ಕೊಪ್ಪ ತಾಲ್ಲೂಕಿನಾದ್ಯಂತ ಸಂಭ್ರಮದಿಂದ ಸ್ವಾತಂತ್ರ್ಯೋತ್ಸವ ಆಚರಣೆ,


 ಕೊಪ್ಪ ತಾಲ್ಲೂಕಿನಾದ್ಯಂತ ಸಂಭ್ರಮದಿಂದ ಸ್ವಾತಂತ್ರ್ಯೋತ್ಸವ ಆಚರಣೆ,


ಕೊಪ್ಪ: ದೇಶದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೊಪ್ಪ ತಾಲ್ಲೂಕಿನಾದ್ಯಂತ ವಿವಿಧ ಜುಮ್ಮಾ ಮಸೀದಿಗಳು ಹಾಗೂ ಧಾರ್ಮಿಕ ಸಂಸ್ಥೆಗಳ ವತಿಯಿಂದ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.



ಸಣ್ಣಕೆರೆಯ ಹಂಝತುಲ್ ಖರ್ರಾರ್ ಜುಮ್ಮಾ ಮಸೀದಿಯಲ್ಲಿ ಅಧ್ಯಕ್ಷರಾದ ಎಸ್.ಕೆ. ಅಬೂಬಕರ್, ಉಪಾಧ್ಯಕ್ಷರಾದ ಕೆ.ಎಂ. ಇಬ್ರಾಹಿಂ, ಕಾರ್ಯದರ್ಶಿ ಫಾರೂಕ್, ಸಹಕಾರ್ಯದರ್ಶಿ ಪಿ.ಕೆ. ಅನ್ಸಾರ್, ಖಜಾಂಜಿ ರಫೀಕ್, ಖತೀಬ್ ಶಾಹೀದ್ ಅಲ್ ಅಫ್ಲಿ ಸೇರಿದಂತೆ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.



ಅದೇ ರೀತಿ ಕೊಪ್ಪದ ಮೊಹಿದ್ದೀನ್ ಜುಮ್ಮಾ ಮಸೀದಿಯ ಅಧ್ಯಕ್ಷ ಝೃನುದ್ದೀನ್ ಹಾಗೂ ಪದಾಧಿಕಾರಿಗಳು, ಸದಸ್ಯರು, ನಾರ್ವೆಯ ಹಿದಾಯತುಲ್ ಇಸ್ಲಾಂ ಜುಮ್ಮಾ ಮಸೀದಿಯ ಅಧ್ಯಕ್ಷ ಶರೀಫ್ ಸೇರಿದಂತೆ ವಿವಿಧ ಮಸೀದಿಗಳ ಅಧ್ಯಕ್ಷರು, ಪದಾಧಿಕಾರಿಗಳು, ಖತೀಬರು ಹಾಗೂ ಸದಸ್ಯರು ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಪಾಲ್ಗೊಂಡರು.



ಹರಿಹರಪುರದ ನೂರುಲ್ ಹುದಾ ಶಾಫಿ ಜುಮ್ಮಾ ಮಸೀದಿ, ಕೊಪ್ಪದ ಜಾಮೀಯ ಜುಮ್ಮಾ ಮಸೀದಿ, ಮಸ್ಜಿದ್ ಎ ನೂರ್, ನೂರುಲ್ ಇಸ್ಲಾಂ ಅರಬ್ಬಿ ಮದ್ರಸ, ಭಾರತ್ ರೈಸ್ ಮಿಲ್, ಹಾಗೂ ರಾಘವೇಂದ್ರ ನಗರದ ನೂರುಲ್ ಆಲಂ ಜುಮ್ಮಾ ಮಸೀದಿಯ ಅಧ್ಯಕ್ಷರು, ಪದಾಧಿಕಾರಿಗಳು, ಖತೀಬರು ಹಾಗೂ ಸದಸ್ಯರು ಕೂಡ ಸ್ವಾತಂತ್ರ್ಯೋತ್ಸವ ಆಚರಣೆಯಲ್ಲಿ ಭಾಗವಹಿಸಿದರು.



ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಮಹನೀಯರನ್ನು ಸ್ಮರಿಸುತ್ತಾ, ದೇಶದ ಏಕತೆ, ಶಾಂತಿ, ಸೌಹಾರ್ದತೆ ಹಾಗೂ ಸಹಬಾಳ್ವೆಯ ಸಂದೇಶವನ್ನು ಸಾರುವ ಮೂಲಕ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.





Comments

Popular posts from this blog

ಕೊಪ್ಪ ಬಸ್ ನಿಲ್ದಾಣದ ಸಂಚಾರ ಸಮಸ್ಯೆಗೆ ಶಾಶ್ವತ ಪರಿಹಾರ – ಕೆಡಿಪಿ ಸದಸ್ಯ ಮಹಮ್ಮದ್ ಸಾದಿಕ್ ಅವರ ಸಮಯೋಚಿತ ಕ್ರಮಕ್ಕೆ ಸಾರ್ವಜನಿಕರ ಮೆಚ್ಚುಗೆ,

ಆಪತ್ತಿನ ಕ್ಷಣದಲ್ಲಿ ಜೀವ ಉಳಿಸಿದ ಕೊಪ್ಪ ಅಗ್ನಿಶಾಮಕ ದಳ – ಸಮಯಪ್ರಜ್ಞೆಯ ಕಾರ್ಯಾಚರಣೆಗೆ ಸಾರ್ವಜನಿಕರ ಮೆಚ್ಚು

ಕೊಪ್ಪ,ಅಕ್ರಮವಾಗಿ ಜಾನುವಾರು ಸಾಗಾಟ ಆರೋಪ: ಇಬ್ಬರ ವಶ, ವಾಹನ ಜಪ್ತಿ,