ಮಲೆನಾಡಿನ ಹೆಮ್ಮೆಯ ಪುತ್ರ ಶರಣ್ ಕೆ.ಪಿ.: ರಾಷ್ಟ್ರೀಯ ವಾಲಿಬಾಲ್‌ ಕ್ಷೇತ್ರದಲ್ಲಿ ಮಿಂಚುತ್ತಿರುವ ಪ್ರತಿಭೆ,


 

ಮಲೆನಾಡಿನ ಹೆಮ್ಮೆಯ ಪುತ್ರ ಶರಣ್ ಕೆ.ಪಿ.: ರಾಷ್ಟ್ರೀಯ ವಾಲಿಬಾಲ್‌ ಕ್ಷೇತ್ರದಲ್ಲಿ ಮಿಂಚುತ್ತಿರುವ ಪ್ರತಿಭೆ,


ಕೊಪ್ಪ: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹುಲ್ಲುಮಕ್ಕಿ ಗ್ರಾಮದ ಪ್ರತಿಭಾವಂತ ವಾಲಿಬಾಲ್ ಆಟಗಾರ ಶರಣ್ ಕೆ.ಪಿ. ಅವರು ರಾಷ್ಟ್ರೀಯ ಮಟ್ಟದ ವಾಲಿಬಾಲ್ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡುತ್ತಿದ್ದು, ಇದೀಗ ಐದನೇ ಆವೃತ್ತಿಯ ಪ್ರೈಮ್ ವಾಲಿಬಾಲ್ ಲೀಗ್‌ನಲ್ಲಿ ಕೊಲ್ಕತ್ತಾ ಥಂಡರ್‌ಬೋಲ್ಟ್ಸ್ ತಂಡವನ್ನು ಪ್ರತಿನಿಧಿಸುತ್ತಿರುವುದು ಕೊಪ್ಪ ತಾಲೂಕು ಸೇರಿದಂತೆ ಇಡೀ ಜಿಲ್ಲೆಯ ಕ್ರೀಡಾಭಿಮಾನಿಗಳಿಗೆ ಹೆಮ್ಮೆಯ ಸಂಗತಿಯಾಗಿದೆ.



ವಾಲಿಬಾಲ್ ಕ್ರೀಡೆಯಲ್ಲಿ ತಮ್ಮ ಅದ್ಭುತ ಪ್ರತಿಭೆ, ಅಚಲ ಪರಿಶ್ರಮ ಹಾಗೂ ಅಮೋಘ ಪ್ರದರ್ಶನದ ಮೂಲಕ ಗಮನ ಸೆಳೆದಿರುವ ಶರಣ್, ಯಶಸ್ವಿ ಅಟ್ಯಾಕರ್ ಆಟಗಾರರಾಗಿ ಹಲವು ಪಂದ್ಯಗಳಲ್ಲಿ ತಂಡದ ಗೆಲುವಿಗೆ ಪ್ರಮುಖ ಕೊಡುಗೆ ನೀಡಿದ್ದಾರೆ. ತಮ್ಮ ಆಕ್ರಮಣಕಾರಿ ಆಟದ ಮೂಲಕ ಪಂದ್ಯಗಳ ಫಲಿತಾಂಶವನ್ನೇ ಬದಲಿಸುವ ಸಾಮರ್ಥ್ಯ ಹೊಂದಿರುವ ಅವರು, ಕ್ರೀಡಾ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.


ಶರಣ್ ಅವರು ಕೇರಳ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಅಲ್ಲದೆ, ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿಯೂ ಭಾಗವಹಿಸಿ ತಮ್ಮ ಪ್ರತಿಭೆಯನ್ನು ರಾಷ್ಟ್ರಮಟ್ಟದಲ್ಲಿ ಪ್ರದರ್ಶಿಸಿದ್ದಾರೆ.



