲಿಸಿದ ಓಣಿತೋಟ ರತ್ನಾಕರ್ ಅಧ್ಯಕ್ಷರು, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ, ಕೊಪ್ಪ ತಾಲ್ಲೂಕು.





Comments
Post a Comment