ಶರಣ್ ಕೆ.ಪಿ. ಅವರ ಪ್ರಮುಖ ಸಾಧನೆಗಳು

• 2025 – ಕೇರಳ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿದರು

• 2025 – ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ಪ್ರತಿನಿಧಿಸಿದರು

• 2024 – ಕರ್ನಾಟಕ ರಾಜ್ಯ ದಸರಾ ಕ್ರೀಡಾಕೂಟದಲ್ಲಿ ಚಿನ್ನದ ಪದಕ

• 2022-23 – ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿ ಬೆಳ್ಳಿ ಹಾಗೂ ಕಂಚಿನ ಪದಕ


ಹುಲ್ಲುಮಕ್ಕಿ ಗ್ರಾಮದ ಪ್ರಕಾಶ್ ಕೆ ಜಿ ಹಾಗೂ ಉಮಾ ದಂಪತಿಯ ಪುತ್ರಿರಾದ ಇವರು ಸಾಮಾನ್ಯ ಕುಟುಂಬದಿಂದ ಬಂದು ಕ್ರೀಡಾ ಕ್ಷೇತ್ರದಲ್ಲಿ ಪರಿಶ್ರಮದ ಮೂಲಕ ರಾಷ್ಟ್ರಮಟ್ಟಕ್ಕೆ ಬೆಳೆದಿರುವ ಶರಣ್ ಕೆ.ಪಿ. ಅವರ ಸಾಧನೆ, ಗ್ರಾಮೀಣ ಭಾಗದ ಯುವ ಕ್ರೀಡಾಪಟುಗಳಿಗೆ ಸ್ಫೂರ್ತಿಯಾಗಿದೆ.



ಮುಂದಿನ ದಿನಗಳಲ್ಲಿ ಶರಣ್ ಅವರ ಕ್ರೀಡಾ ಪಯಣ ಇನ್ನಷ್ಟು ಯಶಸ್ಸಿನ ಶಿಖರಗಳನ್ನು ಏರಲಿ. ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರಕ್ಕೆ ಇನ್ನಷ್ಟು ಕೀರ್ತಿ ತಂದುಕೊಡಲಿ ಎಂಬುದು ಕ್ರೀಡಾಭಿಮಾನಿಗಳು ಹಾಗೂ ಸಾರ್ವಜನಿಕರ ಆಶಯವಾಗಿದೆ.


ಕೊಪ್ಪದ ಈ ಹೆಮ್ಮೆಯ ಪುತ್ರ ಶರಣ್ ಕೆ.ಪಿ. ಅವರಿಗೆ ಹೃತ್ಪೂರ್ವಕ ಶುಭಾಶಯಗಳು.




🖋️ ರೆಹಮಾನ್ ಸಣ್ಣಕೇರೆ 

ವಾರ್ತಾ ಸಾರಥಿ ಡಿಜಿಟಲ್ ನ್ಯೂಸ್ 

Comments

Popular posts from this blog

ಕೊಪ್ಪ ಬಸ್ ನಿಲ್ದಾಣದ ಸಂಚಾರ ಸಮಸ್ಯೆಗೆ ಶಾಶ್ವತ ಪರಿಹಾರ – ಕೆಡಿಪಿ ಸದಸ್ಯ ಮಹಮ್ಮದ್ ಸಾದಿಕ್ ಅವರ ಸಮಯೋಚಿತ ಕ್ರಮಕ್ಕೆ ಸಾರ್ವಜನಿಕರ ಮೆಚ್ಚುಗೆ,

ಆಪತ್ತಿನ ಕ್ಷಣದಲ್ಲಿ ಜೀವ ಉಳಿಸಿದ ಕೊಪ್ಪ ಅಗ್ನಿಶಾಮಕ ದಳ – ಸಮಯಪ್ರಜ್ಞೆಯ ಕಾರ್ಯಾಚರಣೆಗೆ ಸಾರ್ವಜನಿಕರ ಮೆಚ್ಚು

ಕೊಪ್ಪ,ಅಕ್ರಮವಾಗಿ ಜಾನುವಾರು ಸಾಗಾಟ ಆರೋಪ: ಇಬ್ಬರ ವಶ, ವಾಹನ ಜಪ್ತಿ,